ನಿರ್ಣಯಕ್ಕೆ ಆಕ್ರೋಶ: ಕರ್ನಾಟಕದ ವಿರುದ್ಧ ಮಹಾರಾಷ್ಟ್ರದ ನಿರ್ಣಯಕ್ಕೆ ರಾಜ್ಯದಲ್ಲಿ ರೋಷಾಗ್ನಿ

865 ಮರಾಠಿ ಭಾಷಿಕ ಗ್ರಾಮಗಳ ಸೇರ್ಪಡೆ ಕುರಿತು ಮಹಾ ನಿರ್ಣಯ

Team Udayavani, Dec 28, 2022, 7:00 AM IST

ನಿರ್ಣಯಕ್ಕೆ ಆಕ್ರೋಶ: ಕರ್ನಾಟಕದ ವಿರುದ್ಧ ಮಹಾರಾಷ್ಟ್ರದ ನಿರ್ಣಯಕ್ಕೆ ರಾಜ್ಯದಲ್ಲಿ ರೋಷಾಗ್ನಿ

ನಾಗ್ಪುರ/ಬೆಳಗಾವಿ: ಬೆಳಗಾವಿ ಗಡಿ ವಿವಾದದ ವಿಚಾರದಲ್ಲಿ ನಿರಂತರವಾಗಿ ಕನ್ನಡಿಗರನ್ನು ಕೆರಳಿಸುತ್ತಿರುವ ಮಹಾರಾಷ್ಟ್ರ, ಈಗ “ನಿರ್ಣಯ’ದ ಮೂಲಕ ಕರ್ನಾಟಕವನ್ನು ಕೆಣಕಿದೆ.

ಮಂಗಳವಾರ ಮಹಾರಾಷ್ಟ್ರ ವಿಧಾನಸಭೆ ಹಾಗೂ ವಿಧಾನ ಪರಿಷತ್‌ನಲ್ಲಿ ಕರ್ನಾಟಕದ ವಿರುದ್ಧ ನಿರ್ಣಯಗಳನ್ನು ಅಂಗೀಕರಿಸಲಾಗಿದ್ದು, ಇದಕ್ಕೆ ರಾಜ್ಯದಲ್ಲಿ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಜತೆಗೆ, ಗಡಿ ತಂಟೆ ಕುರಿತು ಮಹಾರಾಷ್ಟ್ರದ ವರ್ತನೆ ವಿರುದ್ಧ ರಾಜ್ಯ ವಿಧಾನ ಪರಿಷತ್‌ನಲ್ಲಿ ಸರ್ವಾನುಮತ ನಿರ್ಣಯವನ್ನು ಕೈಗೊಳ್ಳಲಾಗಿದೆ.

ರಾಜ್ಯದ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಕರ್ನಾಟಕ ಸರಕಾರವು ಇತ್ತೀಚೆಗೆ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಿತ್ತು. ಇದಕ್ಕೆ ಪ್ರತಿಯಾಗಿ ಎನ್ನುವಂತೆ ಉದ್ಧಟತನ ಮೆರೆದಿರುವ ಮಹಾರಾಷ್ಟ್ರ ಸರಕಾರವು ಮಂಗಳವಾರ, “ಕರ್ನಾಟಕದ 865 ಮರಾಠಿ ಭಾಷಿಕ ಗ್ರಾಮಗಳನ್ನು “ಕಾನೂನಾತ್ಮಕ’ವಾಗಿ ಮಹಾರಾಷ್ಟ್ರದೊಂದಿಗೆ ವಿಲೀನಗೊಳಿಸುವ ನಿರ್ಣಯ’ ವನ್ನು ಸರ್ವಾನುಮತ ದಿಂದ ಅಂಗೀಕರಿಸಿತು. ವಿಧಾನಪರಿಷತ್‌ನಲ್ಲೂ ಅನು ಮೋದಿಸಲಾಯಿತು. ಜತೆಗೆ ಗಡಿ ಭಾಗದಲ್ಲಿ ವಾಸಿಸುವ ಮರಾಠಿ ಭಾಷಿಕರ ಸುರಕ್ಷತೆಗೆ ಕರ್ನಾಟಕ ಸರಕಾರ ಖಾತ್ರಿ ನೀಡುವಂತೆ ಕೇಂದ್ರ ಸರಕಾರ ನಿರ್ದೇಶಿಸಬೇಕು ಎಂದೂ ಆಗ್ರಹಿಸ ಲಾಗಿದೆ. ಎರಡೂ ಕಡೆ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರೇ ನಿರ್ಣಯವನ್ನು ಮಂಡಿಸಿದ್ದಾರೆ.

“ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್‌, ಭಾಲ್ಕಿ ನಗರಗಳು ಮತ್ತು 865 ಹಳ್ಳಿಗಳ ಮರಾಠಿ ಭಾಷಿಕರೊಂದಿಗೆ ಮಹಾರಾಷ್ಟ್ರ ಸರಕಾರ ನಿಲ್ಲುತ್ತದೆ. ಸುಪ್ರೀಂಕೋರ್ಟ್‌ನಲ್ಲಿ ಕಾನೂನಾತ್ಮಕವಾಗಿ ಹೋರಾ ಡುತ್ತೇವೆ. ಕರ್ನಾಟಕವು ಮರಾಠಿ ಭಾಷಿಕರ ವಿರುದ್ಧ ದಮನಕಾರಿ ನೀತಿಯನ್ನು ಅನುಸರಿಸುತ್ತಿದೆ’ ಎಂದು ಹೇಳಲಾಗಿದೆ. ಇತ್ತೀಚೆಗೆ ಕೇಂದ್ರ ಸಚಿವ ಅಮಿತ್‌ ಶಾ ನೀಡಿರುವ ಸೂಚನೆಯನ್ನು ಪಾಲಿಸುವಂತೆ ಕರ್ನಾಟಕ ಸರಕಾರಕ್ಕೆ ಕೇಂದ್ರ ಸರಕಾರ ಸೂಚಿಸುವಂತೆಯೂ ಒತ್ತಾಯಿಸಲಾಗಿದೆ.

ಪರಿಷತ್‌ನಲ್ಲಿ ಮಾರ್ದನಿ
ಅತ್ತ ಮಹಾರಾಷ್ಟ್ರ ಸರಕಾರ ನಿರ್ಣಯ ಅಂಗೀ ಕರಿಸುತ್ತಿದ್ದಂತೆ, ಇತ್ತ ಬೆಳಗಾವಿಯ ವಿಧಾನಮಂಡಲ ಕಲಾಪದಡಿ ವಿಧಾನ ಪರಿ ಷತ್‌ನಲ್ಲಿ ಪ್ರಸ್ತಾವಗೊಂಡಿತು. ಪಕ್ಷ ಭೇದ ಮರೆತು ಮಹಾರಾಷ್ಟ್ರದ ವರ್ತನೆ, ನಿಲುವನ್ನು ಖಂಡಿಸ ಲಾಯಿತು. ಮುಖ್ಯಮಂತ್ರಿಗಳ ಪರವಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಖಂಡನ ನಿರ್ಣಯ ಮಂಡಿಸಿದರು. ನಮ್ಮ ನೆಲ, ಜಲ, ಭಾಷೆ ಹಾಗೂ ಕನ್ನಡಿಗರ ಹಿತಾಸಕ್ತಿ ವಿಷಯದಲ್ಲಿ ರಾಜಿ ಇಲ್ಲ. ಜನರ ಭಾವನೆಗೆ ಧಕ್ಕೆ ಬಂದಾಗ ಒಗ್ಗಟ್ಟಿನ ಧ್ವನಿ ಮೊಳಗಿಸಲು ನಾವೆಲ್ಲ ಬದ್ಧ ಎಂದರು.
ಇದಕ್ಕೂ ಮೊದಲು ಚರ್ಚೆಯಲ್ಲಿ ಪಾಲ್ಗೊಂಡ ಆಡಳಿತ- ವಿಪಕ್ಷಗಳ ಹಲವು ಸದಸ್ಯರು ಮಹಾ ರಾಷ್ಟ್ರ, ಎಂಇಎಸ್‌, ಶಿವಸೇನೆಯ ವರ್ತನೆ ಯನ್ನು ಖಂಡಿಸಿದರು. ಮಹಾರಾಷ್ಟ್ರದವರು ತಮ್ಮ ರಾಜಕೀಯ ಅನುಕೂಲಕ್ಕಾಗಿ ಪದೇ ಪದೆ ತಂಟೆ ತೆಗೆಯುತ್ತಿದ್ದು, ಖಂಡಿಸೋಣ ಎಂದು ಅಭಿಪ್ರಾಯ ಪಟ್ಟರು. ಎಂಇಎಸ್‌ ನಿಷೇಧಕ್ಕೂ ಒತ್ತಾಯಿಸಿದರು.

