ಉಡುಪಿ ಜಿಲ್ಲೆ: ನಾಳೆ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ
Team Udayavani, Jan 3, 2023, 7:35 AM IST
ಉಡುಪಿ: ಚೀನ, ಕೊರಿಯಾ, ಜಪಾನ್ ಮುಂತಾದ ದೇಶಗಳಲ್ಲಿ ಈಗಾಗಲೇ ಕೋವಿಡ್ ಪ್ರಕರಣಗಳು ಹೆಚ್ಚುತ್ತಿದ್ದು, ನಾಲ್ಕನೆ ಅಲೆಯಲ್ಲಿ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಜ. 4ರಂದು ಜಿಲ್ಲೆಯ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಡೋಸ್ ಲಸಿಕಾ ಮೇಳ ಆಯೋಜಿಸಲಾಗಿದೆ.
ಕೋವ್ಯಾಕ್ಸಿನ್ ಪ್ರಥಮ ಡೋಸ್ ಲಸಿಕೆ ಪಡೆದು 28 ದಿನಗಳು ಮೀರಿದವರು, 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆಯಲು ಮತ್ತು 2ನೇ ಡೋಸ್ ಕೋವ್ಯಾಕ್ಸಿನ್ ಲಸಿಕೆ ಪಡೆದು 6 ತಿಂಗಳು ಪೂರೈಸಿದವರು ಕೋವ್ಯಾಕ್ಸಿನ್ ಮುನ್ನೆಚ್ಚರಿಕೆ ಲಸಿಕಾ ಡೋಸ್ (ಬೂಸ್ಟರ್ ಡೋಸ್) ಪಡೆಯಲು ಹತ್ತಿರದ ಸರಕಾರಿ ಆಸ್ಪತ್ರೆಯನ್ನು ಸಂಪರ್ಕಿಸಬಹುದು. ಲಸಿಕಾಕರಣವನ್ನು ಖಚಿತಪಡಿಸಿಕೊಂಡು ಮತ್ತು ಲಸಿಕೆಯನ್ನು ನಿಗದಿ ಪಡಿಸಿಕೊಂಡು ಲಸಿಕೆ ಪಡೆಯಬಹುದು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.