ಗುರಿ 150; ಕಾರ್ಯಸೂಚಿ ಸಲ್ಲಿಕೆಗೆ ಅಮಿತ್ ಶಾ ಆದೇಶ
Team Udayavani, Dec 29, 2022, 7:05 AM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ 150ರ ಗುರಿ ತಲುಪಲು ಸಿದ್ಧಪಡಿಸಿರುವ ಕಾರ್ಯಸೂಚಿಯ ಬಗ್ಗೆ ಸಮಗ್ರ ವರದಿ ನೀಡುವಂತೆ ಅಮಿತ್ ಶಾ ರಾಜ್ಯ ನಾಯಕರಿಗೆ ಸೂಚಿಸಿದ್ದಾರೆ.
ಕಾಂಗ್ರೆಸ್ ಹಾಗೂ ಜೆಡಿಎಸ್ ಪಕ್ಷಗಳನ್ನು ರಾಜಕೀಯವಾಗಿ ಮಣಿಸಲು ಕೈಗೊಳ್ಳುವ ಕಾರ್ಯತಂತ್ರ ಹಾಗೂ ಅದರ ಕಾರ್ಯ ಸಾಧ್ಯತೆ ಬಗ್ಗೆ ಮಾಹಿತಿ ಸಲ್ಲಿಸಲು ನಿರ್ದೇಶಿಸಲಾಗಿದೆ.
ಎರಡು ಹಂತಗಳ ಜೆಡಿಎಸ್ ಪಂಚರತ್ನ ಯಾತ್ರೆ, ಕಾಂಗ್ರೆಸ್ ವತಿಯಿಂದ ಸರಣಿ ಸಮಾವೇಶ ಆಯೋಜನೆ, ಸಿದ್ದರಾಮಯ್ಯ ಹಾಗೂ ಡಿ.ಕೆ.ಶಿವಕುಮಾರ್ ಜಂಟಿ ಯಾತ್ರೆ, ಆ ನಂತರ ಪ್ರತ್ಯೇಕ ಬಸ್ ಯಾತ್ರೆಯಿಂದ ಉಂಟಾಗಬಹುದಾದ ಪರಿ ಣಾಮಗಳು ಮತ್ತು ಬಿಜೆಪಿಗೆ ಅದ ರಿಂದಾಗುವ ಲಾಭ-ನಷ್ಟಗಳ ಬಗ್ಗೆಯೂ ಮಾಹಿತಿ ಕೇಳಲಾಗಿದೆ ಎಂದು ಹೇಳಲಾಗಿದೆ.
ಅಮಿತ್ ಶಾ ಅವರು ಈ ಬಾರಿಯ ರಾಜ್ಯ ಭೇಟಿ ಸಂದರ್ಭದಲ್ಲಿ ತಮ್ಮ ಮೂಲಗಳಿಂದ ಸಂಗ್ರಹಿಸಿರುವ ಮಾಹಿತಿ ಆಧಾರದಲ್ಲಿ ಕೆಲವೊಂದು ಸಲಹೆಗಳನ್ನೂ ರಾಜ್ಯ ನಾಯಕರಿಗೆ ನೀಡುವ ಸಾಧ್ಯತೆ ಇದೆ.
ಕಾರ್ಯತಂತ್ರ ಮಾಹಿತಿ
ಇತ್ತೀಚೆಗೆ ದಿಲ್ಲಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರೊಂದಿಗೆ ಅಮಿತ್ ಷಾ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವದ ಚರ್ಚೆ ನಡೆಸಿದ್ದರು. ಅದರೊಂದಿಗೆ ತಮ್ಮ ಸಿದ್ಧತೆ ಹಾಗೂ ಕಾರ್ಯತಂತ್ರದ ವಿವರ ನೀಡುವಂತೆ ಆದೇ ಶಿಸಿದ್ದರು.
ಈ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ತಮ್ಮ ಕಾರ್ಯತಂತ್ರದೊಂದಿಗೆ ಜನರ ವಿಶ್ವಾಸ ಗಳಿಸಲು ಪಕ್ಷದ ಸಂಘಟನೆ ವಿವರ, ಸರಕಾರದ ಯೋಜನೆ ಹಾಗೂ ಕಾರ್ಯಕ್ರಮಗಳ ಕುರಿತೂ ವಿವರ ಸಲ್ಲಿಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ರಾಜ್ಯದಲ್ಲಿ ಮೀಸಲು ವಿಷಯಕ್ಕೆ ಸಂಬಂಧಿಸಿ ವಿವಿಧ ಸಮುದಾಯಗಳ ಬೇಡಿಕೆ ಹಾಗೂ ಅದರಿಂದ ರಾಜಕೀಯವಾಗಿ ಉಂಟಾಗಲಿರುವ ಪರಿಣಾಮಗಳ ಬಗ್ಗೆಯೂ ಅಮಿತ್ ಶಾ ಮಾಹಿತಿ ಪಡೆಯಲಿದ್ದಾರೆ ಎಂದು ಹೇಳಲಾಗಿದೆ.
