15ನೇ ಹಣಕಾಸು ಆಯೋಗ ನಿಗದಿಯಾಗಿದ್ದ ಬಹುಪಾಲು ಅನುದಾನ ಬಿಡುಗಡೆ


Team Udayavani, Jan 3, 2023, 2:59 PM IST

15ನೇ ಹಣಕಾಸು ಆಯೋಗ ನಿಗದಿಯಾಗಿದ್ದ ಬಹುಪಾಲು ಅನುದಾನ ಬಿಡುಗಡೆ

ಉಡುಪಿ: ಉಭಯ ಜಿಲ್ಲೆಯ ಗ್ರಾಮ ಪಂಚಾಯತ್‌ ಗಳಿಗೆ 2021-22ನೇ ಸಾಲಿನಲ್ಲಿ 15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಲಾಗಿರುವ ಬಹುಪಾಲು ಅನುದಾನ ಬಿಡುಗಡೆಯಾಗಿದ್ದು, ನಿರ್ದಿಷ್ಟ ಉದ್ದೇಶಕ್ಕೆ ಬಳಕೆಯೂ ಆಗುತ್ತಿದೆ.

2022-23ನೇ ಸಾಲಿಗೆ ಈಗಾಗಲೇ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಲಾಗಿದ್ದು, ಆಯೋಗದಿಂದ ಅನುದಾನ ಹಂಚಿಕೆಯ ಆಧಾರದಲ್ಲಿ ನೇರವಾಗಿ ಗ್ರಾ.ಪಂ. ಗಳಿಗೆ ಹಣ ಬರಲಿದೆ. ಇದರಲ್ಲಿ ಜಿ.ಪಂ. ಹಾಗೂ ತಾ.ಪಂ. ಪಾಲನ್ನು ಸರಕಾರವೇ ಪ್ರತ್ಯೇಕಿಸಲಿದೆ. ದ.ಕ.ದಲ್ಲಿ ಪೂರ್ಣ ಬಳಕೆ ದ.ಕ. ಜಿಲ್ಲೆಯ 223 ಗ್ರಾ.ಪಂ.ಗಳಿಗೆ 15ನೇ ಹಣಕಾಸು ಆಯೋಗದಿಂದ 2021-22ನೇ ಸಾಲಿಗೆ 67.65 ಕೋ.ರೂ.ಗಳ ಅನುದಾನ ನಿಗದಿಪಡಿಸಿ, ಪೂರ್ಣ ಪ್ರಮಾಣದಲ್ಲಿ ಬಿಡುಗಡೆಯನ್ನು ಮಾಡಲಾಗಿದೆ.

ಉಡುಪಿ ಜಿಲ್ಲೆಯ 155 ಗ್ರಾ.ಪಂ. ಗಳಿಗೆ ನಿಗದಿ ಪಡಿಸಿದ್ದ 50.17 ಕೋ. ರೂ.ಗಳಲ್ಲಿ 46.24 ಕೋ.ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಇದರಲ್ಲಿ ದ.ಕ. ಜಿಲ್ಲೆಯಲ್ಲಿ ಹಂಚಿಕೆಯಾಗಿರುವ ಅನುದಾನವನ್ನು ಪೂರ್ಣ ಪ್ರಮಾಣದಲ್ಲಿ ಕೆ ಮಾಡಿಕೊಳ್ಳಲಾಗಿದೆ. ಉಡುಪಿ ಜಿಲ್ಲೆಗೆ ಇನ್ನು ಅನುದಾನ ಬರಬೇಕಿದೆ. ಹಾಗೆಯೇ ರಾಜ್ಯ ಸರಕಾರ ಶಾಸನಬದ್ಧ ಅನುದಾನದಡಿ ಉಡುಪಿ  ಜಿಲ್ಲೆಗೆ 23.45 ಕೋ.ರೂ.ಗೂ ಅಧಿಕ ಹಾಗೂ ದ. ಕ. ಜಿಲ್ಲೆಗೆ 33.77 ಕೋ.ರೂ. ಗೂ ಅಧಿಕ
ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದರು.

ಕ್ರಿಯಾಯೋಜನೆ ಪ್ರತಿ ವರ್ಷವೂ ಗ್ರಾ. ಪಂ.ನಿಂದ ಹಣಕಾಸು ಆಯೋಗದ ಅನುದಾನಕ್ಕೆ ಕ್ರಿಯಾಯೋಜನೆ ಸಿದ್ಧಪಡಿಸಿ ಕಳುಹಿಸಬೇಕು. ಆರ್ಥಿಕ ವರ್ಷದ ಆರಂಭದಲ್ಲಿ ಕ್ರಿಯಾಯೋಜನೆಯ ಅನುಸಾರ ಆಯಾ ಗ್ರಾ.ಪಂ.ಗಳಿಗೆ ನೇರವಾಗಿ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಸರಕಾರದಿಂದ ಗ್ರಾ.ಪಂ., ತಾ.ಪಂ. ಹಾಗೂ ಜಿ.ಪಂಗಳಿಗೆ ಪ್ರತ್ಯೇಕವಾಗಿ ಅನುದಾನವನ್ನು ಮೀಸಲಿಟ್ಟು ಬಿಡುಗಡೆ ಮಾಡಲಾಗುತ್ತದೆ. ಕ್ರಿಯಾಯೋಜನೆಯಲ್ಲಿ ಸೂಚಿಸಿರುವಂತೆ ಅನುದಾನದ ಬಳಕೆಯನ್ನು ಮಾಡಬೇಕಾಗುತ್ತದೆ.