ಸೋಮವಾರವಷ್ಟೇ ಮಹಾರಾಷ್ಟ್ರ ವಿಧಾನಸಭೆಯಲ್ಲಿ ಬೆಳಗಾವಿ, ನಿಪ್ಪಾಣಿ, ಕಾರವಾರಗಳನ್ನು ಕೇಂದ್ರಾ ಡಳಿತ ಪ್ರದೇಶಗಳೆಂದು ಘೋಷಿಸುವಂತೆ ಶಿವ ಸೇನೆ ನಾಯಕ ಉದ್ಧವ್‌ ಠಾಕ್ರೆ ಒತ್ತಾಯಿಸಿದ್ದರು. ಡಿಸಿಎಂ ದೇವೇಂದ್ರ ಫ‌ಡ್ನವೀಸ್‌ ಕೂಡ ರಾಜ್ಯದ ಒಂದು ಇಂಚು ಜಮೀನನ್ನೂ ಬಿಟ್ಟುಕೊಡುವುದಿಲ್ಲ ಎಂದು ಹೇಳಿದ್ದರು. ಈ ಎಲ್ಲ ಬೆಳವಣಿಗೆಗಳು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರ ಮಧ್ಯಪ್ರವೇಶದ ಹೊರತಾಗಿಯೂ ಸಂಘರ್ಷ ಮತ್ತಷ್ಟು ಉಲ್ಬಣಿಸಲು ಕಾರಣವಾಗುವ ಸಂಭವವಿದೆ.

ಮಹಾರಾಷ್ಟ್ರ ನಿರ್ಣಯಕ್ಕೆ ಬೆಲೆ ಇಲ್ಲ : ಮುಖ್ಯಮಂತ್ರಿ
ಮಹಾರಾಷ್ಟ್ರದ ಖಂಡನ ನಿರ್ಣಯಕ್ಕೆ ಯಾವುದೇ ಬೆಲೆ ಇಲ್ಲ. ಸಂವಿಧಾನದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಮುಖ್ಯಮಂತ್ರಿ ಬಸವ ರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ಮಹಾರಾಷ್ಟ್ರ ಸರಕಾರ ಒಕ್ಕೂಟ ವ್ಯವ ಸ್ಥೆಗೆ ಧಕ್ಕೆ ತರುವ ಕೆಲಸ ಮಾಡಿದೆ. ಎರಡೂ ಕಡೆ ಜನ ನೆಮ್ಮದಿಯಿಂದ ಇದ್ದಾರೆ. ರಾಜಕೀಯಕ್ಕಾಗಿ ಹೇಳಿಕೆ ನೀಡುವ, ನಿರ್ಣ ಯ ಮಾಡುವ ಚಟ ಅವರದ್ದು ಎಂದರು.

ಗಡಿಯಿಂದ ಆಚೆಗಿನ ಕನ್ನಡಿಗರ ರಕ್ಷಣೆಯ ಬದ್ಧತೆ ನಮಗಿದೆ. ಸುಪ್ರೀಂಕೋರ್ಟ್‌ನಲ್ಲಿ ಪ್ರಕರಣ ವಿದೆ. ನಾವು ನಮ್ಮ ನೆಲ ಬಿಡುವುದಿಲ್ಲ ಎಂದು ನಿರ್ಣಯ ಅಂಗೀಕರಿಸಿದ್ದೇವೆ. ಅವರು ಕರ್ನಾಟಕದ ನೆಲ ಪಡೆದುಕೊಳ್ಳುತ್ತೇವೆ ಎಂದು ಅಂಗೀ  ಕರಿಸಿ ದ್ದಾರೆ. ನಮ್ಮ ನಿರ್ಣಯಕ್ಕೂ ಅವ ರಿಗೂ ವ್ಯತ್ಯಾಸ ವಿದೆ. ಸುಪ್ರೀಂ ಕೋರ್ಟ್‌ನಲ್ಲಿ ನಮಗೆ ನ್ಯಾಯ ಸಿಗಲಿದೆ ಎಂದು ಹೇಳಿದರು.

ರಾಜಕೀಯ ಉದ್ದೇಶಕ್ಕಾಗಿ ಮಹಾರಾಷ್ಟ್ರ ಈ ನಿರ್ಣಯ ಕೈಗೊಂಡಿದೆ. ಕನ್ನಡದ ಹಳ್ಳಿಗಳನ್ನು ಕೇಳುವ ಯಾವುದೇ ನೈತಿಕ ಹಕ್ಕು ಅದಕ್ಕಿಲ್ಲ. ಕರ್ನಾಟಕ ಮತ್ತು ಮಹಾರಾಷ್ಟ್ರ ಗಡಿ ವಿಚಾರವಾಗಿ ಮಹಾಜನ ವರದಿಯೇ ಅಂತಿಮ.
– ಸಿದ್ದರಾಮಯ್ಯ, ವಿಪಕ್ಷ ನಾಯಕ

