ನೇಣು ಬಿಗಿದ ಸ್ಥಿತಿಯಲ್ಲಿ ತಾಯಿ ಶವ.. ರೈಲ್ವೆ ಹಳಿ ಮೇಲೆ ಮಗನ ಶವ ಪತ್ತೆ
ತಾಯಿ ನಿಗೂಢ ಸಾವಿನ ಬೆನ್ನಲ್ಲೇ ಮಗ ಆತ್ಮಹತ್ಯೆ
Team Udayavani, Jan 2, 2023, 3:33 PM IST
ಮಂಡ್ಯ: ತಾಯಿಯ ಶವ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯಲ್ಲಿಯೇ ಪತ್ತೆಯಾದ ಬೆನ್ನಲ್ಲೇ ಮಗನು ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ದುರ್ಘಟನೆ ಮಂಡ್ಯದಲ್ಲಿ ನಡೆದಿದೆ.
ಸುಭಾಷ್ ನಗರದ ಕ್ರಿಶ್ಚಿಯನ್ ಕಾಲೋನಿಯ ನಿವೃತ್ತ ಶಿಕ್ಷಕಿ ವೀಣಾ ಜೋದಿನಿ ಮತ್ತು ಇವರ ಮಗ ನಿತಿನ್ ಸಾವನ್ನಪ್ಪಿದವರಾಗಿದ್ದು, ಇವರ ಸಾವಿನ ಸುತ್ತ ಹಲವು ಅನುಮಾನ ಸೃಷ್ಟಿಸಿದೆ.
ಕ್ರಿಶ್ಚಿಯನ್ ಕಾಲೋನಿ ಎರಡನೇ ಕ್ರಾಸ್ ನ ಮನೆಯಲ್ಲಿ ಶಿಕ್ಷಕಿ ವೀಣಾ ಜೋದಿನಿಯವರ ಮೃತದೇಹ ಹೊಸ ವರ್ಷದ ಮೊದಲ ದಿನವಾದ ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಇವರ ಮಗ ನಿತಿನ್ ಶವ ಮಂಡ್ಯ ನಗರದ ಹೊರವಲಯ ವಿ.ಸಿ ಫಾರಂ ಗೇಟ್ ನ ಬಳಿ ರೈಲ್ವೆ ಹಳಿ ಮೇಲೆ ಪತ್ತೆಯಾಗಿದ್ದು, ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಭಿನವ ಭಾರತಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕರ್ತವ್ಯ ನಿರ್ವಹಿಸಿ ನಿವೃತ್ತರಾಗಿದ್ದ ವೀಣಾ ಮಗನ ಜೊತೆಯಲ್ಲಿ ನಿವೃತ್ತ ಜೀವನ ಮಾಡುತ್ತಿದ್ದರು. ಆರ್.ಪಿ ರಸ್ತೆಯಲ್ಲಿದ್ದ ತಮಗೆ ಸೇರಿದ್ದ ಆಸ್ತಿಯನ್ನು ಎರಡು ವರ್ಷದ ಹಿಂದೆ ಮಾರಾಟ ಮಾಡಿದ್ದರು, ಆಸ್ತಿ ಮಾರಾಟದ ಹಣವನ್ನು ಮಗ ನಿತಿನ್ ದುಂದು ವೆಚ್ಚ ಮಾಡಿ ಬೇಕಾಬಿಟ್ಟಿ ಕಳೆದಿದ್ದನು, ಅಷ್ಟೇ ಅಲ್ಲದೆ ಲಕ್ಷಾಂತರ ರೂ ಸಾಲ ಮಾಡಿಕೊಂಡಿದ್ದನು.
ಇದನ್ನೂ ಓದಿ:ನಾವು ಜನರ ಧ್ವನಿ ಎತ್ತಿದಾಗ ಹೆದರಿ ಮಹಾದಾಯಿ ಡಿಪಿಆರ್ ಗೆ ಅನುಮತಿ: ಡಿ.ಕೆ.ಶಿವಕುಮಾರ್
ಹಣಕ್ಕಾಗಿ ತಾಯಿಯನ್ನು ಪೀಡಿಸುತ್ತಿದ್ದನು ಎನ್ನಲಾಗಿದ್ದು, ಕ್ರಿಸ್ಮಸ್ ಹಬ್ಬವನ್ನು ತಾಯಿ -ಮಗ ಆಚರಿಸಿದ್ದರು. ಹೊಸ ವರ್ಷವನ್ನು ಸಂಭ್ರಮದಿಂದ ಸ್ವಾಗತಿಸಬೇಕಾಗಿತ್ತು. ಅಷ್ಟರಲ್ಲೆ ಹೊಸ ವರ್ಷದ ಮೊದಲ ದಿನ ತನ್ನ ಮನೆಯಲ್ಲಿ ನಿವೃತ್ತ ಶಿಕ್ಷಕಿ ವೀಣಾ ಜೋದಿನಿರ ಮೃತದೇಹ ಮನೆಯ ಕಿಟಕಿಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿತ್ತು.
