ಮೋದಿ ಎಷ್ಟು ಸಲ ಬೇಕಾದರೂ ರಾಜ್ಯಕ್ಕೆ ಬರಲಿ, ರಾಜ್ಯದಲ್ಲಿ ಗೆಲ್ಲಲು ಸಾಧ್ಯವಿಲ್ಲ: ಸಿದ್ದರಾಮಯ್ಯ
Team Udayavani, Dec 30, 2022, 1:46 PM IST
ದಾವಣಗೆರೆ: ಪ್ರಧಾನಿ ನರೇಂದ್ರ ಮೋದಿ ಎಷ್ಟು ಬಾರಿ ಬೇಕಾದರೂ ರಾಜ್ಯಕ್ಕೆ ಬಂದರೂ ಮುಂದಿನ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಗೆಲ್ಲಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವಿಧಾನಸಭಾ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜಾದೂ ನಡೆಯಲ್ಲ. ಮೋದಿ ಎಷ್ಟು ಬಾರಿ ಬಂದರೂ ಬಿಜೆಪಿ ಗೆಲ್ಲಲ್ಲ ಎಂದರು.
ಅಮಿತ್ ಶಾ ಬಂದಾಕ್ಷಣ ರಾಜ್ಯದಲ್ಲಿ ಬಿಜೆಪಿ ಗೆಲ್ಲುತ್ತದೆಯೆಂದು ಹೇಳಲು ಆಗುತ್ತದೆಯೇ. ಅಮಿತ್ ಶಾ ಜಾದೂ ಮಾಡುತ್ತಾರಾ? ಅವರ ತಂತ್ರ ಕೆಲಸ ಮಾಡಲ್ಲ ಎಂದು ತಿಳಿಸಿದರು.
ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಹೀನಾಯ ಸೋಲು ಅನುಭವಿಸಿದೆ. ಬೇರೆ ಬೇರೆ ರಾಜ್ಯಗಳಲ್ಲಿ ಅಧಿಕಾರದಲ್ಲಿ ಇಲ್ಲ. ಕರ್ನಾಟಕದಲ್ಲಿ ಅಮಿತ್ ಶಾ ಹಾಗೂ ಮೋದಿ ಜಾದೂ ನಡೆಯಲು ಸಾಧ್ಯವಿಲ್ಲ. ಜನರಿಗೆ ಬಿಜೆಪಿಯವರ ಕಳ್ಳಾಟ ಗೊತ್ತಾಗಿದೆ ಎಂದರು.
ಕಳಸಾ ಬಂಡೂರಿ ನಾಲಾ ವಿವಾದ ಸಂಬಂಧ ಸರ್ಕಾರ ತೆಗೆದುಕೊಂಡಿರುವ ನಿರ್ಧಾರ ಚುನಾವಣಾ ಗಿಮಿಕ್. ಇವೆಲ್ಲಾ ನಡೆಯಲ್ಲ. ಗೆಜೆಟ್ ನೋಟಿಫಿಕೇಶನ್ ಆಗಿ ಎರಡು ವರ್ಷವಾಯ್ತು. ಎರಡು ವರ್ಷ ಏನು ಮಾಡುತ್ತಿದ್ದರು. ಕೇಂದ್ರದಲ್ಲಿ ಹಾಗೂ ರಾಜ್ಯದಲ್ಲಿ ಡಬಲ್ ಎಂಜಿನ್ ಸರ್ಕಾರ ಇದ್ದರೂ ಯಾಕೆ ಮಾಡಲಿಲ್ಲ. ಈಗ ಚುನಾವಣೆ ಬರುತ್ತಿದೆ ಎಂಬ ಕಾರಣಕ್ಕೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ದೂರಿದರು.
ಇದನ್ನೂ ಓದಿ:ಆಘಾತದ ನಡುವೆಯೂ ಸರ್ಕಾರಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಪ್ರಧಾನಿ ಮೋದಿ
ಕಾಂಗ್ರೆಸ್ ನವರು ಹುಬ್ಬಳ್ಳಿಯಲ್ಲಿ ಸಮಾವೇಶ ಮಾಡ್ತೇವೆಂದು ನಿರ್ಧಾರ ತೆಗೆದು ಕೊಂಡಿದ್ದಾರೆ. ಸಮಾವೇಶ ಮಾಡಿ ಜನರಿಗೆ ಸತ್ಯಾಂಶ ತಿಳಿಸುತ್ತೇವೆ ಎಂದರು.
ಪಂಚಮಸಾಲಿ, ಲಿಂಗಾಯತ, ಒಕ್ಕಲಿಗರಿಗೆ ಸರ್ಕಾರ ಮೀಸಲಾತಿ ಘೋಷಿಸಿದೆ. ಸಂವಿಧಾನ ಬದ್ಧವಾಗಿ ಆಗಬೇಕು. ಒಕ್ಕಲಿಗರೇನೂ ಮೀಸಲಾತಿ ಕೇಳಿದ್ದರಾ? ಒಕ್ಕಲಿಗರಿಗೆ ಮೀಸಲಾತಿ ಕೊಟ್ಟಿದ್ದಕ್ಕೆ ನನ್ನ ವಿರೋಧ ಇಲ್ಲ. ಜಾರಿಯಾಗಬೇಕಷ್ಟೇ. ಇದೆಲ್ಲಾ ಚುನಾವಣಾ ಗಿಮಿಕ್ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
Poster Dispute: ಭಾರತ ಭೂಶಿರ ವಿರೂಪ: ಬಿಜೆಪಿಯ ಇಂದಿನ ಪ್ರತಿಭಟನೆ ರದ್ದು
Egg Thrown Case: 100-150 ಜನರಿಂದ ನನ್ನ ಮೇಲೆ ದಾಳಿ: ಶಾಸಕ ಮುನಿರತ್ನ ದೂರು
Congress: ಪಕ್ಷದೊಳಗೆ ಹೊಸ ನಾಯಕತ್ವಕ್ಕೆ ಅವಕಾಶ ಸಿಗಬೇಕು: ಮಲ್ಲಿಕಾರ್ಜುನ ಖರ್ಗೆ
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kasaragod: ಮುಳಿಯಾರಿನಲ್ಲಿ ಮನೆ ಮುಂದೆ ಐದು ಚಿರತೆ ಪ್ರತ್ಯಕ್ಷ
INDIA ಕೂಟದಿಂದ ಕಾಂಗ್ರೆಸ್ ಹೊರಗಿಡಲು ಆಪ್ ಒತ್ತಾಯ!
Tamil Nadu: ಡಿಎಂಕೆ ಸರಕಾರ ಇಳಿಸುವವರೆಗೂ ಚಪ್ಪಲಿ ಧರಿಸಲ್ಲ: ಕೆ.ಅಣ್ಣಾಮಲೈ
Negotiation: ಹೆಬ್ಬಾಳ್ಕರ್-ಸಿ.ಟಿ.ರವಿ ಪ್ರಕರಣ ಸಂಧಾನಕ್ಕೆ ಸಿದ್ಧ: ಬಸವರಾಜ ಹೊರಟ್ಟಿ
ಲೋಕ ಚುನಾವಣೆಯಲ್ಲಿ ಪುರುಷರಗಿಂತ ಸ್ತ್ರೀಯರಿಗಿಂತ ಹೆಚ್ಚು ಮತದಾನ: ಚು.ಆಯೋಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.