ಸಂಚಾರಿ ಪಶು ಚಿಕಿತ್ಸಾ ವಾಹನ ಖರೀದಿ: ಸಚಿವ ಪ್ರಭು ಚವ್ಹಾಣ್
Team Udayavani, Dec 28, 2022, 9:40 PM IST
ಸುವರ್ಣವಿಧಾನಸೌಧ: ಜಾನುವಾರುಗಳ ಆರೋಗ್ಯ ಮತ್ತು ರೋಗ ನಿಯಂತ್ರಣ ಕಾರ್ಯಕ್ರಮದಡಿ 275 ಸಂಚಾರಿ ಪಶು ಚಿಕಿತ್ಸಾ ವಾಹನಗಳನ್ನು ಖರೀದಿಸಲಾಗಿದ್ದು, ಬೆಂಗಳೂರು-ಬೆಳಗಾವಿ ವಿಭಾಗ ಸೇರಿ ವಿವಿಧ ಕಡೆ 201 ವಾಹನ ವಿತರಿಸಲಾಗಿದೆ ಎಂದು ಪಶು ಸಂಗೋಪನಾ ಸಚಿವ ಪ್ರಭು ಚವ್ಹಾಣ್ ಹೇಳಿದರು.
ಪರಿಷತ್ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆ ಕಾಂಗ್ರೆಸ್ ಸದಸ್ಯ ಎಸ್.ರವಿ ಪ್ರಶ್ನೆಗೆ ಉತ್ತರಿಸಿದ ಅವರು, ಕಲಬುರಗಿ ವಿಭಾಗ ಸೇರಿ ಬಾಕಿ ಇರುವ ಪ್ರದೇಶಗಳಿಗೆ ವಾಹನ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಜಾನುವಾರುಗಳಿಗೆ ಚರ್ಮಗಂಟು ರೋಗ ತಡೆ ಚಿಕಿತ್ಸೆಗೆ ಸಂಚಾರಿ ವಾಹನದಲ್ಲಿ ಲಸಿಕೆ ತೆಗೆದುಕೊಂಡು ಹೋಗಲಾಗುತ್ತಿದೆ ಎಂದು ತಿಳಿಸಿದರು.
ಸಚಿವರ ಉತ್ತರಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಎಸ್.ರವಿ, ಸರ್ಕಾರದ ವರದಿ ಪ್ರಕಾರವೇ ಚರ್ಮಗಂಟು ರೋಗದಿಂದ 21,305 ಜಾನುವಾರು ಮೃತಪಟ್ಟಿವೆ. ಇನ್ನಾದರೂ ಎಚ್ಚೆತ್ತುಕೊಳ್ಳದೆ, ಟೆಂಡರ್ ಕರೆಯಲಾಗಿದೆ ಎಂದು ಹೇಳುತ್ತಿದ್ದಾರೆ. ಇನ್ನೆಷ್ಟು ಜಾನುವಾರುಗಳು ಮೃತಪಡಬೇಕು ಎಂದು ಕಾಯುತ್ತಿದ್ದೀರಾ? ಇಲ್ಲವಾದರೆ ಜಾನುವಾರುಗಳಿಗೆ ದಯಾ ಮರಣ ಕೊಟ್ಟು ಬಿಡಿ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Road Mishap: ಕಲಬುರ್ಗಿಯಲ್ಲಿ ರಸ್ತೆ ಅಪಘಾತ… ಮುದ್ದೇಬಿಹಾಳದ ಯುವಕ ಮೃತ್ಯು
Racial Remark: ಕುಮಾರಸ್ವಾಮಿಯವರ “ಕರಿಯ” ಎಂದದ್ದು ತಪ್ಪು: ಡಿ.ಕೆ.ಶಿವಕುಮಾರ್
Illegal Property Case: ಸಚಿವ ಜಮೀರ್ ಅಹ್ಮದ್ಖಾನ್ಗೆ ಲೋಕಾಯುಕ್ತದಿಂದ ನೋಟಿಸ್
MUST WATCH
ಹೊಸ ಸೇರ್ಪಡೆ
Davanagere: ಯತ್ನಾಳ್ ಫೋರ್ತ್ ಗ್ರೇಡ್ ರಾಜಕಾರಣಿ..: ರೇಣುಕಾಚಾರ್ಯ ವಾಗ್ದಾಳಿ
BBK11: ಹನುಮಂತು ಬಳಿಕ ಮತ್ತಿಬ್ಬರು ವೈಲ್ಡ್ ಕಾರ್ಡ್ ಸ್ಪರ್ಧಿಗಳು ಬಿಗ್ಬಾಸ್ ಮನೆಗೆ
Karkala: ಬೋಳ ಅಕ್ರಮ ಮದ್ಯ ದಾಸ್ತಾನು ಪ್ರಕರಣ: ಕಾರವಾರದಲ್ಲಿ ಓರ್ವ ಆರೋಪಿ ಬಂಧನ
Hubli: ಅಡವಿಸಿದ್ದೇಶ್ವರ ಮಠದ ಶ್ರೀ ಶಿವಲಿಂಗೇಶ್ವರ ಸ್ವಾಮೀಜಿ ಲಿಂಗೈಕ್ಯ
Hubli: ದಿವಾಳಿಯಾದ ಸರ್ಕಾರ ಬಿಪಿಎಲ್ ಕಾರ್ಡ್ ಕಡಿತ ಮಾಡುತ್ತಿದೆ: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.