ಕಾಮಗಾರಿ ಆದೇಶದಲ್ಲಿ ಶಾಸಕರ ಹೆಸರಿಗೆ ಅವಕಾಶವಿಲ್ಲ
ಗೆದ್ದ ಶಾಸಕರನ್ನು ಕಡೆಗಣಿಸಿ ಸೋತ ಅಭ್ಯರ್ಥಿಗಳಿಗೆ ಅನುದಾನ ; ಶಾಸಕ ರಾಜೇಗೌಡ ಹಕ್ಕುಚ್ಯುತಿ ಪ್ರತಿಧ್ವನಿ
Team Udayavani, Dec 28, 2022, 6:55 AM IST
ಬೆಳಗಾವಿ: ಇನ್ನು ಮುಂದೆ ಸರಕಾರದಿಂದ ಕೈಗೊಳ್ಳುವ ಯಾವುದೇ ಕಾಮಗಾರಿಯ ಹೆಸರನ್ನು ಮಾತ್ರ ಸರಕಾರದ ಆದೇಶದಲ್ಲಿ ನಮೂದಿಸಲಾಗು ವುದು. ಅದು ಬಿಟ್ಟು ಶಾಸಕರು ಸೇರಿ ಯಾವುದೇ ವ್ಯಕ್ತಿಯ ಹೆಸರನ್ನು ಉಲ್ಲೇಖಿಸಲಾಗುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ ಸೋತ ಅಭ್ಯರ್ಥಿಗೆ ಅನುದಾನ ಬಿಡುಗಡೆ ಮಾಡುವ ಮೂಲಕ ತಮ್ಮ ಹಕ್ಕುಚ್ಯುತಿ ಆಗಿದೆ ಎಂದು ಆರೋಪಿಸಿ ಸ್ಥಳೀಯ ಶಾಸಕ ಟಿ.ಡಿ. ರಾಜೇಗೌಡ ಅವರು ಸದನದ ಬಾವಿಗಿಳಿದು ಉಪವಾಸ ಧರಣಿ ನಡೆಸುತ್ತಿದ್ದರಿಂದ ಮಧ್ಯಪ್ರವೇಶ ಮಾಡಿದ ಮುಖ್ಯಮಂತ್ರಿ ಈ ಭರವಸೆ ನೀಡಿದರು.
ಮುಖ್ಯಮಂತ್ರಿಯವರ ಹೇಳಿಕೆ ಅನಂತರ ಬೆಳಗ್ಗೆಯಿಂದ ನಡೆಸುತ್ತಿದ್ದ ಧರಣಿಯನ್ನು ಶಾಸಕ ರಾಜೇಗೌಡ ಹಾಗೂ ಡಾ| ರಂಗನಾಥ್ ವಾಪಸ್ ಪಡೆದುಕೊಂಡರು. ಈ ಮೂಲಕ ಶಾಸಕರ ಹಕ್ಕುಚ್ಯುತಿ ವಿಚಾರ ಸುಖಾಂತ್ಯ ಕಂಡಿತು.
ಇದಕ್ಕೂ ಮೊದಲು ಬೆಳಗ್ಗೆ ಸದನದಲ್ಲಿ ಈ ವಿಷಯ ಪ್ರಸ್ತಾವಿಸಿದ ರಾಜೇಗೌಡ, ಶೃಂಗೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಎಂದು ಸೋತ ಅಭ್ಯರ್ಥಿ ಜೀವರಾಜ್ ಹೆಸರನ್ನು ಸರಕಾರದ ಆದೇಶದಲ್ಲಿ ನಮೂದಿಸಲಾಗಿದೆ. ಇದರಿಂದ ನನ್ನ ಹಕ್ಕುಚ್ಯುತಿ ಆಗಿದೆ. ನಾನು ಶಾಸಕ ಹೌದೋ, ಅಲ್ಲವೋ ಅನ್ನುವುದು ತೀರ್ಮಾನ ಆಗಿಲ್ಲ. ನನಗಾಗಿರುವ ಅನ್ಯಾಯ ಸರಿಪಡಿಸದಿದ್ದರೆ ಸದನದಲ್ಲಿ ಉಪವಾಸ ಕುಳಿತುಕೊಳ್ಳುತ್ತೇನೆಂದು ಆಕ್ರೋಶ ವ್ಯಕ್ತಪಡಿಸಿದರು. ಅಲ್ಲದೇ ನ್ಯಾಯ ಕೊಡಬೇಕೆಂದು ಧರಣಿ ನಡೆಸಿದರು. ಇದಕ್ಕೆ ಶಾಸಕ ರಂಗನಾಥ್ ಸಾಥ್ ನೀಡಿದ್ದರು.
