ಅಮಿತ್ ಶಾ ಅವರೇ, ಇನ್ನಾದರೂ ಸುಳ್ಳಿನ ಜಾಗಟೆ ಬಾರಿಸುವುದು ನಿಲ್ಲಿಸಿ: ಕುಮಾರಸ್ವಾಮಿ ಟೀಕೆ
Team Udayavani, Dec 31, 2022, 1:14 PM IST
ಬೆಂಗಳೂರು: ಬರೀ ಬೂಟಾಟಿಕೆ ಪಾರ್ಟಿ (ಬಿಜೆಪಿ) ಸುಳ್ಳುಕೋರರ ಸಂತೆ ಎನ್ನುವುದಕ್ಕೆ ಮಂಡ್ಯದಲ್ಲಿ ಸುಖಾಸುಮ್ಮನೆ ಅಲವತ್ತುಕೊಂಡ ನಿಮ್ಮ ಅಸತ್ಯದ ಹಾಹಾಕಾರದ ವರಸೆಯೇ ಸಾಕ್ಷಿ. ಸ್ಥಳಕ್ಕೊಂದು ವೇಷ, ಕ್ಷಣಕ್ಕೊಂದು ಸುಳ್ಳು; ಇದು ನಿಮ್ಮ ಪಕ್ಷದ ನಿಜ ಸ್ವರೂಪ. ನೀವು ಸರ್ವಾಧಿಕಾರಿ ಹಿಟ್ಲರನ ಸಂಪುಟದ ಗೊಬೆಲ್ಲನ ಹೊಸ ಅವತಾರ! ಸುಳ್ಳು ಹೇಳಿ ಪ್ರಚಾರ ಗಿಟ್ಟಿಸಿಕೊಳ್ಳಬೇಕಾದ ಕರ್ಮ ನಿಮಗೇಕೆ ಬಂತು ಅಮಿತ್ ಶಾ ಅವರೇ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.
ಶುಕ್ರವಾರ ಮಂಡ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದ ಅಮಿತ್ ಶಾ ಅವರನ್ನು ಟ್ವೀಟ್ ನಲ್ಲಿ ಎಚ್ ಡಿಕೆ ತರಾಟೆಗೆ ತೆಗೆದುಕೊಂಡಿದ್ದಾರೆ.
ಜೆಡಿಎಸ್ ಗೆದ್ದರೆ ಕರ್ನಾಟಕ ಒಂದು ಕುಟುಂಬದ ಎಟಿಎಂ ಆಗುತ್ತದೆಂದು ಜಾಗಟೆ ಹೊಡೆದಿದ್ದೀರಿ. ಜೆಡಿಎಸ್ ಸರಕಾರ ಬಂದರೆ, ಅದು ಆರೂವರೆ ಕೋಟಿ ಕನ್ನಡಿಗರ ಎಟಿಎಂ ಆಗುತ್ತದೆ. ರೈತರ, ಕಾರ್ಮಿಕರ, ದೀನ ದಲಿತರ, ಅಶಕ್ತರ, ವಿಕಲಚೇತನರ ಎಟಿಎಂ ಆಗುತ್ತದೆ. ಜೆಡಿಎಸ್ ಜನರ ಎಟಿಎಂ. ನಮ್ಮ ಪಾಲಿಗೆ ಎಟಿಎಂ ಎಂದರೆ ‘ ಎನಿ ಟೈಮ್ ಮನುಷ್ಯತ್ವ ‘ ಎಂದು. ನಿಮ್ಮ ಪಾಲಿಗೆ ಅದು ‘ ಎನಿ ಟೈಮ್ ಮೋಸ ‘. ಸುಳ್ಳಿನ ಜಾಗಟೆ ಹೊಡೆದೇ ದೇಶವನ್ನು ಅಧೋಗತಿಗೆ ತಳ್ಳಿದ್ದೀರಿ. ಶಾ ಅವರೇ, ದೇಶದ ಮಾತು ಹಾಗಿರಲಿ; ಕರ್ನಾಟದಲ್ಲಿ ನಿಮ್ಮ ಪಕ್ಷದ ಎಟಿಎಂಗಳ ಪಟ್ಟಿ ಮೂಡಿದೆ ನೋಡಿ ಎಂದು ಪಟ್ಟಿ ಮುಂದಿಟ್ಟಿದ್ದಾರೆ.
