ಹಾವೇರಿ: 86ನೇ ನುಡಿ ಜಾತ್ರೆಯಲ್ಲಿ 86 ಕೃತಿಗಳ ಬಿಡುಗಡೆ


Team Udayavani, Jan 4, 2023, 6:45 AM IST

ಹಾವೇರಿ: 86ನೇ ನುಡಿ ಜಾತ್ರೆಯಲ್ಲಿ 86 ಕೃತಿಗಳ ಬಿಡುಗಡೆ

ಹಾವೇರಿ: ಏಲಕ್ಕಿ ಕಂಪಿನ ನಾಡು ಹಾವೇರಿಯಲ್ಲಿ ಜ. 6ರಿಂದ 8ರವರೆಗೆ ನಡೆಯುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಲವು ಪ್ರಥಮಗಳಿಗೆ ಸಾಕ್ಷಿಯಾಗಲಿದ್ದು, ಈ ನುಡಿ ಜಾತ್ರೆ ಭವಿಷ್ಯದ ದಿನಗಳಲ್ಲಿ ಇತರ ಸಮ್ಮೇಳನಗಳಿಗೆ ಮಾದರಿಯಾಗಲಿದೆ.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತವರು ಜಿಲ್ಲೆಯಲ್ಲಿ ಸಮ್ಮೇಳನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಸಮ್ಮೇಳನಕ್ಕೆ ಬಿಡುಗಡೆಯಾದ ಅನುದಾನದಿಂದ ಹಿಡಿದು ವೇದಿಕೆ ನಿರ್ಮಾಣ, ಸಮ್ಮೇಳನಾಧ್ಯಕ್ಷರ ಅದ್ಧೂರಿ ಮೆರವಣಿಗೆ, ಸಮ್ಮೇಳನದಲ್ಲಿ ವಿದೇಶಿಗರ ಪಾಲ್ಗೊಳ್ಳುವಿಕೆ, 86ನೇ ಸಾಹಿತ್ಯ ಸಮ್ಮೇಳನದಲ್ಲಿ 86 ಕೃತಿಗಳ ಬಿಡುಗಡೆ, ದಸರಾ ಮಾದರಿಯಲ್ಲಿ ದೀಪಾಲಂಕಾರ, ಸಮ್ಮೇಳನದಲ್ಲಿ ಸಮಯ ಪಾಲನೆಗಾಗಿ ವಿಶೇಷ ವ್ಯವಸ್ಥೆ, ಸಮ್ಮೇಳನಕ್ಕೆ ಬರುವ ವಾಹನಗಳ ಪಾರ್ಕಿಂಗ್‌ಗಾಗಿ ಕ್ಯೂಆರ್‌ ಕೋಡ್‌ ಬಳಕೆ, ಪ್ರತಿನಿಧಿಗಳ ನೋಂದಣಿಗಾಗಿ ಆ್ಯಪ್‌ ಬಳಕೆ ಮಾಡಿದ್ದು, ರಾಜ್ಯಾದ್ಯಂತ ಕನ್ನಡ ರಥ ಸಂಚಾರ.. ಹೀಗೆ ಹಲವು ಪ್ರಥಮಗಳಿಗೆ 86ನೇ ಸಾಹಿತ್ಯ ಸಮ್ಮೇಳನ ಮುನ್ನಡಿ ಬರೆಯುತ್ತಿದೆ.