ಬಳಕೆ ಹೇಗೆ?
ಮೀಸಲಿಟ್ಟಿರುವ ಒಟ್ಟು ಅನುದಾನದ ಶೇ.40ರಷ್ಟು ಮೂಲ ಅನುದಾನದ ರೂಪದಲ್ಲಿ ಶೇ.60ರಷ್ಟು ನಿರ್ಬಂದಿತ ಅನುದಾನವಾಗಿ ಪರಿಗಣಿಸಲಾಗುತ್ತದೆ. ಮೂಲ ಅನುದಾನವನ್ನು ಕಚೇರಿ ವೆಚ್ಚ ಅಥವಾ ಸಂಬಳ ಪಾವತಿ ಇತ್ಯಾದಿಗಳಿಗೆ ಬಳಸಲು ಅವಕಾಶ ಇರುವುದಿಲ್ಲ. ಶೇ.60ರಷ್ಟು ಅನುದಾನವನ್ನು ನೈರ್ಮಲ್ಯತೆಗೆ ಆದ್ಯತೆ ನೀಡಿ, ಬಯಲು ಬಹಿರ್ದೆಸೆ ಮುಕ್ತಗೊಳಿಸುವ ನಿಟ್ಟಿನಲ್ಲಿ ಕ್ರಮ ವಹಿಸಲು ಬಳಕೆ ಮಾಡಲಾಗುತ್ತದೆ. ಕುಡಿಯುವ ನೀರು ಸರಬರಾಜು,
ಮಳೆ ನೀರ ಕೊಯ್ಲು ಮತ್ತು ಮಳೆ ನೀರ ಮರುಬಳಕೆ ಉ ದ್ದೇಶದಿಂದ ಈ ಅನುದಾನ ಬಳಸಲಾಗುತ್ತದೆ. ಶೇ.60ರಷ್ಟು ಅನುದಾನದಲ್ಲಿ ನಿರ್ದಿಷ್ಟ ಪ್ರಮಾಣವನ್ನು ಕಡ್ಡಾಯವಾಗಿ ಕುಡಿಯುವ ನೀರು ಪೂರೈಕೆಗೆ ಮೀಸಲಿಡಲೇಬೇಕು.

ನೇರ ಗ್ರಾ.ಪಂ.ಗೆ
15ನೇ ಹಣಕಾಸು ಆಯೋಗದಿಂದ ನಿಗದಿಪಡಿಸಿರುವ ಅನುದಾನದಲ್ಲಿ ಬಹುಪಾಲು ಬಂದಿದೆ. ಈ ಅನುದಾನವು ನೇರವಾಗಿ ಆಯಾ ಗ್ರಾ.ಪಂ.ಗಳಿಗೆ ತಲುಪಲಿದೆ. ನಿರ್ದಿಷ್ಟ ಮಾರ್ಗಸೂಚಿಯಂತೆ ಆಯಾ ಉದ್ದೇಶಕ್ಕೆ ಗ್ರಾ. ಪಂ.ಗಳಲ್ಲಿ ಬಳಕೆ ಮಾಡಿಕೊಳ್ಳಲಾಗುತ್ತಿದೆ.
– ಪ್ರಸನ್ನ ಎಚ್‌., ಸಿಇಒ, ಜಿ.ಪಂ. ಉಡುಪಿ

ಟಾಪ್ ನ್ಯೂಸ್

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

Hassan: ಅಂಗಾಂಗ ದಾನ ಮಾಡಿ ಸಾವಿನಲ್ಲೂ ಸಾರ್ಥಕ್ಯ ಮೆರೆದ ಕಾರ್ಮಿಕನ ಕುಟುಂಬ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ

HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಕಿಂಡಿ ಅಣೆಕಟ್ಟೆಗೆ ಹಲಗೆ ಹಾಕುವ ಪ್ರಕ್ರಿಯೆ ಆರಂಭ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಪ್ರಧಾನಮಂತ್ರಿ ಬೆಳೆ ವಿಮೆ: ನೋಂದಣಿಗೆ ಅಧಿಸೂಚನೆ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಮಲ್ಪೆಯಲ್ಲಿ ಮೀನುಗಾರಿಕೆ ಪೂರಕ ಯೋಜನೆ ಅನುಷ್ಠಾನಕ್ಕೆ ಕ್ರಮ: ಸಚಿವ ವೈದ್ಯ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Udupi: ಗೀತಾರ್ಥ ಚಿಂತನೆ-108: ಕರ್ತವ್ಯಚ್ಯುತಿಯ ದುಃಖದಿಂದ ಆತ್ಮವಿಕಾಸ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

Manipal: ಮಾಹೆಯ ಪ್ರಸನ್ನ ಸ್ಕೂಲ್‌ ಆಪ್‌ ಪಬ್ಲಿಕ್‌ ಹೆಲ್ತ್‌ಗೆ ಶ್ರೇಷ್ಠತೆಯ ಮಾನ್ಯತೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು: ತಿಮ್ಮಾಪುರ

R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ

“ಬಳ್ಳಾರಿ ಜಿಲ್ಲಾಸ್ಪತ್ರೆ: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್‌ ಮಾದರಿಯಲ್ಲಿ ವಿಶೇಷ ಪೊಲೀಸ್‌ ಪಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.