ಕರ್ನಾಟಕದ ಬಿಜೆಪಿ ಎಟಿಎಂಗಳು:
1.40% ಕಮೀಷನ್
2.ಪಿಎಸ್ ಐ ಹಗರಣ
3.ಪ್ರಶ್ನೆಪತ್ರಿಕೆ ಸೋರಿಕೆ
3.ಸಹ ಪ್ರಾಧ್ಯಾಪಕರ ನೇಮಕ ಹಗರಣ
4.ವೈದ್ಯ ಪ್ರಾಧ್ಯಾಪಕರ ನೇಮಕ ಹಗರಣ
5.ಕೋವಿಡ್ ನಲ್ಲಿ ಕೊಳ್ಳೆ
6.ಕಾಸಿಗಾಗಿ ಪೋಸ್ಟಿಂಗ್
7.ಗಂಗಾಕಲ್ಯಾಣ ಕರ್ಮಕಾಂಡ
8.ಚಿಲುಮೆ ಹಗರಣ
ಇದು ಅಪೂರ್ಣ ಪಟ್ಟಿ, ಅದು ಕೂಡ ದೊಡ್ಡದಿದೆ! ಬೇಕಾ ಅಮಿತ್ ಶಾ ಅವರೇ?
ಕರ್ನಾಟಕದ ನಿಮ್ಮ ಬಿಜೆಪಿ ಸರಕಾರ ಕೇವಲ 40% ಸರಕಾರ ಅಲ್ಲವೇ ಅಲ್ಲ. ಅದು 55-60% ಸರಕಾರ! ನಿಮಗೂ ಮಾಹಿತಿ ಇರುತ್ತದೆ, ಕರ್ನಾಟಕ ನಿಮ್ಮ ಪಕ್ಷಕ್ಕೂ ಎಟಿಎಂ ಹೌದಲ್ಲವೇ? ಈ ಸತ್ಯ ಯಾಕೆ ಮರೆಮಾಚಿದಿರಿ? ಮಂಡ್ಯ ಜನರ ಮುಂದೆ ನಿಮ್ಮ ದಮ್ಮು ತಾಕತ್ತು ನಡೆಯಲ್ಲ, ಅರಿತುಕೊಳ್ಳಿ ಎಂದು ಕಿಡಿಕಾರಿದ್ದಾರೆ.
ನಿಮ್ಮ ಪಕ್ಷದ ಕುಟುಂಬ ರಾಜಕಾರಣದ ಲೆಕ್ಕ ಗೊತ್ತಿಲ್ಲವೇ? ನಿಮ್ಮ ಸುಪುತ್ರ ಜಯ ಶಾ ಯಾವ ಸೀಮೆ ಕ್ರಿಕೆಟ್ ಪಂಡಿತರು ಎಂದು ಬಿಸಿಸಿಐನಲ್ಲಿ ಕೂತಿದ್ದಾರೆ? ಬಿಸಿಸಿಐನಲ್ಲಿ ಯಾರು ಇರಬೇಕು, ಇರಬಾರದೆಂದು ಸುಪ್ರೀಂ ಕೋರ್ಟಿನ ಸ್ಪಷ್ಟ ಆದೇಶವಿದೆ. ಆ ಆದೇಶಕ್ಕೆ ನಿಮ್ಮ ಮಗ ಅತೀತರೇ? ಈಗ ಹೇಳಿ, ಬಿಸಿಸಿಐ ಯಾರ ಪಾಲಿನ ಎಟಿಎಂ ಎಂದಿರುವ ಎಚ್ ಡಿಕೆ ಕರ್ನಾಟಕ ಬಿಜೆಪಿ ಫ್ಯಾಮಿಲಿ ಪಾಲಿಟಿಕ್ಸ್ ಪಟ್ಟಿ ನೀಡಿದ್ದಾರೆ.
