ಗಂಗಾ ಕಲ್ಯಾಣ: ಫಲಾನುಭವಿಗಳ ಪಟ್ಟಿ ನೀಡುವಂತೆ ಕೋಟ ಸೂಚನೆ
Team Udayavani, Jan 4, 2023, 6:40 AM IST
ಮಂಗಳೂರು : ಡಾ| ಬಿ. ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ ಸೇರಿದಂತೆ ವಾಲ್ಮೀಕಿ, ಭೋವಿ, ಆದಿ ಜಾಂಬವ, ಅಲೆಮಾರಿ ಹಾಗೂ ಅರೆ ಅಲೆಮಾರಿ ಮೊದಲಾದ ಅಭಿವೃದ್ಧಿ
ನಿಗಮಗಳಿಂದ ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಗೆ ನಿಗದಿಪಡಿಸಿರುವ ಕೊಳವೆ ಬಾವಿ ಕೊರೆಸುವ ಯೋಜನೆಗೆ ಅರ್ಹರ ಪಟ್ಟಿ ನೀಡುವಂತೆ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.
ಮಂಗಳವಾರ ನಗರದ ಜಿಲ್ಲಾಧಿ ಕಾರಿ ಕಚೇರಿ ಸಭಾಂಗಣದಲ್ಲಿ ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖಾ ಕಾರ್ಯಕ್ರಮಗಳ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಜಿಲ್ಲೆಗೆ 232 ಗುರಿ ನಿಗದಿಪಡಿಸಲಾಗಿದ್ದು, ಎಲ್ಲ ಅಭಿವೃದ್ಧಿ ನಿಗಮಗಳು ಸಂಬಂಧಿಸಿದ ಶಾಸಕರ ಅಧ್ಯಕ್ಷತೆಯಲ್ಲಿ ತಮ್ಮ ವ್ಯಾಪ್ತಿಯ ಫಲಾನುಭವಿಗಳನ್ನು ಕೂಡಲೇ ಆಯ್ಕೆ ಮಾಡಿ, ಕೂಡಲೇ ಕಾರ್ಯಪ್ರವೃತ್ತರಾಗಬೇಕೆಂದು ಸೂಚಿಸಿದರು.
ದ್ವಿಚಕ್ರ ವಾಹನ ಖರೀದಿಗೆ ನೆರವು
ನಿರುದ್ಯೋಗಿಗಳಿಗೆ ಅನು ಕೂಲ ವಾಗುವಂತೆ ಝೋಮ್ಯಾಟೋ, ಸ್ವಿಗ್ಗಿ ಇತರ ಕಂಪೆನಿಗಳೊಂದಿಗೆ ಕೆಲಸ ನಿರ್ವಹಿಸಲು, ಇ-ಕಾಮರ್ಸ್ ನೊಂದಿಗೆ ಲಿಂಕ್ ಮಾಡಿಕೊಂಡು ವಹಿವಾಟು ನಡೆಸಲು ದ್ವಿಚಕ್ರ ವಾಹನ ಖರೀದಿಗೆ ನೆರವು ನೀಡುವ ಸಲುವಾಗಿ ಪ್ರತೀ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಒಂದು ನೂರು ಫಲಾನುಭವಿಗಳನ್ನು ಆಯ್ಕೆ ಮಾಡುವಂತೆ ತಿಳಿಸಿದರು.
ಫಲಾನುಭವಿಗಳ ಆಯ್ಕೆ ಶೀಘ್ರ
ಡಾ| ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕ ನಿರ್ದೇಶಕ ಮನಿಷ್ ಮಾತನಾಡಿ, ಈ ಹಿಂದೆ ಜಿಲ್ಲೆಗೆ 36 ಫಲಾನುಭವಿಗಳಿಗೆ ಗುರಿ ನಿಗದಿಪಡಿಸಲಾಗಿತ್ತು. ಈಗ ಹೆಚ್ಚು
ವರಿಯಾಗಿ ಗುರಿ ನಿಗದಿ ಪಡಿಲಾಗಿದೆ. ಕೂಡಲೇ ಫಲಾನುಭವಿಗಳನ್ನು ಆಯ್ಕೆ ಮಾಡಲಾಗುವುದು ಎಂದರು.
ಡಿಸಿ ಮನ್ನಾ ಜಾಗ
ಅರ್ಹರಿಗೆ ಡಿಸಿ ಮನ್ನಾ ಜಾಗವನ್ನು ನೀಡುವ ಸಂದರ್ಭದಲ್ಲಿ ಅವರು ವಾಸಿಸುತ್ತಿರುವ ಸ್ಥಳದ ಐದು ಕಿ. ಮೀ. ವ್ಯಾಪ್ತಿಯಲ್ಲಿಯೇ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದವರಿಗೆ ಡಿಸಿ ಮನ್ನಾ ಜಾಗ ನೀಡುವಂತೆಯೂ ಸಚಿವರು ಸೂಚಿಸಿದರು.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಇಲಾಖೆಯ ವಿವಿಧ ಕಾರ್ಯಕ್ರಮಗಳ ಪ್ರಗತಿ ಪರಿಶೀಲನೆ ಮಾಡಿದರು.
ಶಾಸಕ ವೇದವ್ಯಾಸ್ ಕಾಮತ್, ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್, ಜಿಲ್ಲಾಧಿಕಾರಿ ರವಿ ಕುಮಾರ್ ಎಂ.ಆರ್., ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ| ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸಿದ್ದಲಿಂಗೇಶ, ಹಿಂದುಳಿದ ವರ್ಗಗಳ ಜಿಲ್ಲಾ ಅಧಿಕಾರಿ ರಶ್ಮಿ ಸೇರಿದಂತೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
Alnavar: ಟಿಟಿ- ಕ್ಯಾಂಟರ್ ನಡುವೆ ಭೀಕರ ಅಪಘಾತ; ಸ್ಥಳದಲ್ಲಿಯೇ ಮೂವರ ಸಾವು
N.Maharajan: ವಲ್ಲರಸು ನಿರ್ದೇಶಕರ ಚಿತ್ರದಲ್ಲಿ ಶಿವಣ್ಣ ಸಿನಿಮಾ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.