ನಕಲಿ ಔಷಧಗಳ ಬಗ್ಗೆ ಇರಲಿ ಎಚ್ಚರ! ಭಾರತೀಯ ಔಷಧಗಳ ಮಹಾನಿರ್ದೇಶನಾಲಯ ಸುತ್ತೋಲೆ

Team Udayavani, Dec 31, 2022, 6:00 AM IST

ನಕಲಿ ಔಷಧಗಳ ಬಗ್ಗೆ ಇರಲಿ ಎಚ್ಚರ! ಭಾರತೀಯ ಔಷಧಗಳ ಮಹಾನಿರ್ದೇಶನಾಲಯ ಸುತ್ತೋಲೆ

ನವದೆಹಲಿ: ದೇಶದಲ್ಲಿ ನಕಲಿ ಔಷಧಗಳು ಪೂರೈಕೆಯಾಗುತ್ತಿವೆ ಎಚ್ಚರ! ಇಂಥದ್ದೊಂದು ಅಲರ್ಟ್‌ ರವಾನಿಸಿದ್ದು ಬೇರ್ಯಾರೂ ಅಲ್ಲ ಭಾರತೀಯ ಔಷಧಗಳ ಮಹಾನಿರ್ದೇಶನಾಲಯ (ಡಿಸಿಐಜಿ).

ಹಿಮಾಚಲ ಪ್ರದೇಶ ಮೂಲದ ಕಂಪನಿಯೊಂದು ಉತ್ಪಾದಿಸುತ್ತಿರುವ ನಕಲಿ ಔಷಧಗಳಿಗೆ ಸಂಬಂಧಿಸಿ ಭಾರತೀಯ ಔಷಧ ನಿರ್ದೇಶನಾಲಯ ಶುಕ್ರವಾರ ಎಲ್ಲ ರಾಜ್ಯಗಳ ಔಷಧ ನಿರೀಕ್ಷಕರಿಗೆ ಎಚ್ಚರಿಕೆ ಸಂದೇಶ ಕಳುಹಿಸಿದೆ.

ಅಲರ್ಜಿ ನಿಗ್ರಹ ಮಾಂಟೈರ್‌, ಹೃದ್ರೋಗಕ್ಕೆ ಸಂಬಂಧಿಸಿದ ಔಷಧ ಅಟೋರ್ವ, ರೋಸ್‌ಡೇ, ನೋವು ನಿವಾರಕ ಝೆರೋಡೋಲ್‌, ಕ್ಯಾಲ್ಸಿಯಂ ಮಾತ್ರೆಗಳು ಮತ್ತು ವಿಟಮಿನ್‌ ಡಿ ಮಾತ್ರೆಗಳ ಮೇಲೆ ನಿಗಾ ಇಡುವಂತೆ ದೇಶಾದ್ಯಂತದ ಡ್ರಗ್‌ ಇನ್‌ಸ್ಪೆಕ್ಟರ್‌ಗಳಿಗೆ ಸೂಚಿಸಲಾಗಿದೆ. ನಕಲಿಯಾಗಿ ಉತ್ಪಾದಿಸಲ್ಪಡುತ್ತಿರುವ ಔಷಧಗಳ ಪಟ್ಟಿಯನ್ನು ಸುತ್ತೋಲೆಯೊಂದಿಗೆ ರವಾನಿಸಲಾಗಿದೆ.

ಗಾಂಬಿಯಾ ಮತ್ತು ಉಜ್ಬೇಕಿಸ್ತಾನದಲ್ಲಿ ಭಾರತದ ಕಂಪನಿ ತಯಾರಿಸಿದ ಕೆಮ್ಮಿನ ಸಿರಪ್‌ ಸೇವಿಸಿ ಹಲವು ಮಕ್ಕಳು ಅಸುನೀಗಿದ ಆರೋಪಗಳು ಕೇಳಿಬಂದ ಬೆನ್ನಲ್ಲೇ ಕೇಂದ್ರ ಸರ್ಕಾರವು ದೇಶದ ಔಷಧ ಉತ್ಪಾದನೆಯಲ್ಲಿನ ಸಮಸ್ಯೆಗಳನ್ನು ಪತ್ತೆಹಚ್ಚುವ ನಿಟ್ಟಿನಲ್ಲಿ ಕಾರ್ಯತತ್ಪರವಾಗಿದೆ.

