ಸಂತೆಕಟ್ಟೆ ಓವರ್ಪಾಸ್ ಕಾಮಗಾರಿಗೆ ಸಿದ್ಧತೆ
Team Udayavani, Jan 3, 2023, 6:00 AM IST
ಉಡುಪಿ: ಉಡುಪಿ- ಕುಂದಾಪುರ ಮುಖ್ಯರಸ್ತೆಯ ರಾಷ್ಟ್ರೀಯ ಹೆದ್ದಾರಿ-66ರ ಸಂತೆಕಟ್ಟೆ ಜಂಕ್ಷನ್ನಲ್ಲಿ ವೆಹಿಕ್ಯೂಲರ್ ಓವರ್ಪಾಸ್ ನಿರ್ಮಾಣ ಕಾಮಗಾರಿಗೆ ಸಿದ್ಧತೆ ನಡೆಸಲಾಗುತ್ತಿದೆ.
ಹಲವಾರು ವರ್ಷಗಳಿಂದ ಸಂಚಾರ ದಟ್ಟಣೆ, ಅಪಘಾತಗಳ ಕೇಂದ್ರವಾಗಿದ್ದ ಈ ಜಂಕ್ಷನ್ನಲ್ಲಿ ಓವರ್ಪಾಸ್ ನಿರ್ಮಿಸುವಂತೆ ಸಾರ್ವಜನಿಕ ವಲಯದಲ್ಲಿ ಬೇಡಿಕೆ ಹೆಚ್ಚಿತ್ತು. ಅನಂತರ ಇಲ್ಲಿ ಓವರ್ಪಾಸ್ ನಿರ್ಮಾಣ ಕುರಿತ ಪ್ರಸ್ತಾವನೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್ಎಚ್ಎಐ) 27.4 ಕೋ. ರೂ. ವೆಚ್ಚದ ಅನುಮೋದನೆ ನೀಡಿದ್ದು, ಇದೀಗ ಟೆಂಡರ್ ಪಕ್ರಿಯೆ ಪೂರ್ಣಗೊಂಡು ಕಾಮಗಾರಿಗೆ ತಯಾರಿ ನಡೆಸಲಾಗುತ್ತಿದೆ. ಟ್ರಿನಿಟಿ ಕನ್ಸ್ಟ್ರಕ್ಷನ್ ಸಂಸ್ಥೆಯು ಓವರ್ಪಾಸ್ ನಿರ್ಮಾಣ ಗುತ್ತಿಗೆ ಪಡೆದಿದೆ.
ಸೋಮವಾರದಿಂದ ಜಂಕ್ಷನ್ನಲ್ಲಿ ವಾಹನಗಳು ಸಂಚರಿಸದಂತೆ ಬ್ಯಾರಿಕೇಡ್ ಇಟ್ಟು ನಿರ್ಬಂಧಿಸಲಾಗಿದ್ದು, ಸರ್ವಿಸ್ ರಸ್ತೆ ಮೂಲಕ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಜ.12ಕ್ಕೆ ಭೂಮಿ ಪೂಜೆ ಜರಗಲಿದ್ದು, ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಬಹುದು ಎಂದು ಹೆದ್ದಾರಿ ಸಚಿವಾಲಯದ ಮೂಲಗಳು ತಿಳಿಸಿದೆ.
ಸಂತೆಕಟ್ಟೆ ಜಂಕ್ಷನ್ ಅವ್ಯವಸ್ಥೆ ಸಂಬಂಧಿಸಿ “ಉದಯವಾಣಿ’ ಸರಣಿ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Kaup ಪುರಸಭೆ: ರಸ್ತೆ ಬದಿಯಲ್ಲಿ ಖಾಲಿ ಬಿಯರ್ ಬಾಟಲಿ ಸದ್ದು
Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ
Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ
ಉಡುಪಿ: ಶಿಕ್ಷಣ ಇಲಾಖೆಯಲ್ಲಿ ಪ್ರತ್ಯೇಕ ಪರಿಹಾರ ನಿಧಿಯೇ ಇಲ್ಲ !
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Davanagere: ʼಸೋಲಿಲ್ಲದ ಸರದಾರʼ ಎನಿಸಿದ್ದ ʼಬೆಳ್ಳೂಡಿ ಕಾಳಿʼ ಟಗರು ಅನಾರೋಗ್ಯದಿಂದ ನಿಧನ
IFFI 2024; ಫಿಲ್ಮ್ ಬಜಾರ್: ಮತ್ತೊಂದು ಯಶಸ್ವಿ ಮುನ್ನುಡಿಯೊಂದಿಗೆ ಉತ್ಸವ ಸಮಾಪನ
IPL Mega Auction:1.1 ಕೋಟಿ ರೂ.ಗೆ ಹರಾಜಾದ 13ರ ಬಾಲಕ !!
Udupi: ಶ್ರೀ ಕೃಷ್ಣಮಠ; 18 ದಿನಗಳ ಭಗವದ್ಗೀತಾ ಹರಿಕಥಾ ಸರಣಿ ಕಾರ್ಯಕ್ರಮಕ್ಕೆ ಚಾಲನೆ
Israel; ಹೆಜ್ಬುಲ್ಲಾ ಜತೆ ‘ತಾತ್ವಿಕವಾಗಿ’ ಕದನ ವಿರಾಮ ಒಪ್ಪಂದ :ವರದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.