ಜಡ್ಜ್ ಗಳ ನಿವೃತ್ತಿ ವಯಸ್ಸು ಏರಿಕೆಗೆ ಅಸಮ್ಮತಿ
ಉತ್ತಮ ಕಾರ್ಯಕ್ಷಮತೆ ಇಲ್ಲದವರ ಸೇವಾವಧಿ ವಿಸ್ತರಣೆಯಾಗುವ ಬಗ್ಗೆ ಕಳವಳ
Team Udayavani, Dec 26, 2022, 7:25 AM IST
ನವದೆಹಲಿ: ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಜಡ್ಜ್ ಗಳ ನಿವೃತ್ತಿ ವಯಸ್ಸನ್ನು ಏರಿಕೆ ಮಾಡುವುದರಿಂದ ಉತ್ತಮ ಕಾರ್ಯಕ್ಷಮತೆ ಹೊಂದಿರದಂಥ ಕೆಲವು ಜಡ್ಜ್ಗಳ ಸೇವಾವಧಿಯನ್ನು ವಿಸ್ತರಣೆ ಮಾಡಿದಂತಾಗುತ್ತದೆ. ಅಲ್ಲದೇ, ಸರ್ಕಾರಿ ಉದ್ಯೋಗಿಗಳು ಕೂಡ ಇದೇ ಬೇಡಿಕೆಯನ್ನು ಮುಂದಿಡುವ ಸಾಧ್ಯತೆಗಳಿರುತ್ತದೆ ಎಂದು ಕೇಂದ್ರ ನ್ಯಾಯ ಇಲಾಖೆ ಸಂಸದೀಯ ಸಮಿತಿಗೆ ತಿಳಿಸಿದೆ.
ಜೊತೆಗೆ, ಉನ್ನತ ನ್ಯಾಯಾಂಗಕ್ಕೆ ನೇಮಕ ಮಾಡುವ ವೇಳೆ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಖಾತ್ರಿಪಡಿಸುವ ಕ್ರಮಗಳೊಂದಿಗೇ ನಿವೃತ್ತಿ ವಯಸ್ಸು ಏರಿಕೆಯನ್ನೂ ಪರಿಗಣಿಸಬಹುದು ಎಂದೂ ಹೇಳಿದೆ.
ಜುಲೈನಲ್ಲಿ ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು ಅವರು ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು ಏರಿಕೆ ಮಾಡುವ ಯಾವುದೇ ಪ್ರಸ್ತಾಪವಿಲ್ಲ ಎಂದು ಸಂಸತ್ನಲ್ಲೇ ಹೇಳಿದ್ದರು.
ದೇಶದಲ್ಲಿ ಪ್ರಸ್ತುತ ಸುಪ್ರೀಂ ಕೋರ್ಟ್ ಜಡ್ಜ್ಗಳ ನಿವೃತ್ತಿ ವಯಸ್ಸು 65 ಆಗಿದ್ದರೆ, 25 ಹೈಕೋರ್ಟ್ಗಳ ನ್ಯಾಯಮೂರ್ತಿಗಳ ನಿವೃತ್ತಿ ವಯಸ್ಸು 62 ಆಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
Supreme Court: ದಿಲ್ಲಿಯ 113 ಚೆಕ್ಪೋಸ್ಟ್ನಲ್ಲಿ ಪೊಲೀಸರನ್ನು ನೇಮಿಸಿ
Delhi Elections: ಆಪ್ನಿಂದ 7 ಉಚಿತ ಯೋಜನೆ ಘೋಷಣೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.