ಮುಂದಿನ 3 ತಿಂಗಳಲ್ಲಿ ಕೋವಿಡ್ ಸೋಂಕು ಹೆಚ್ಚಳ: ಸಚಿವ ಸುಧಾಕರ್
Team Udayavani, Dec 25, 2022, 6:50 AM IST
ಹೊಸದಿಲ್ಲಿ/ಕೊರಟಗೆರೆ: ಮುಂದಿನ 2-3 ತಿಂಗಳಲ್ಲಿ ರಾಜ್ಯದಲ್ಲಿ ಕೊರೊನಾ ಪ್ರಮಾಣ ಹೆಚ್ಚಾಗಬಹುದು ಎಂದು ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ| ಕೆ. ಸುಧಾಕರ್ ಹೇಳಿದ್ದಾರೆ.
ಕೊರಟಗೆರೆಯಲ್ಲಿ ಮಾತನಾಡಿದ ಅವರು, ಅಮೆರಿಕ, ಚೀನ ಸಹಿತ 10 ದೇಶಗಳಲ್ಲಿ ವ್ಯಾಪಕವಾಗಿರುವ ಕೊರೊನಾದ ಹೊಸ ರೂಪಾಂತರಿ ಬಿಎಫ್.7 ಪ್ರಕರಣದಿಂದ ಹೀಗಾಗುವ ಸಾಧ್ಯತೆಗಳು ಇವೆ.
ಈ ಹಿನ್ನೆಲೆಯಲ್ಲಿ ಪ್ರತಿ ಯೊಬ್ಬರೂ ನಿರ್ಲಕ್ಷ್ಯ ಮಾಡದೆ ಬೂಸ್ಟರ್ ಡೋಸ್ ತೆಗೆದುಕೊಳ್ಳಬೇಕು. ನಮ್ಮ ರಕ್ಷಣೆಯನ್ನು ನಾವೇ ಮಾಡಿಕೊಳ್ಳಬೇಕು. ಪರಿಸ್ಥಿತಿಯನ್ನು ಗಮನಿಸಿಕೊಂಡು ಹೊಸ ವರ್ಷಾಚರಣೆಗೆ ಮಾರ್ಗಸೂಚಿ ಜಾರಿ ಬಗ್ಗೆ ನಿರ್ಧರಿಸಲಾಗುವುದು ಎಂದು ತಿಳಿಸಿದ್ದಾರೆ.
ಪ್ರಯಾಣಿಕರಿಗೆ ಪರೀಕ್ಷೆ
ಇನ್ನೊಂದೆಡೆ ಚೀನ, ಜಪಾನ್, ದಕ್ಷಿಣ ಕೊರಿಯಾ, ಸಿಂಗಾಪುರ ಮತ್ತು ಥಾಯ್ಲೆಂಡ್‌ನಿಂದ ಸಹಿತ ಐದು ದೇಶಗಳಲ್ಲಿ ಕೊರೊನಾ ಸೋಂಕು ಗಣನೀಯವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿಂದ ಆಗಮಿಸುವ ಪ್ರಯಾಣಿಕರಿಗೆ ಕಡ್ಡಾಯವಾಗಿ ಆರ್‌ಟಿ-ಪಿಸಿಆರ್ ಪರೀಕ್ಷೆ ನಡೆಸಬೇಕು ಎಂದು ಕೇಂದ್ರ ಸೂಚಿಸಿದೆ.
ಇದೇ ವೇಳೆ, ಪ್ರಸ್ತುತ ಸನ್ನಿವೇಶದಲ್ಲಿ ದೇಶದಲ್ಲಿ ಲಾಕ್‌ಡೌನ್ ಬೇಡ. ಇತರ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡರೆ ಸಾಕು ಎಂದು ತಜ್ಞರು ಪ್ರತಿಪಾದಿಸಿದ್ದಾರೆ.
ಏರಿಕೆಯಾಗಿಲ್ಲ
ದೇಶದಲ್ಲಿ ಶುಕ್ರವಾರದಿಂದ ಶನಿವಾರದ ಅವಧಿಯಲ್ಲಿ 201 ಹೊಸ ಪ್ರಕರಣಗಳು ದೃಢಪಟ್ಟಿದ್ದು, 3,397 ಸಕ್ರಿಯ ಪ್ರಕರಣಗಳಿವೆ. ಶನಿವಾರ ರಾಜ್ಯ ದಲ್ಲಿ 16 ಕೋವಿಡ್ ಪ್ರಕರಣ ವರದಿ ಯಾಗಿದ್ದು, ಏರಿಕೆ ಕಂಡು ಬಂದಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.