ಸಂಪುಟ ಪುನಾರಚನೆ ಪ್ರಸ್ತಾವನೆ
ಸಚಿವ ಸಂಪುಟ ವಿಸ್ತರಣೆಗೆ ಬಗ್ಗೆ ರಾಜ್ಯ ಉಸ್ತುವಾರಿ ಅರುಣ್‌ಸಿಂಗ್ ಅವರಿಂದಲೇ ಪ್ರಸ್ತಾವನೆ ಸಲ್ಲಿಸಲು ತೀರ್ಮಾನಿಸಲಾಗಿದೆ. ಮುಂದಿನ ಚುನಾವಣೆಯ ದೃಷ್ಟಿಯಿಂದ ಕೆಲವು ಸಮುದಾಯಗಳಿಗೆ ಅವಕಾಶ ಕಲ್ಪಿಸಿದರೆ ರಾಜಕೀಯವಾಗಿ ಲಾಭವಾಗಲಿದೆ ಎಂಬುದನ್ನು ಮನವರಿಕೆ ಮಾಡಿಕೊಡಲೂ ನಿರ್ಧರಿಸಲಾಗಿದೆ. ಸಂಪುಟ ವಿಸ್ತರಣೆಗಿಂತ ಹೊಸಮುಖಗಳ ಸಹಿತ ಪುನಾರಚನೆ ಸೂಕ್ತ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ.
ಪಕ್ಷ ಸೇರ್ಪಡೆ ಬಗ್ಗೆ ಚರ್ಚೆ
ಬಿಜೆಪಿ ಸೇರ್ಪಡೆಯಾಗಲು ಬಯಸಿ ರಾಜ್ಯ ನಾಯಕರ ಜತೆ ಚರ್ಚಿಸಿರುವ ವಿವಿಧ ಪಕ್ಷಗಳ ಶಾಸಕರು ಹಾಗೂ ಮುಖಂಡರು ಹಾಗೂ ಅವರ ಬೇಡಿಕೆ ಬಗ್ಗೆಯೂ ಈ ಸಂದರ್ಭದಲ್ಲಿ ಚರ್ಚೆಯಾಗಲಿದೆ. ಕೆಲವರು ಟಿಕೆಟ್ ನೀಡುವ ಖಾತರಿ ಕೇಳಿದ್ದಾರೆನ್ನಲಾಗಿದೆ. ಅಮಿತ್ ಅವರು ಹಸಿರು ನಿಶಾನೆ ನೀಡಿದರೆ ಸಂಕ್ರಾಂತಿ ನಂತರ ಹಾಲಿ ಶಾಸಕರ ಸಹಿತ ಹಲವು ನಾಯಕರು ಬಿಜೆಪಿಗೆ ಸೇರುವರು ಎನ್ನುತ್ತವೆ ಮೂಲಗಳು.
- ಎಸ್. ಲಕ್ಷ್ಮೀನಾರಾಯಣ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಮಹಾತ್ಮ ಗಾಂಧಿ ಪುತ್ಥಳಿ ಅನಾವರಣಗೊಳಿಸಿದ ಸಿಎಂ ಸಿದ್ದರಾಮಯ್ಯ
Belagavi: ಹುತಾತ್ಮ ಯೋಧರ ಕುಟುಂಬಕ್ಕೆ ಸರ್ಕಾರದಿಂದ ನೆರವು: ಸಿಎಂ ಘೋಷಣೆ
ಪತ್ನಿ ಊರಿನತ್ತ ಪ್ರಯಾಣ ಬೆಳೆಸಿದರೆ… ಸಾವಿನ ಮನೆಯ ಕದ ತಟ್ಟಿದ ಯೋಧ ನಾಗಪ್ಪ ಮರೆಗೊಂಡ
Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mangaluru: ಪದವು ಜಂಕ್ಷನ್- ಶರ್ಬತ್ ಕಟ್ಟೆ ರಸ್ತೆಗೆ ಅಗತ್ಯವಿದೆ ಫುಟ್‌ಪಾತ್
Padil: ಡಿಸಿ ಕಚೇರಿ ಸಂಕೀರ್ಣಕ್ಕೆ ಚಿನ್ನದ ಬಣ್ಣದ ರಾಷ್ಟ್ರ ಲಾಂಛನ
Uppunda: ಪಾಳು ಕೆರೆ ಈಗ ಈಜುಕೊಳ!; ಚೌಂಡಿ ಕೆರೆಗೆ ಊರಿನ ಯುವಕರಿಂದ ಕಾಯಕಲ್ಪ
Bajpe: ತಂಗುದಾಣ ತೆರವು, ಪ್ರಯಾಣಿಕರು ಅನಾಥ!
Perfect: ಎಡ್ ಶಿರನ್ ಹಾಡಿನಿಂದ ರಾಷ್ಟ್ರೀಯ ಸೆನ್ಸೇಶನ್ ಆದ ಉಡುಪಿಯ ಹುಡುಗ | Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.