ಕೇಂದ್ರ, ಮಹಾರಾಷ್ಟ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರವಿದೆ. ಚುನಾ ವಣೆ ಸಮಯ ದಲ್ಲಿ ಅಶಾಂತಿ ಮೂಡಿಸುವ ಬಿಜೆಪಿಯ ನಾಟಕವಿದು. ನಮ್ಮ ಒಂದೂ ಹಳ್ಳಿಯನ್ನೂ ನೀಡುವುದಿಲ್ಲ. ಅವರ ಒಂದು ಹಳ್ಳಿಯೂ ನಮಗೆ ಬೇಡ.
– ಡಿ.ಕೆ. ಶಿವಕುಮಾರ್‌, ಕೆಪಿಸಿಸಿ ಅಧ್ಯಕ್ಷ

ಚಾರಿತ್ರಿಕವಾಗಿ ಕನ್ನಡಿಗರು ಹಾಗೂ ಮರಾಠ ರಿಗೆ ಅವಿನಾಭಾವ ಸಂಬಂಧವಿದೆ. ಎರಡೂ ರಾಜ್ಯಗಳ ಮಧ್ಯೆ ಸಾಂಸ್ಕೃತಿಕವಾಗಿ ಎಲ್ಲ ಸರಿ ಇದ್ದು, ರಾಜಕೀಯವಾಗಿ ದ್ವೇಷ ಸರಿಯಲ್ಲ.
– ಮಲ್ಲೇಪುರಂ ಜಿ. ವೆಂಕಟೇಶ್‌, ಹಿರಿಯ ಸಾಹಿತಿ

ಬೇರೆ ಬೇರೆ ಭಾಷಾವಾರು ಪ್ರಾಂತ್ಯಗಳು ಪರಸ್ಪರ ಹೊಂದಿಕೊಂಡು ಅಭಿವೃದ್ಧಿ ಹೊಂದುವ-ಅಖಂಡ ರಾಷ್ಟ್ರದ ಕಲ್ಪನೆ ನಮ್ಮದು. ದೇಶದ ಏಕತೆಗೆ ಭಂಗ ತರುವಂಥ ಪ್ರವೃತ್ತಿ ವಿರುದ್ಧ ಕೇಂದ್ರ ಸರಕಾರ ಬಿಗಿ ನಿಲುವನ್ನು ತಳೆಯಬೇಕು.
– ಎಚ್‌. ಎಸ್‌. ವೆಂಕಟೇಶಮೂರ್ತಿ, ಸಾಹಿತಿ

ಟಾಪ್ ನ್ಯೂಸ್

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್

ಕಡಬ, ಬೆಳ್ತಂಗಡಿ ಸೇರಿದಂತೆ ಅಕ್ರಮ ಮದ್ಯಮಾರಾಟದ ವಿರುದ್ದ ವಿಶೇಷ ಕಾರ್ಯಾಚರಣೆ: ಪ್ರಕರಣ ದಾಖಲು

ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Sambhal Violence: ಮೃತರ ಸಂಖ್ಯೆ ನಾಲ್ಕಕ್ಕೆ, ಇಂಟರ್ನೆಟ್ ಸ್ಥಗಿತ, ನಿಷೇಧಾಜ್ಞೆ ಜಾರಿ

Parliament winter session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

Parliament Winter Session: ಇಂದಿನಿಂದ ಸಂಸತ್‌ ಅಧಿವೇಶನ.. ವಕ್ಫ್ ಸೇರಿ 16 ಮಸೂದೆ ಮಂಡನೆ?

ಗೂಗಲ್ ಮ್ಯಾಪ್ ನಂಬಿ ನಿರ್ಮಾಣ ಹಂತದ ಸೇತುವೆಯಲ್ಲಿ ಚಲಿಸಿ ನದಿಗೆ ಬಿದ್ದ ಕಾರು, ಮೂವರು ಮೃತ್ಯು

ಗೂಗಲ್ ಮ್ಯಾಪ್ ನಂಬಿ ಸೇತುವೆಯಿಂದ ನದಿಗೆ ಬಿದ್ದ ಕಾರು, ಮದುವೆಗೆ ಹೊರಟಿದ್ದ ಮೂವರು ಮೃತ್ಯು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

India: ಅರ್ಮೇನಿಯಾಗೆ ದೇಶಿ ನಿರ್ಮಿತ ಪಿನಾಕಾ ರಾಕೆಟ್‌ ಪೂರೈಕೆ ಶುರು

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Bidar: Waqf should be removed from India : Yatnal

‌Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Sambhal Case Follow Up:ಹೊರಗಿನವರಿಗೆ ಸಂಭಾಲ್‌ ಪ್ರವೇಶಕ್ಕೆ ನಿರ್ಬಂಧ,ಜಲ್ಲಿ ಮಾರಾಟ ನಿಷೇಧ

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್‌ ಫಿಕ್ಸ್

BGT 2024: team India won the test in Perth

BGT 2024: ಪರ್ತ್‌ ನಲ್ಲಿ ಪಲ್ಟಿ ಹೊಡೆದ ಆಸೀಸ್:‌ ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.