1 ಲಕ್ಷ ಸರಕಾರಿ ನೌಕರರ ನೇಮಕಕ್ಕೆ ಕ್ರಮ : ಸಿಎಂ ಬಸವರಾಜ ಬೊಮ್ಮಾಯಿ

ಈ ವರ್ಷ ಸಾಲದ ಮೀತಿ ಮೀರಲ್ಲ

Team Udayavani, Dec 30, 2022, 6:55 AM IST

CM-@-2

ಬೆಳಗಾವಿ: ರಾಜ್ಯದಲ್ಲಿ ಸುಮಾರು 1 ಲಕ್ಷ ಸರಕಾರಿ ನೌಕರರ ನೇಮಕಕ್ಕೆ ತೀರ್ಮಾನಿಸಲಾಗಿದ್ದು, ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗು]ವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಪರಿಷತ್‌ನಲ್ಲಿ ಗುರುವಾರ ಕರ್ನಾಟಕ ಧನ ವಿನಿಯೋಗ ಮಸೂದೆ (ಪೂರಕ ಅಂದಾಜು) ಮಂಡನೆ ಮಾಡಿ ಮಾತನಾಡಿದ ಅವರು, ವೇತನಕ್ಕೆ ತಕ್ಕ ರೀತಿಯ ಕೆಲಸ ನಿಗದಿ ಹಾಗೂ ಮೌಲ್ಯಾಂಕನಕ್ಕೆ ಒತ್ತು ನೀಡಲಾಗು ವುದು. ಐದು ವರ್ಷದ ಯೋಜನೆ ಇದಾಗಿದ್ದು, ಈ ಬಗ್ಗೆ ಬಜೆಟ್‌ನಲ್ಲಿ ಘೋಷಣೆ ಮಾಡುವುದಾಗಿ ಅವರು ತಿಳಿಸಿದರು.

ಕೆಲಸದ ಅವಧಿಯನ್ನೂ ಹೆಚ್ಚಿಸುವ ಚಿಂತನೆ ಇದೆ. ಶಿಕ್ಷಕರು, ಉಪನ್ಯಾಸಕರು ಪಡೆಯುವ ವೇತನಕ್ಕೆ ತಕ್ಕ ರೀತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡಬೇಕಾಗಿದೆ. ಈ ನಿಟ್ಟಿನಲ್ಲಿ ಮೌಲ್ಯಾಂಕನ ಮಾಡಲು ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಶಿಕ್ಷಕರ ನಿಯೋಜನೆ ಮಾಡಲಾಗುವುದು ಎಂದರು.

15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ
ಶಿಕ್ಷಕರ ಕೊರತೆ ನೀಗಿಸುವ ನಿಟ್ಟಿನಲ್ಲಿ ಈಗಾಗಲೇ 15 ಸಾವಿರ ಶಿಕ್ಷಕರ ನೇಮಕ ಕೈಗೊಳ್ಳಲಾಗಿತ್ತು. ಕೆಲವರು ಕೋರ್ಟ್‌ಗೆ ಹೋಗಿದ್ದರಿಂದ ತಡೆಯಾಗಿದೆ. ಇದಲ್ಲದೆ ಇನ್ನೂ 15 ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ವಿಶ್ವವಿದ್ಯಾಲಯ ಉಪನ್ಯಾಸರ ನೇಮಕಕ್ಕೆ ಅನುಮತಿ ನೀಡಿದ್ದೇನೆ. ಅತಿಥಿ ಉಪನ್ಯಾಸಕರ ಗೌರವಧನ ಹೆಚ್ಚಳ ಮಾಡಲಾಗಿದೆ ಎಂದರು.

ಧನ ವಿನಿಯೋಗ ಮಸೂದೆ ಅಂಗೀಕಾರ
ಕರ್ನಾಟಕ ಧನ ವಿನಿಯೋಗ ಮಸೂದೆಗೆ ವಿಧಾನ ಪರಿಷತ್‌ನಲ್ಲಿ ಅಂಗೀಕಾರ ನೀಡಲಾಯಿತು. ಸಿಎಂ ಬೊಮ್ಮಾಯಿ ಅವರು ಮಸೂದೆ ಮಂಡಿಸಿದರು. ಅಂದಾಜು 2,71,542 ಕೋ. ರೂ.ಗಳ ಬಜೆಟ್‌ ಗಾತ್ರ ಇದ್ದು, ಮೊದಲ ಬಾರಿಗೆ 14,762 ಕೋಟಿ ರೂ.ಗಳ ಪೂರಕ ಅಂದಾಜು ಮಂಡನೆ ಮಾಡ ಲಾಗಿತ್ತು. ಇದೀಗ 8001.13 ಕೋಟಿ ರೂ.ಗಳ ಪೂರಕ ಅಂದಾಜು ಮಂಡನೆ ಮಾಡುತ್ತಿದ್ದು, ವಿವಿಧ ಆಭಿವೃದ್ಧಿ ಹಾಗೂ ಕಲ್ಯಾಣ ಯೋಜನೆಗಳ ಉದ್ದೇಶದೊಂದಿಗೆ ಇದನ್ನು ಕೈಗೊಳ್ಳುತ್ತಿದ್ದೇನೆ. ಒಟ್ಟು ಬಜೆಟ್‌ ಗಾತ್ರಕ್ಕೆ ಹೋಲಿ ಸಿದರೆ ಎರಡು ಪೂರಕ ಅಂದಾಜುಗಳ ಪ್ರಮಾಣ ಶೇ. 8.38ರಷ್ಟು ಮಾತ್ರ ಆಗಿದೆ ಎಂದು ಹೇಳಿದರು.