ನಿವೃತ್ತ ಶಿಕ್ಷಕಿ ಎತ್ತರವಾಗಿದ್ದು, ಆದರೆ ಅಷ್ಟು ಎತ್ತರ ಇರದ ಕಿಟಕಿಗೆ ನೇಣು ಬಿಗಿದುಕೊಳ್ಳಲು ಸಾಧ್ಯವೇ ಎಂಬ ಅನುಮಾನ ಸೃಷ್ಟಿಯಾಗಿ ಮಗನೇ ತಾಯಿಯನ್ನು ಕೊಂದಿರಬಹುದು ಎಂಬ ಶಂಕೆ ವ್ಯಕ್ತವಾಗಿತ್ತು.
ಪಶ್ಚಿಮ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಮಿಮ್ಸ್ ಗೆ ರವಾನಿಸಿದ್ದರು, ತಾಯಿಯ ಸಾವಿನ ಬಗ್ಗೆ ನಿತಿನ್ ನನ್ನ ಪೊಲೀಸರು ವಿಚಾರಣೆ ಮಾಡಿದ್ದರು.
ತಾಯಿಯ ಶವ ಶವಗಾರದಲ್ಲಿ ಇರುವ ಸಮಯದಲ್ಲಿ ಮಗನ ಶವ ಕೂಡ ಸೋಮವಾರ ಬೆಳಗ್ಗೆ ವಿ ಸಿ ಫಾರಂ ಗೇಟ್ ಬಳಿಯ ರೈಲ್ವೆ ಹಳಿ ಮೇಲೆ ಪತ್ತೆಯಾಗಿದ್ದು, ರೈಲಿಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ತಾಯಿ ಕೊಲೆಗೈದ ಪ್ರಾಯಶ್ಚಿತ್ತಕ್ಕೆ ರೈಲಿಗೆ ಸಿಲುಕಿ ಆತ್ಮಹತ್ಯೆ ಮಾಡಿ ಕೊಂಡಿದ್ದಾನಾ ಅಥವಾ ತಾಯಿಯ ಸಾವಿನಿಂದ ಮನನೊಂದಿದ್ದನಾ, ಒಟ್ಟಾರೆ ತಾಯಿಯ ಸಂಶಯಾಸ್ಪದ ಸಾವು, ಮಗನ ಆತ್ಮಹತ್ಯೆ ಹಲವು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.
ನಿವೃತ್ತ ಶಿಕ್ಷಕಿಯ ಸಾವಿನ ರಹಸ್ಯವನ್ನು ಪೊಲೀಸರು ಭೇದಿಸಬೇಕಾಗಿದ್ದು, ಮಗನ ಆತ್ಮಹತ್ಯೆ ಕಾರಣವನ್ನು ಪತ್ತೆ ಹಚ್ಚಬೇಕಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನರೇಂದ್ರಸ್ವಾಮಿ ಮಂತ್ರಿಗಿರಿಗೆ ಹರಕೆ: ನ್ಯಾಯಮೂರ್ತಿ ವಜಾಕ್ಕೆ ಆಗ್ರಹ
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
MUST WATCH
ಹೊಸ ಸೇರ್ಪಡೆ
ಬಿ.ವೈ.ವಿಜಯೇಂದ್ರ ಕಲೆಕ್ಷನ್ ಮಾಸ್ಟರ್, ಧೀಮಂತ ತಂದೆಯ ಜೈಲಿಗೆ ಕಳಿಸಿದ ಮಹಾನಾಯಕ: ಯತ್ನಾಳ್
Dubai: ಬಹುಮುಖ ಪ್ರತಿಭೆಯ ದುಬಾೖಯ ಶ್ರೀಖಾ ಶೆಣೈ
Ban: ಏರ್ ಶೋ ವೇಳೆ ಕಟ್ಟಡ ನಿರ್ಮಾಣಕ್ಕಾಗಿ ಕ್ರೇನ್ ಬಳಕೆ ನಿಷೇಧ: ಪಾಲಿಕೆ ಆದೇಶ
ಅರಿವಿಲ್ಲ ಎಂಬುದು ಕೀಳರಿಮೆಯಲ್ಲ-“ಒಂದು ಹಲವಾಗುತ್ತೆ, ಹಲವು ಒಂದಾಗುತ್ತೆ’: ದೇವಲೋಕದ ಕಥೆಗಳು
EV: ಇವಿ ಬಳಕೆಗೆ ಉತ್ತೇಜನ: ದೇಶದಲ್ಲೇ ನಂಬರ್ 1 ಸ್ಥಾನ ಪಡೆದ ಕರ್ನಾಟಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.