ಮೈಸೂರು- ಬೆಂಗಳೂರು ಹೈವೇಗೆ ಒಡೆಯರ್ ಹೆಸರಿಡಲು ಎಸ್.ಎಂ ಕೃಷ್ಣ ಒತ್ತಾಯ
Team Udayavani, Jan 2, 2023, 12:00 PM IST
ಬೆಂಗಳೂರು: ಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇಗೆ ಎರಡನೇ ನಾಲ್ವಡಿ ಕೃಷ್ಣರಾಜ ಒಡೆಯರ್ ಅವರ ಹೆಸರಿಡುವಂತೆ ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರು, ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ಪತ್ರ ಬರೆದಿದ್ದಾರೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೂ ಎಸ್.ಎಂ.ಕೃಷ್ಣ ಅವರು ಪತ್ರ ಬರೆದಿದ್ದು, ಎಕ್ಸ್’ಪ್ರೆಸ್ ವೇ ಗೆ ಒಡೆಯರ್ ಹೆಸರು ಇಡುವಂತೆ ಒತ್ತಾಯಿಸಿದ್ದಾರೆ.
ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಕಾವೇರಿ ನದಿಯ ಹೆಸರು ಇಡಬೇಕೆಂದು ಸಂಸದ ಪ್ರತಾಪ ಸಿಂಹ್ ಕೇಂದ್ರ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಿಗೆ ಈ ಹಿಂದೆ ಮನವಿ ಮಾಡಿದ್ದರು.
ಈ ಎಕ್ಸ್‌ಪ್ರೆಸ್‌ವೇಯ ಪ್ರಯೋಜನವು ಬಹು ಆಯಾಮಗಳಾಗಿದ್ದು, ಆರ್ಥಿಕ ಬೆಳವಣಿಗೆ, ಸಾಮಾಜಿಕ ಒಳಗೊಳ್ಳುವಿಕೆ ಮತ್ತು ಸಬಲೀಕರಣ, ಪರಿಸರ ಸಂರಕ್ಷಣೆ ಮತ್ತು ಮುಂತಾದವು ಪ್ರಮುಖ ಪ್ರಯೋಜನಗಳಿವೆ ಎಂದು ಹೇಳಿದ್ದರು.
ಇದನ್ನೂ ಓದಿ:ನೋಟ್ ಬ್ಯಾನ್ ನಿರ್ಧಾರಕ್ಕೆ ಸುಪ್ರೀಂ ಸಮ್ಮತಿ: ಕೇಂದ್ರದ ನಿರ್ಧಾರದಲ್ಲಿ ಹಸ್ತಕ್ಷೇಪಕ್ಕೆ ನಕಾರ
ಇಷ್ಟೇ ಅಲ್ಲದೇ ಉತ್ತರ ಪ್ರದೇಶದ ಯಮುನಾ ಎಕ್ಸ್ಪ್ರೆಸ್ವೇ, ಗಂಗಾ ಎಕ್ಸ್ಪ್ರೆಸ್ವೇ, ಮಧ್ಯಪ್ರದೇಶದ ನರ್ಮದಾ ಎಕ್ಸ್ಪ್ರೆಸ್ವೇ ನಂತೆಯೇ ಮೈಸೂರು-ಬೆಂಗಳೂರು ಹೈವೇಗೆ ಕಾವೇರಿ ಎಕ್ಸ್ಪ್ರೆಸ್ ವೇ ಎಂದು ಹೆಸರಿಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿಕೊಂಡಿದ್ದರು. ದಶಪಥ ಹೆದ್ದಾರಿಯಿಂದಾಗಿ ಮೈಸೂರು – ಬೆಂಗಳೂರು ಮಧ್ಯದ ಸುಮಾರು 140 ಕಿ.ಮೀ. ದೂರದ ಪ್ರಯಾಣ ವ್ಯಾಪ್ತಿಯನ್ನು ಕೇವಲ 90 ನಿಮಿಷದಲ್ಲಿ ಕ್ರಮಿಸಬಹುದಾಗಿದೆ. ಸದ್ಯ ಇವೆರಡು ನಗರದ ನಡುವಿನ ಸಂಚಾರ ಸಮಯ ಮೂರು ಗಂಟೆ ಹಿಡಿಯುತ್ತಿದೆ. ಕಾಮಗಾರಿ ಬಳಿಕ ಪ್ರಯಾಣ ಸಮಯ ಅರ್ಧದಷ್ಟು ಕಡಿಮೆ ಆಗಲಿದೆ ಎಂದು ಸಚಿವ ನಿತಿನ್ ಗಡ್ಕರಿ ಈ ಹಿಂದೆ ತಿಳಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.