‘ಕಾಂಗ್ರೆಸ್ ವಿಷನ್ 2023’ ವೆಬ್ ಸೈಟ್ ಅನಾವರಣ
Team Udayavani, Dec 29, 2022, 3:21 PM IST
ಬೆಂಗಳೂರು: ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯ ‘ಕಾಂಗ್ರೆಸ್ ವಿಷನ್ 2023’ ವೆಬ್ ಸೈಟ್ ಅನ್ನು ಗುರುವಾರ ಅನಾವರಣ ಮಾಡಲಾಯಿತು.
ಕ್ವೀನ್ಸ್ ರಸ್ತೆಯ ಕೆಪಿಸಿಸಿ ಕಚೇರಿಯಲ್ಲಿ ಗುರುವಾರ ಪಕ್ಷದ ಪ್ರಣಾಳಿಕೆ ಸಮಿತಿ ಅಧ್ಯಕ್ಷ ಡಾ.ಜಿ. ಪರಮೇಶ್ವರ ಅವರು ಅನಾವರಣ ಮಾಡಿದರು. ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಪ್ರಚಾರ ಸಮಿತಿಯ ಉಪಾಧ್ಯಕ್ಷ ಪ್ರೋ. ರಾಧಾಕೃಷ್ಣ, ಮಧು ಬಂಗಾರಪ್ಪ, ಸಮಿತಿಯ ಸದಸ್ಯ ಹುಸೇನ್ ಹಾಗೂ ರಾಜು ಗೌಡ ಅವರು ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮಾತನಾಡಿದ ಪರಮೇಶ್ವರ ಅವರು ‘ನಾವು ಆಡಳಿತಕ್ಕೆ ಬಂದರೆ ಜನರಿಗೆ ಏನು ಕೊಡುತ್ತೇವೆ ಎಂಬ ಭರವಸೆಗಳನ್ನು ತಿಳಿಸುವುದು ಬಹಳ ಮುಖ್ಯ. ಆ ದೃಷ್ಟಿಯಲ್ಲಿ ಕಾಂಗ್ರೆಸ್ ಪಕ್ಷ ಪ್ರತಿ ಬಾರಿ ಚುನಾವಣೆಗೆ ಹೋಗುವ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಪ್ರಣಾಳಿಕೆಯಲ್ಲಿ ತಿಳಿಸುತ್ತದೆ. ನಾವು ಕೊಟ್ಟ ಭರವಸೆಗಳು ಈಡೇರಿಸುವ ಭರವಸೆಗಳು. ನಾವು ಕೊಡುವ ಭರವಸೆ ಸಂಪೂರ್ಣವಾಗಿ ಕಾರ್ಯಗತಗೊಳಿಸುವ ಮೂಲಕ ಕಾಂಗ್ರೆಸ್ ಪಕ್ಷ ವಿಭಿನ್ನವಾಗಿ ನಡೆದುಕೊಳ್ಳುತ್ತದೆ ಎಂದರು.
2013ರಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುವ ಮುನ್ನ ರಾಜ್ಯದ ಜನತೆಗೆ 160 ಭರವಸೆಗಳನ್ನು ನೀಡಿದ್ದೆವು. ಆ ಭರವಸೆಗಳನ್ನು 2-3 ಹಂತದ ಭರವಸೆಗಳಾಗಿದ್ದೆವು. ಇದರಲ್ಲಿ ಕೆಲವು ಭರವಸೆಗಳು ಅಧಿಕಾರಕ್ಕೆ ಬಂದ ಮೊದಲ ವರ್ಷಗಳಲ್ಲಿ ಈಡೇರಿಸುವಂತಹ ಭರವಸೆಗಳು, ಅನ್ನಭಾಗ್ಯ ಯೋಜನೆ ಅವುಗಳಲ್ಲಿ ಒಂದು. ಇನ್ನು ದೀರ್ಘಾವಧಿ ಭರವಸೆಗಳಾದ ಕೈಗಾರಿಕೆ ಅಭಿವೃದ್ಧಿ, ವಿವಿಧ ಕ್ಷೇತ್ರಗಳ ಭರವಸೆಗಳಾಗಿದ್ದೆವು. ನಾವು ಈ ಭರವಸೆಗಳನ್ನು ಸಂಪೂರ್ಣವಾಗಿ ಈಡೇರಿಸಿ, ನುಡಿದಂತೆ ನಡೆದಿದ್ದೆವು. ಈ ಪ್ರಣಾಳಿಕೆ ಎಂಬುದು ಕಾಂಗ್ರೆಸ್ ಪಾಲಿಗೆ ಬಹಳ ಪ್ರಮುಖವಾದುದು. ಈ ಪ್ರಣಾಳಿಕೆ ತಯಾರು ಮಾಡುವ ಸಮಿತಿಗೆ ನನ್ನನ್ನು ಅಧ್ಯಕ್ಷರಾನ್ನಾಗಿ ಮಾಡಿದ್ದು, ಪ್ರೋ. ರಾಧಾಕೃಷ್ಣ ಅವರು ಇದ್ದಾರೆ. ಯುವಕರ ಆಶೋತ್ತರಗಳು ಪ್ರಣಾಳಿಕೆಯಲ್ಲಿ ಇರಬೇಕು ಎಂದು ಮಧುಬಂಗಾರಪ್ಪ ಅವರನ್ನು ಸಮಿತಿಯಲ್ಲಿ ಅವಕಾಶ ನೀಡಿದ್ದಾರೆ. ಈಗ ನಾವು ಕಾಂಗ್ರೆಸ್ ವಿಷನ್ 2023 ವೆಬ್ ಸೈಟ್ ಅನಾವರಣ ಮಾಡಿದ್ದು, ಸ್ವಲ್ಪ ವಿಭಿನ್ನವಾಗಿ ಇರಬೇಕು ಎಂಬ ಉದ್ದೇಶದಿಂದ ಜನಸಮುದಾಯದ ಭಾವನೆ, ಸಮಸ್ಯೆಗಳನ್ನು ಅವರಿಂದಲೇ ತಿಳಿದುಕೊಂಡು ಅವುಗಳಿಗೆ ಪರಿಣಾಮಕಾರಿ ಪರಿಹಾರ ನೀಡುವ ಕಾರ್ಯಕ್ರಮ ರೂಪಿಸಲು ಅವಕಾಶ ಕಲ್ಪಿಸಲಾಗಿದೆ. ಜನರನ್ನು ಬೇರೆ ಬೇರೆ ರೀತಿಯಲ್ಲಿ ಸಂಪರ್ಕಿಸಲು ನಾವು ಉದ್ದೇಶಿಸಿದ್ದು, ಅದರಲ್ಲಿ ಈ ವೆಬ್ ಸೈಟ್ ಕೂಡ ಒಂದಾಗಿದೆ. ಈ ವೆಬ್ ಸೈಟ್ ನಲ್ಲಿ ಯಾರು ಬೇಕಾದರೂ ತಮ್ಮ ಸಲಹೆ ಸೂಚನೆ ನೀಡಬಹುದು. ಇನ್ನು ನಮಗೆ ಪತ್ರ ಬರೆಯಬಹುದು ಎಂದರು.
ಇದನ್ನೂ ಓದಿ:‘ಪಠಾಣ್’ಗೆ ಸೆನ್ಸಾರ್ ಸಂಕಷ್ಟ: ಚಿತ್ರ ಮತ್ತು ಹಾಡಿನಲ್ಲಿ ಬದಲಾವಣೆ ಮಾಡಲು ಸೂಚನೆ
ಈ ಬಾರಿ ನಾವು 5 ಪ್ರಮುಖ ವಿಚಾರಗಳ ಬಗ್ಗೆ ಗಮನಹರಿಸಬೇಕು ಎಂದು ಸಲಹೆಗಳು ಬಂದಿವೆ. ಯುವಕರ ಸಮಸ್ಯೆಗಳು, ಮಹಿಳೆಯರ ಸಮಸ್ಯೆ, ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಮೀಸಲಾತಿ ನೀಡಿದ್ದೇವೆ. ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು, ಸ್ತ್ರೀಶಕ್ತಿ ಸಂಘಗಳ ಸಮಸ್ಯೆಗಳ ಬಗ್ಗೆ ಗಮನಹರಿಸುತ್ತೇವೆ. ಶಿಕ್ಷಣ, ಆರೋಗ್ಯ ಕ್ಷೇತ್ರದಲ್ಲಿನ ಸಮಸ್ಯೆ ಬಗ್ಗೆ ಹೆಚ್ಚಿನ ಗಮನಹರಿಸಲಾಗಿದೆ. ಇನ್ನು ಕೃಷಿ ಕ್ಷೇತ್ರಕ್ಕೆ ಅತ್ಯಂತ ಹೆಚ್ಚಿನ ಪ್ರಾಮುಖ್ಯತೆ ನೀಡಲಾಗುವುದು. ರೈತನ ಸಮಸ್ಯೆಯಿಂದ ಮಾರಾಟದ ಹಂತದವರೆಗೂ ಅನೇಕ ಸಮಸ್ಯೆಗಳಿವೆ. ಇವುಗಳನ್ನು ಬಗೆಹರಿಸುವುದು ಬಹಳ ಮುಖ್ಯ. ಗ್ರಾಮೀಣ ಮೂಲಸೌಕರ್ಯ ಪ್ರಮುಖ ಆದ್ಯತೆ ಆಗಿವೆ. ಇನ್ನು ಬಹಳ ಪ್ರಮುಖವಾಗಿ ಬೆಂಗಳೂರು ನಗರಕ್ಕೆ ಬೇಕಾಗಿರುವ ಕುಡಿಯುವ ನೀರು, ವಿದ್ಯುತ್ ಸಮಸ್ಯೆ, ಮೂಲಸೌಕರ್ಯ, ಸಂಚಾರ ದಟ್ಟಣೆ ಸಮಸ್ಯೆ ಎದುರಿಸುತ್ತಿದ್ದೇವೆ. ಹೀಗಾಗಿ ಬೆಂಗೂರಿಗೆ ಪ್ರತ್ಯೇಕ ಪ್ರಣಾಳಿಕೆ ಭಾಗ ಮಾಡಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
IPL Auction: ಡೆಲ್ಲಿ ಕ್ಯಾಪಿಟಲ್ಸ್ ಪಾಲಾದ ಕೆಎಲ್ ರಾಹುಲ್; ಖರೀದಿ ಆರಂಭಿಸಿದ ಆರ್ ಸಿಬಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.