ಪ್ರಜಾಪ್ರಭುತ್ವ ವಿರೋಧಿ ನಡೆ
ಹಕ್ಕುಚ್ಯುತಿ ಪ್ರಸ್ತಾಪಕ್ಕೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬೆಂಬಲಿಸಿ, ಇದೊಂದು ಪ್ರಜಾಪ್ರಭುತ್ವ ವಿರೋಧಿ ನಡೆ ಹಾಗೂ ಕೆಟ್ಟ ಸಂಪ್ರದಾಯ ಎಂದರು.
ಸರಕಾರದ ಪರ ಉತ್ತರಿಸಿದ ಕಾನೂನು ಸಚಿವ ಮಾಧುಸ್ವಾಮಿ, ಈ ವಿಚಾರ ಹಕ್ಕುಚ್ಯುತಿ ವ್ಯಾಪ್ತಿಗೆ ಬರುವುದಿಲ್ಲ. ಆದರೆ, ಶಾಸಕರ ಹಕ್ಕುಗಳನ್ನು ರಕ್ಷಿಸಲು ಸರಕಾರ ಬದ್ಧವಾಗಿದೆ ಎಂದರು. ರಾಜೇಗೌಡರು ಕೊಟ್ಟಿರುವ ಪ್ರಸ್ತಾವನೆಯಲ್ಲಿ ಹಕ್ಕುಚ್ಯುತಿ ಆಗಿರುವ ಬಗ್ಗೆ ದಾಖಲೆಗಳನ್ನು ಕೊಟ್ಟಿಲ್ಲ. ಹಾಗಾಗಿ, ಹಕ್ಕುಚ್ಯುತಿ ಪ್ರಸ್ತಾವ ನಿರಾಕರಿಸಲಾಗಿದೆ ಎಂದು ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಪ್ರಕಟಿಸಿದರು. ಇದಕ್ಕೆ ಅಸಮಾಧಾನಗೊಂಡ ರಾಜೇಗೌಡ ಹಾಗೂ ರಂಗನಾಥ್ ಸದನದ ಬಾವಿಗಿಳಿದು ಧರಣಿ ನಡೆಸಿದರು. ಶಾಸಕರ ಹಕ್ಕುಚ್ಯುತಿ ವಿಚಾರವನ್ನು ಕಲಾಪ ಸಲಹಾ ಸಮಿತಿ (ಬಿಎಸಿ) ಸಭೆಯಲ್ಲಿ ಚರ್ಚಿಸಿ ತೀರ್ಮಾನ ಮಾಡೋಣ ಎಂದು ಸ್ಪೀಕರ್ ಹೇಳಿದರು.
ನನ್ನ ಕ್ಷೇತ್ರದಲ್ಲಿ ಬಿಜೆಪಿಯ ಜೀವರಾಜ್ ಹೆಸರಲ್ಲಿ ಅನುದಾನ ಬಿಡುಗಡೆ ಮಾಡಲಾಗುತ್ತಿದೆ. ಅಭಿವೃದ್ಧಿ ಕಾಮಗಾರಿಗಳ ಭೂಮಿ ಪೂಜೆ, ಗುದ್ದಲಿ ಪೂಜೆ, ಉದ್ಘಾಟನೆಗೆ ನನ್ನನ್ನು ಆಹ್ವಾನಿಸುತ್ತಿಲ್ಲ. ಇದರಿಂದ ನನ್ನ ಹಕ್ಕುಚ್ಯುತಿ ಆಗಿದೆ. ನಾನು ಶಾಸಕ ಹೌದೋ, ಅಲ್ಲವೋ ಎನ್ನುವುದು ತೀರ್ಮಾನ ಆಗಿಲ್ಲ. ನನಗಾಗಿರುವ ಅನ್ಯಾಯ ಸರಿಪಡಿಸದಿದ್ದರೆ ಸದನದಲ್ಲಿ ಉಪವಾಸ ಕುಳಿತುಕೊಳ್ಳುತ್ತೇನೆ.
