ಕಳಸಾ-ಭಂಡೂರಿ ಯೋಜನೆಯಿಂದ ಖಾನಾಪುರ, ಮಲಪ್ರಭಾ ದಡದ ಗ್ರಾಮಗಳಿಗೆ ಪ್ರವಾಹದ ಭೀತಿ
ಕಳಸಾ-ಭಂಡೂರಿ ಯೋಜನೆಗೆ ಪರಿಸರ ಹೋರಾಟಗಾರರಿಂದ ತೀವ್ರ ವಿರೋಧ
Team Udayavani, Jan 3, 2023, 4:57 PM IST
ಪಣಜಿ: ಕಳಸಾ-ಭಂಡೂರಿ ನಾಲೆಯಿಂದ ನೀರು ಹರಿಸುವ ಕರ್ನಾಟಕದ ಪರಿಷ್ಕೃತ ಯೋಜನೆಗೆ ಕೇಂದ್ರ ಜಲ ಆಯೋಗ ಅನುಮೋದನೆ ನೀಡಿದೆ. ಇದಕ್ಕೆ ಅಡ್ಡಿತರುವ ನಿಟ್ಟಿನಲ್ಲಿ ಗೋವಾ ಸರ್ಕಾರ ಮತ್ತೆ ತನ್ನ ಪ್ರಯತ್ನ ಆರಂಭಿಸಲು ಮುಂದಾಗಿದೆ. ಇಷ್ಟೇ ಅಲ್ಲದೆಯೇ ಗೋವಾದಲ್ಲಿ ಪರಿಸರ ಹೋರಾಟಗಾರರೂ ಕೂಡ ತಮ್ಮ ಹೋರಾಟ ಆರಂಭಿಸುವ ಮೂಲಕ ಕರ್ನಾಟಕದ ಈ ಜನ ಯೋಜನೆಗೆ ಅಡ್ಡಗಾಲು ಹಾಕಲು ಪ್ರಯತ್ನಿಸುತ್ತಿರುವುದು ಕಂಡುಬರುತ್ತಿದೆ.
ಪರಿಸರ ಹೋರಾಟಗಾರ ರಾಜೇಂದ್ರ ಕೇರಕರ್ ಆಕ್ರೋಶ:
ನೈಸರ್ಗಿಕ ಸಂಪತ್ತನ್ನು ಒತ್ತುವರಿ ಮಾಡಿಕೊಂಡು ನೈಸರ್ಗಿಕ ಸರಪಳಿ ಒಡೆಯುವ ಕೆಲಸ ಕರ್ನಾಟಕದಿಂದ ಆರಂಭವಾಗುತ್ತಿದೆ. ಕಳಸಾ-ಭಂಡೂರಿ ನೀರನ್ನು ಮಲಪ್ರಭಾಗೆ ಹರಿಸಿದರೆ ಖಾನಾಪುರ ಪಟ್ಟಣ ಸೇರಿ ಮಲಪ್ರಭಾ ದಡದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಲಿದೆ. ಸಮಯಕ್ಕೆ ಸರಿಯಾಗಿ ಈ ಯೋಜನೆ ವಿರುದ್ಧ ಧ್ವನಿ ಎತ್ತುವ ಅಗತ್ಯವಿದೆ ಎಂದು ಗೋವಾದ ಪರಿಸರವಾದಿ ರಾಜೇಂದ್ರ ಕೇರ್ಕರ್ ಅಭಿಪ್ರಾಯ ವ್ಯಕ್ತಪಡಿಸಿದರು.
ಸ್ಥಳೀಯ ಕಾರ್ಯಕ್ರಮವೊಂದರಲ್ಲಿ ಉಪಸ್ಥಿತರಿದ್ದ ಅವರು ಸ್ಥಳೀಯ ಸುದ್ದೀವಾಹಿನಿಯೊಂದಿಗೆ ಮಾತನಾಡಿ- 2002 ರಲ್ಲಿ ಕರ್ನಾಟಕ ಸರ್ಕಾರವು ಮಹದಾಯಿ ನದಿಯ ಉಪನದಿಗಳಾದ ಕಳಸಾ, ಭಂಡೂರಿ ಕಾಲುವೆಗಳಿಂದ ಮಲಪ್ರಭಾ ನದಿ ಜಲಾನಯನ ಪ್ರದೇಶಕ್ಕೆ ನೀರನ್ನು ತಿರುಗಿಸಿ ಹುಬ್ಬಳ್ಳಿ ಧಾರವಾಡಕ್ಕೆ ಕೊಂಡೊಯ್ಯಲು ಯೋಜಿಸಿತ್ತು. ಆ ಬಳಿಕ ಗೋವಾ ಸರ್ಕಾರ ಕೇಂದ್ರ ಸರ್ಕಾರದಿಂದ ಮಧ್ಯಸ್ಥಿಕೆ ರಚನೆಗೆ ಒತ್ತಾಯಿಸಿತ್ತು.
2018 ರಲ್ಲಿ, ಮಹದಾಯಿ ಜಲ ಮಧ್ಯಸ್ಥಿಕೆ ಕರ್ನಾಟಕಕ್ಕೆ 3.9 ಟಿಎಂಸಿ ನೀರನ್ನು ಬಳಸಲು ಅವಕಾಶ ಮಾಡಿಕೊಟ್ಟಿತು. ಇದೆಲ್ಲ ನಡೆಯುತ್ತಿರುವಾಗ ಕರ್ನಾಟಕ ಸರಕಾರ ಕಣಕುಂಬಿಯ ಮೌಳಿ ದೇವಸ್ಥಾನದ ಎದುರಿನ ನೀರಿನ ತೊಟ್ಟಿಯನ್ನು ಧ್ವಂಸಗೊಳಿಸಿ ಗೋಡೆ ಕಟ್ಟುವುದು, ಕಾಲುವೆಗಳನ್ನು ನಿರ್ಮಿಸುವುದು ಮುಂತಾದ ಕುತಂತ್ರಗಳನ್ನು ಮುಂದುವರೆಸಿತು. ಇದರಿಂದ ಆ ಪ್ರದೇಶದಲ್ಲಿ ನೈಸರ್ಗಿಕ ಜಲಮೂಲ ನಾಶವಾಗಿದೆ ಎಂದು ಪರಿಸರ ಹೋರಾಟಗಾರ ರಾಜೇಂದ್ರ ಕೇರಕರ್ ಆರೋಪಿಸಿದರು.
ಇದನ್ನೂ ಓದಿ : ಸರ್ಕಾರದ ಸಾಧನೆಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
MUST WATCH
ಹೊಸ ಸೇರ್ಪಡೆ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
ನವೆಂಬರ್ 26-30: ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.