ಹಿಮಾಚಲದ ಟ್ರೈಜಲ್‌ ಫಾರ್ಮುಲೇಷನ್ಸ್‌ ಕಂಪನಿಯ ಮೋಹಿತ್‌ ಬನ್ಸಲ್‌ ಎಂಬಾತ ಯಾವುದೇ ಅನುಮತಿಯಿಲ್ಲದೇ ನಕಲಿ ಔಷಧಗಳನ್ನು ತಯಾರಿಸುತ್ತಿರುವುದು ಇತ್ತೀಚೆಗೆ ನಡೆದ ದಾಳಿ ವೇಳೆ ಬೆಳಕಿಗೆ ಬಂದಿದೆ. ಉತ್ತರಪ್ರದೇಶದ ಆಗ್ರಾದಲ್ಲಿರುವ ಈತನದ್ದೇ ಕಂಪನಿಯ ಅಂಗಸಂಸ್ಥೆ ಎಂಎಚ್‌ ಪಾರ್ಮಾದಲ್ಲಿ ಕೂಡ ನಕಲಿ ಔಷಧಗಳನ್ನು ಮಾರಾಟ ಮಾಡುತ್ತಿದ್ದುದು ಬಹಿರಂಗವಾಗಿದೆ.

ಮೇಲಿನ ಪಟ್ಟಿಯಲ್ಲಿರುವ ಔಷಧಗಳನ್ನು ವಾಸ್ತವದಲ್ಲಿ ಪ್ರಮುಖ ಔಷಧ ಕಂಪನಿಗಳಾದ ಸಿಪ್ಲಾ, ಝೈಡಸ್‌ ಹೆಲ್ತ್‌ಕೇರ್‌, ಐಪಿಸಿಎ ಲ್ಯಾಬ್ಸ್, ಮ್ಯಾಕ್ಲಿಯೋಡ್ಸ್‌ ಫಾರ್ಮಾ ಮತ್ತು ಟೊರೆಂಟ್‌ ಫಾರ್ಮಾಸುಟಿಕಲ್ಸ್‌ ಉತ್ಪಾದನೆ ಮಾಡುತ್ತಿವೆ. ಆದರೆ, ಹಿಮಾಚಲ ಸೇರಿದಂತೆ ಕೆಲವು ರಾಜ್ಯಗಳಲ್ಲಿ ಈ ಕಂಪನಿಗಳು ತಯಾರಿಸುವ ಔಷಧಗಳನ್ನೇ ನಕಲು ಮಾಡಿ ಮಾರಾಟ ಮಾಡಲಾಗುತ್ತಿದೆ. ಇಂಥ ಔಷಧಗಳ ಮೇಲೆ ನಿಗಾ ವಹಿಸಿ, ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶಿಸಲಾಗಿದೆ.

ಟಾಪ್ ನ್ಯೂಸ್

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Udupi: ಗೀತಾರ್ಥ ಚಿಂತನೆ-105: ಶೋಕ – ದುಃಖ ಒಂದೇ ಅಲ್ಲ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

MUDA CASE: ತನಿಖೆಗೂ ಮುನ್ನವೇ ದಾಖಲೆ ನಾಪತ್ತೆ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kharge

JPC on Adani issue;ನಿಯಮ 267 ಅಡಿಯಲ್ಲಿ ಪ್ರಸ್ತಾಪಿಸಲು ಅವಕಾಶ ನೀಡದ್ದಕ್ಕೆ ಖರ್ಗೆ ಆಕ್ರೋಶ

chetah

Kuno National Park; ಮರಿಗಳಿಗೆ ಜನ್ಮ ನೀಡಿದ ಚೀತಾ ನೀರ್ವಾ: ಸಂಖ್ಯೆ ಹೆಚ್ಚಳ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Andaman: ಮೀನುಗಾರಿಕಾ ದೋಣಿಯಲ್ಲಿದ್ದ 5 ಟನ್ ಮಾದಕ ವಸ್ತು ವಶಕ್ಕೆ ಪಡೆದ ಕೋಸ್ಟ್ ಗಾರ್ಡ್

Andaman: ಕೋಸ್ಟ್ ಗಾರ್ಡ್ ಕಾರ್ಯಾಚರಣೆ..ಮೀನುಗಾರಿಕಾ ದೋಣಿಯಲ್ಲಿದ್ದ 6 ಟನ್ ಮಾದಕ ವಸ್ತು ವಶ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

Maharashtra: ಕಾಂಗ್ರೆಸ್‌ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

1-eee

Shiradi: ಬಸ್‌ ಢಿಕ್ಕಿಯಾಗಿ ಪಾದಚಾರಿ ಸಾ*ವು

death

Bengaluru:ಮೂಲ್ಕಿಯ ಬಡಗಿ ಖಾಸಗಿ ಹೊಟೇಲ್‌ ನಲ್ಲಿ ಆತ್ಮಹ*ತ್ಯೆ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.