– ಟಿ.ಡಿ. ರಾಜೇಗೌಡ, ಕಾಂಗ್ರೆಸ್ ಸದಸ್ಯ
ಗೆದ್ದ ಶಾಸಕರನ್ನು ಬಿಟ್ಟು ಸೋತ ಅಭ್ಯರ್ಥಿಗೆ ಸರಕಾರದಿಂದ ಅನುದಾನ ಬಿಡುಗಡೆ ಮಾಡುವುದು ಸರಿಯಲ್ಲ. ಗೆದ್ದ ಶಾಸಕರು ಸದನದಲ್ಲಿ ಬಜೆಟ್ ಅನುಮೋದಿಸುತ್ತಾರೆ. ಹೀಗಿದ್ದಾಗ, ಸೋತವರಿಗೆ ಹಣ ಬಿಡುಗಡೆ ಮಾಡುವುದು ಯಾವ ನ್ಯಾಯ? ಸರಕಾರ ಇದನ್ನು ಪ್ರತಿಷ್ಠೆಯಾಗಿ ತೆಗೆದುಕೊಳ್ಳಬಾರದು. ಇದು ನೇರವಾಗಿ ಹಕ್ಕುಚ್ಯುತಿಗೆ ಬರದಿದ್ದರೂ, ಸರಕಾರದ ಈ ನಡೆ ಶಾಸಕರ ಹಕ್ಕುಚ್ಯುತಿಗೆ ಸರಿಸಮಾನವಾಗಿದೆ.
ನಾಳೆ ಅಧಿವೇಶನ ಮುಕ್ತಾಯ?
ಬೆಳಗಾವಿ: ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನ ನಿಗದಿತ ದಿನಕ್ಕಿಂತ ಒಂದು ದಿನ ಮೊದಲೇ ಮುಕ್ತಾಯಗೊಳ್ಳಲಿದೆಯೇ? ಇಂತಹ ಸುದ್ದಿ ಸುವರ್ಣ ವಿಧಾನಸೌಧ ಮೊಗಸಾಲೆಯಲ್ಲಿ ಕೇಳಿಬರುತ್ತಿದೆ. ಮಂಗಳವಾರ ಮಧ್ಯಾಹ್ನ ನಡೆದ ವಿಧಾನಪರಿ ಷತ್ ಕಲಾಪ ವ್ಯವಹಾರಗಳ ಸಲಹಾ ಸಮಿತಿ ಸಭೆಯಲ್ಲಿ ಗುರುವಾರವೇ ಕಲಾಪ ಮುಕ್ತಾಯಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳಲಾಗುತ್ತಿದೆ.- ಸಿದ್ದರಾಮಯ್ಯ, ವಿಪಕ್ಷ ನಾಯಕ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Chennamman-Kittur: ಯೋಧ ನರೇಶ ಯಲ್ಲಪ್ಪ ಅಗಸರ ಕೆರೆಗೆ ಹಾರಿ ಆತ್ಮಹತ್ಯೆ
Setback BJP: ಜನರಿಂದ ವಿಜಯೇಂದ್ರ ನಾಯಕತ್ವ ತಿರಸ್ಕಾರ, ರಾಜೀನಾಮೆ ನೀಡಲಿ: ಶಾಸಕ ಯತ್ನಾಳ್
ಮಹಾರಾಷ್ಟ್ರ ಸೋಲಿನ ಬೆನ್ನಲ್ಲೇ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಸತೀಶ್ ಜಾರಕಿಹೊಳಿ
ಬೆಳಗಾವಿ:ಬಟ್ಟೆ ಅಂಗಡಿಯಲ್ಲಿ ಕೆಲಸ ಮಾಡಿದ ಹುಡುಗ..ಜಿಲ್ಲಾ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Dr.Veerendra Heggade: ಡಾ.ಡಿ.ವೀರೇಂದ್ರ ಹಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Kannappa Movie: ವಿಷ್ಣು ಮಂಚು ʼಕಣ್ಣಪ್ಪʼ ರಿಲೀಸ್‌ಗೆ ಡೇಟ್ ಫಿಕ್ಸ್
BGT 2024: ಪರ್ತ್ ನಲ್ಲಿ ಪಲ್ಟಿ ಹೊಡೆದ ಆಸೀಸ್: ಬುಮ್ರಾ ಪಡೆಗೆ ಮೊದಲ ಪಂದ್ಯದಲ್ಲಿ ಜಯ
IFFI 2024: ಅಜ್ಜನ ಸಿನಿಮಾಗಳು ಡಿಸೆಂಬರ್ ನಲ್ಲಿ ಚಿತ್ರಮಂದಿರದಲ್ಲಿ ಬಿಡುಗಡೆ: ರಣಬೀರ್ ಕಪೂರ್
ಕಡಬ, ಬೆಳ್ತಂಗಡಿ ಸೇರಿದಂತೆ ಹಲವೆಡೆ ಮಾದಕವಸ್ತು, ಅಕ್ರಮ ಮದ್ಯ ಮಾರಾಟ ವಿರುದ್ಧ ಕಾರ್ಯಾಚರಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.