ಈ ವರ್ಷ ಸಾಲದ ಮೀತಿ ಮೀರಲ್ಲ
ಕೋವಿಡ್‌ ಮತ್ತಿತರರ ಕಾರಣ ಗಳಿಂದ ಎದುರಾಗಿದ್ದ ವಿತ್ತೀಯ ಕೊರತೆ ಯನ್ನು ಸರಿಪಡಿಸಿ ಉಳಿತಾಯ ಆರ್ಥಿಕತೆಯನ್ನಾಗಿಸಲು ಪ್ರಯತ್ನ ಮಾಡಲಾಗುವುದು. ಕಳೆದ ವರ್ಷ 71 ಸಾವಿರ ಕೋಟಿ ಸಾಲಕ್ಕೆ ಆವಕಾಶವಿದ್ದರೂ, ನಮ್ಮ ಸಾಲ 63 ಸಾವಿರ ಕೋಟಿ ರೂ. ದಾಟಿಲ್ಲ. ಪ್ರಸಕ್ತ ವರ್ಷವೂ ಸಾಲದ ಮಿತಿ 62 ಸಾವಿರ ಕೋಟಿ ದಾಟದಂತೆ ಪ್ರಯತ್ನ ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಶೀಘ್ರ ಶಾಸಕರ ಸಭೆ
ಅಂಬೇಡ್ಕರ್‌, ಪರಿಶಿಷ್ಟ ಪಂಗಡ ಸೇರಿ ಬಹುತೇಕ ಎಲ್ಲ ನಿಗಮಗಳಲ್ಲಿ ಅನುದಾನದ ಕೊರತೆ ಇಲ್ಲ. ಬಜೆಟ್‌ನಲ್ಲಿ ಮೀಸಲಿಟ್ಟ ಹಣದ ಜತೆಗೆ 800 ಕೋಟಿ ರೂ. ನೀಡಿದ್ದೇನೆ. ಶೀಘ್ರವೇ ಶಾಸಕರ ಸಭೆ ಕರೆದು ನಿಗಮದಲ್ಲಿ ಉಳಿದಿರುವ ಕಡತಗಳನ್ನು ವಿಲೇ ಮಾಡಲು ಸೂಚಿಸಲಾಗುವುದು. ಹೆಚ್ಚಿನ ಅನುದಾನ ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಪೂರಕ ಅಂದಾಜಿನ ಮೇಲಿನ ಚರ್ಚೆಗೆ ಉತ್ತರಿಸಿದ ಅವರು, ಲೋಕೋಪಯೋಗಿ, ಸಣ್ಣ ನೀರಾವರಿ, ಕಂದಾಯ ಇಲಾಖೆ, ವಸತಿ ಇಲಾಖೆಗೆ ಹೆಚ್ಚಿನ ಅನುದಾನವನ್ನು ವಿಪಕ್ಷಗಳ ಶಾಸಕರು ಕೇಳಿದ್ದು, 3ನೇ ಕಂತಿನ ಪೂರಕ ಅಂದಾಜಿನಲ್ಲಿ ಒದಗಿಸಲಾಗುವುದು ಎಂದು ಭರವಸೆ ನೀಡಿದರು.

ಶ್ವೇತಪತ್ರ ಹೊರಡಿಸುತ್ತೇನೆ
ಎಸ್‌ಸಿಎಸ್‌ಪಿ-ಟಿಎಸ್‌ಪಿ ಯೋಜನೆಯಡಿ ಹಿಂದೆ ಯಾವ ಸರಕಾರ ಎಷ್ಟೆಷ್ಟು ಅನುದಾನವನ್ನು ಬೇರೆ ಉದ್ದೇಶಗಳಿಗೆ ಬಳಕೆ ಮಾಡಿದೆ ಎಂಬ ಬಗ್ಗೆ ಶ್ವೇತಪತ್ರ ಹೊರಡಿಸುವುದಾಗಿ ಸಿಎಂ ಬೊಮ್ಮಾಯಿ ಪ್ರಕಟಿಸಿದರು.

ಟಾಪ್ ನ್ಯೂಸ್

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Amazon Employee: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು

3-yellapur

Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

IPL 2025-27: BCCI announces dates for next three IPL seasons

IPL 2025-27: ಮುಂದಿನ ಮೂರು ಐಪಿಎಲ್ ಸೀಸನ್‌ ನ ದಿನಾಂಕ ಪ್ರಕಟಿಸಿದ ಬಿಸಿಸಿಐ

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

AI world: ಕ್ರಿಮಿನಲ್‌ಗ‌ಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್‌!

5-video

ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್‌ ನಲ್ಲೇ ಪರದಾಡಿದ ಬ್ಯಾಟರ್‌ ಗಳು

4-siruguppa

Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್‌; ಎತ್ತು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.