- ಯಡಿಯೂರಪ್ಪ & ಸನ್ಸ್
- ರವಿಸುಬ್ರಮಣ್ಯ – ತೇಜಸ್ವಿ ಸೂರ್ಯ
- ಅಶೋಕ್ -ರವಿ
- ವಿ.ಸೋಮಣ್ಣ & ಸನ್
- ಅರವಿಂದ ಲಿಂಬಾವಳಿ -ರಘು
- ಎಸ್.ಆರ್.ವಿಶ್ವನಾಥ್ – ವಾಣಿ ವಿಶ್ವನಾಥ್
- ಜಗದೀಶ್ ಶೆಟ್ಟರ್ – ಪ್ರದೀಪ್ ಶೆಟ್ಟರ್
- ಮುರುಗೇಶ್ ನಿರಾಣಿ – ಹನುಮಂತ ನಿರಾಣಿ
- ಜಿ ಎಸ್ ಬಸವರಾಜು – ಜ್ಯೋತಿ ಗಣೇಶ್
- ಜಾರಕಿಹೊಳಿ & ಬ್ರದರ್
- ಜೊಲ್ಲೆ & ಜೊಲ್ಲೆ
- ಅಂಗಡಿ ಕುಟುಂಬ
- ಉದಾಸಿ ಕುಟುಂಬ
- ಶ್ರೀರಾಮುಲು ಕುಟುಂಬ
- ರೆಡ್ಡಿ & ರೆಡ್ಡಿ
ಇದು ಕೂಡ ಅಪೂರ್ಣ ಪಟ್ಟಿಯೇ. ರಾಷ್ಟ್ರೀಯ ಪಟ್ಟಿ ಬೇಕಿದ್ದರೆ ಹೇಳಿ, ಇದರ ಹತ್ತರಷ್ಟಿದೆ ಎಂದಿದ್ದಾರೆ.
ಇವತ್ತು ಬೆಂಗಳೂರಿನಿಂದ ಹೊರಡುವ ಮುನ್ನ ಇದಕ್ಕೆಲ್ಲಾ ಉತ್ತರ ಕೊಡಿ ಅಮಿತ್ ಶಾ ಅವರೇ. ಎಷ್ಟಾದರೂ ನೀವು ಸ್ವಯಂ ಘೋಷಿತ ಸಾಚಾ ಅಲ್ಲವೇ? ಉತ್ತರ ಹೇಳಿ ಹೋದರೆ ನಾವೂ ಧನ್ಯರಾಗುತ್ತೇವೆ. ಸತ್ಯ ಅಜರಾಮರ, ಅಸತ್ಯ ನಿಮ್ಮ ಹಣೆಬರ. ಸತ್ಯದ ಮುಂದೆ ದಮ್ಮು ತಾಕತ್ತು ದುರ್ಬಲ. ಪಂಚರತ್ನ ರಥಯಾತ್ರೆ ನಿಮ್ಮ ಕಣ್ಣು ಕುಕ್ಕಿದೆ. ಸಾಲಮನ್ನಾ ನಿಮ್ಮ ನಿದ್ದೆಗೆಡಿಸಿದೆ. ಎಷ್ಟೇ ಆದರೂ ಕೇಂದ್ರದ ಸಹಕಾರ ಸಚಿವರಾದ ನಿಮಗೆ ಸಾಲಮನ್ನಾ ದುಃಸ್ವಪ್ನದಂತೆ ಕಾಡುತ್ತಿದೆ ಎನ್ನುವುದು ಗೊತ್ತು. ಹೆಚ್.ಡಿ.ದೇವೇಗೌಡರು ಮತ್ತು ನನ್ನ ಸಾಧನೆಗಳು ನಿಮ್ಮ ಚಿಂತೆ ಹೆಚ್ಚಿಸಿವೆ. ಇನ್ನಾದರೂ ಸುಳ್ಳಿನ ಜಾಗಟೆ ಬಾರಿಸುವುದು ನಿಲ್ಲಿಸಿ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CID; ಸತತ 2 ಗಂಟೆಗಳ ಕಾಲ ಸಚಿನ್ ಕುಟುಂಬಸ್ಥರ ವಿಚಾರಣೆ
Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ
Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು
Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.