ಶೂನ್ಯ ತ್ಯಾಜ್ಯ ಅಡುಗೆಗೆ ಶ್ಲಾಘನೆ
Team Udayavani, Jan 1, 2023, 12:05 PM IST
ಬೆಂಗಳೂರು: ಅದಮ್ಯ ಚೇತನ ಸಂಸ್ಥೆ ನಡೆಸುತ್ತಿರುವ ಶೂನ್ಯ ತ್ಯಾಜ್ಯ ಅಡುಗೆ ಮನೆಯಂತಹ ಹೊಸ ಸಾಧ್ಯತೆಗಳ ಬಗ್ಗೆ ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ವೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದರು.
ಗವಿಪುರಗುಟ್ಟಳ್ಳಿಯಲ್ಲಿರುವ ಅದಮ್ಯ ಚೇತನ ಸಂಸ್ಥೆಯ-ಶೂನ್ಯ ತ್ಯಾಜ್ಯ ಅಡುಗೆ ಮನೆಗೆ ಭೇಟಿ ನೀಡಿ, ಅಡುಗೆ ಮನೆಯಲ್ಲಿ ಪ್ರತಿದಿನ ನಡೆಯುವಂತಹ ಅಡುಗೆ ತಯಾರಿಯ ಕೆಲಸಗಳ ಬಗ್ಗೆ ವಿಸ್ತೃತವಾಗಿ ಮಾಹಿತಿ ಪಡೆದುಕೊಂಡರು. ಪ್ರತಿದಿನ 70 ಸಾವಿರಕ್ಕೂ ಹೆಚ್ಚು ಊಟ ಈ ಅಡುಗೆ ಮನೆಯಲ್ಲಿ ತಯಾರಿಸಲಾಗುತ್ತದೆ. ಈ ಪ್ರಕ್ರಿಯೆ ಯಲ್ಲಿ ಯಾವುದೇ ತ್ಯಾಜ್ಯ ಉತ್ಪತ್ತಿಯಾ ಗುವುದಿಲ್ಲ. ಹಾಗೆಯೇ, ಉಪಯೋಗಿ ಸಿದ ನೀರಿನ ಮರುಬಳಕೆಯನ್ನು ಮಾಡಲಾಗುತ್ತಿದೆ. ಪೆಟ್ರೋಲಿಯಂ ಉತ್ಪನ್ನಗಳನ್ನ ಬಳಸದೇ ಅಡುಗೆ ಮಾಡುವುದು ಈ ಅಡುಗೆ ಮನೆಯ ಮತ್ತೂಂದು ವಿಶೇಷ ಎಂದು ತೇಜಸ್ವಿನಿ ಅನಂತ್‌ಕುಮಾರ್ ವಿವರಿಸಿದರು.
ಅಮಿತ್ ಶಾ ಅವರು ನಂತರ ಅನಂತ ಸೇವಾ ಉತ್ಸವದಲ್ಲಿ ಭಾಗವಹಿಸಿ ತೇಜಸ್ ಯುದ್ಧವಿಮಾನ ಅಭಿವೃದ್ಧಿಯ ಯಶೋಗಾಥೆ ಎನ್ನುವ ಪುಸ್ತಕದ ಕನ್ನಡ ಅವತರಣಿಕೆಯನ್ನು ಲೋಕಾರ್ಪಣೆಗೊಳಿಸಿದರು.
ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಂದಾಯ ಸಚಿವ ಆರ್.ಅಶೋಕ್, ಸಹಕಾರ ಸಚಿವ ಎಸ್.ಟಿ. ಸೋಮಶೇಖರ್, ಗೃಹ ಸಚಿವ ಅರಗ ಜ್ಞಾನೇಂದ್ರ, ಅದಮ್ಯ ಚೇತನ ಸಂಸ್ಥೆಯ ಟ್ರಸ್ಟಿ ನಂದ ಕುಮಾರ್, ಪ್ರದೀಪ್ ಓಕ್, ಐಶ್ಚರ್ಯ ಅನಂತ ಕುಮಾರ್ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bengaluru: ಮಾವನ ಮಗನ ಕಿರುಕುಳಕ್ಕೆ ಬೇಸತ್ತು ವಿದ್ಯಾರ್ಥಿನಿ ಆತ್ಮಹತ್ಯೆ
Road mishap: ಗೂಡ್ಸ್ ವಾಹನಕ್ಕೆ ದ್ವಿಚಕ್ರ ವಾಹನ ಡಿಕ್ಕಿ; ಸಿಎಆರ್ ಕಾನ್‌ಸ್ಟೇಬಲ್ ಸಾವು
Bengaluru: ಸ್ನೇಹಿತನ ಅಪ್ರಾಪ್ತ ಪುತ್ರಿ ಮೇಲೆ ರೇಪ್ ಮಾಡಿ ಗರ್ಭಿಣಿ ಮಾಡಿದ್ದ ಅಪರಾಧಿ
Bengaluru: ಅಕ್ಕನ ಬುದ್ಧಿಮಾಂದ್ಯ ಮಗಳ ಮೇಲೆಯೇ ಸತತ ಲೈಂಗಿಕ ದೌರ್ಜನ್ಯ ಎಸಗಿದ ಕಾಮುಕ
Bengaluru: ಬಸ್ ಚಾಲಕನ ಮೇಲೆ ಹಲ್ಲೆಗೆ ಯತ್ನ; ಮೆಕ್ಯಾನಿಕ್ ಬಂಧನ
MUST WATCH
ಹೊಸ ಸೇರ್ಪಡೆ
Notice: ಸಂಗೀತ ಕಾರ್ಯಕ್ರಮಕ್ಕೂ ಮೊದಲು ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.