ಉಡುಪಿ: ಸಂತೆಕಟ್ಟೆ ಓವರ್‌ಪಾಸ್ ಕಾಮಗಾರಿಗೆ ಸಿದ್ಧತೆ
ಟ್ರಿನಿಟಿ ಕನ್‌ಸ್ಟ್ರಕ್ಷನ್ ಸಂಸ್ಥೆಯು ಓವರ್‌ಪಾಸ್ ನಿರ್ಮಾಣ ಗುತ್ತಿಗೆ ಪಡೆದಿದೆ.
Team Udayavani, Jan 3, 2023, 10:25 AM IST
ಉಡುಪಿ: ಉಡುಪಿ- ಕುಂದಾಪುರ ಮುಖ್ಯರಸ್ತೆಯ ರಾಷ್ಟ್ರೀಯ ಹೆದ್ದಾರಿ-66ರ ಸಂತೆಕಟ್ಟೆ ಜಂಕ್ಷನ್‌ನಲ್ಲಿ ವೆಹಿಕ್ಯೂಲರ್ ಓವರ್‌ಪಾಸ್ ನಿರ್ಮಾಣ ಕಾಮಗಾರಿಗೆ ಸಿದ್ಧತೆ ನಡೆಸಲಾಗುತ್ತಿದೆ. ಹಲವಾರು ವರ್ಷಗಳಿಂದ ಸಂಚಾರ ದಟ್ಟಣೆ, ಅಪಘಾತಗಳ ಕೇಂದ್ರವಾಗಿದ್ದ ಈ ಜಂಕ್ಷನ್‌ನಲ್ಲಿ ಓವರ್‌ಪಾಸ್ ನಿರ್ಮಿಸುವಂತೆ ಸಾರ್ವಜನಿಕ ವಲಯದಲ್ಲಿ ಬೇಡಿಕೆ ಹೆಚ್ಚಿತ್ತು.
ಅನಂತರ ಇಲ್ಲಿ ಓವರ್‌ಪಾಸ್ ನಿರ್ಮಾಣ ಕುರಿತ ಪ್ರಸ್ತಾವನೆಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ) 27.4 ಕೋ. ರೂ. ವೆಚ್ಚದ ಅನುಮೋದನೆ ನೀಡಿದ್ದು, ಇದೀಗ ಟೆಂಡರ್ ಪಕ್ರಿಯೆ ಪೂರ್ಣಗೊಂಡು ಕಾಮಗಾರಿಗೆ ತಯಾರಿ ನಡೆಸಲಾಗುತ್ತಿದೆ. ಟ್ರಿನಿಟಿ ಕನ್‌ಸ್ಟ್ರಕ್ಷನ್ ಸಂಸ್ಥೆಯು ಓವರ್‌ಪಾಸ್ ನಿರ್ಮಾಣ ಗುತ್ತಿಗೆ ಪಡೆದಿದೆ.
ಸೋಮವಾರದಿಂದ ಜಂಕ್ಷನ್‌ನಲ್ಲಿ ವಾಹನಗಳು ಸಂಚರಿಸದಂತೆ ಬ್ಯಾರಿಕೇಡ್ ಇಟ್ಟು ನಿರ್ಬಂಧಿಸಲಾಗಿದ್ದು, ಸರ್ವಿಸ್ ರಸ್ತೆ ಮೂಲಕ ವಾಹನಗಳ ಓಡಾಟಕ್ಕೆ ಅವಕಾಶ ಮಾಡಿಕೊಡಲಾಗಿದೆ. ಜ.12ಕ್ಕೆ ಭೂಮಿ ಪೂಜೆ ಜರಗಲಿದ್ದು, ಒಂದು ವರ್ಷದೊಳಗೆ ಕಾಮಗಾರಿ ಪೂರ್ಣಗೊಳ್ಳಬಹುದು ಎಂದು ಹೆದ್ದಾರಿ ಸಚಿವಾಲಯದ ಮೂಲಗಳು ತಿಳಿಸಿದೆ. ಸಂತೆಕಟ್ಟೆ ಜಂಕ್ಷನ್ ಅವ್ಯವಸ್ಥೆ ಸಂಬಂಧಿಸಿ “ಉದಯವಾಣಿ’ ಸರಣಿ ವರದಿ ಪ್ರಕಟಿಸಿ ಗಮನ ಸೆಳೆದಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.