ಸಮಯ ಪಾಲನೆಗೆ ವಿಶೇಷ ವ್ಯವಸ್ಥೆ
ಸಮ್ಮೇಳನದಲ್ಲಿ ವಿವಿಧ ಗೋಷ್ಠಿಗಳು ಜರಗುವ ವೇಳೆ ಸಮಯ ಪಾಲನೆಗೆ ಹೆಚ್ಚಿನ ಮಹತ್ವ ನೀಡಲಾಗಿದ್ದು, ಇದಕ್ಕಾಗಿಯೇ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಈಗಾಗಲೇ ಗೋಷ್ಠಿಗಳಲ್ಲಿ ಪಾಲ್ಗೊಳ್ಳುವ ಅಥಿತಿಗಳ ಭಾಷಣಕ್ಕೆ ಸಮಯ ನಿಗದಿಗೊಳಿಸಿದ್ದು, ಅತಿಥಿಗಳ ಭಾಷಣದ ಸಮಯ ಮುಗಿಯುತ್ತಾ ಬರುತ್ತಿದ್ದಂತೆ ಮುನ್ಸೂಚನೆ ನೀಡಲು ಕೆಂಪು ದೀಪದ ಬರ್ಜರ್‌ ಅಳವಡಿಸಲಾಗುತ್ತಿದೆ. ಭಾಷಣದ ಅವಧಿ  ಮುಗಿಯುತ್ತಿದ್ದಂತೆ ಧ್ವನಿವರ್ಧಕ ಸ್ವಯಂಚಾಲಿತವಾಗಿ ಬಂದ್‌ ಆಗುವ ವ್ಯವಸ್ಥೆ ಮಾಡಿದ್ದು, ಸಮಯ ಪಾಲನೆಗಾಗಿ ಈ ವ್ಯವಸ್ಥೆ ಮಾಡಿರುವುದು ವಿಶೇಷವಾಗಿದೆ.

ಮೆರವಣಿಗೆಗೆ ವಿಶೇಷ ರಥ
ಈ ಬಾರಿ ಸಮ್ಮೇಳನಾಧ್ಯಕ್ಷರ ಅದ್ಧೂರಿ ಮೆರವಣಿಗೆ ಎಲ್ಲರ ಗಮನ ಸೆಳೆಯಲಿದೆ. ಸಮ್ಮೇಳನಾಧ್ಯಕ್ಷರಾದ ಡಾ| ದೊಡ್ಡರಂಗೇಗೌಡ ಅವರ ಮೆರವಣಿಗೆಗಾಗಿ ಸುಮಾರು 4 ಲಕ್ಷ ರೂ. ವೆಚ್ಚದಲ್ಲಿ ಅರಮನೆ ದರ್ಬಾರ್‌ ಮಾದರಿಯಲ್ಲಿ ಭವ್ಯ ರಥ ಸಿದ್ಧಪಡಿಸಲಾಗಿದೆ. ಕೆಂಪು, ಹಳದಿ ಹಾಗೂ ಬಂಗಾರದ ವರ್ಣಗಳಿಂದ ರಥವನ್ನು ಅಲಂಕರಿಸಲಾಗಿದ್ದು, ಭುವನೇಶ್ವರಿ, ಸಮ್ಮೇಳನದ ಲಾಂಛನ, ಕನ್ನಡ ಧ್ವಜಗಳಿಂದ ಈ ವಿಶೇಷ ರಥ ಕಂಗೊಳಿಸಲಿದೆ. ಜತೆಗೆ ರಾಜ್ಯದ 31 ಜಿಲ್ಲೆಗಳ ಕಸಾಪ ಅಧ್ಯಕ್ಷರಿಗಾಗಿ 11 ಸಾರೋಟುಗಳನ್ನು ವ್ಯವಸ್ಥೆ ಮಾಡಲಾಗಿದೆ.

86 ಕೃತಿಗಳ ಬಿಡುಗಡೆ
ಸಮ್ಮೇಳನದಲ್ಲಿ 86 ಕೃತಿಗಳನ್ನು ಬಿಡುಗಡೆ ಮಾಡುತ್ತಿರುವುದು ಈ ಬಾರಿಯ ವಿಶೇಷ. ಹಾವೇರಿ ಜಿಲ್ಲೆಗೆ ಸಂಬಂಧಿ ಸಿದಂತೆ 37 ಕೃತಿಗಳನ್ನು ಹೊರತರಲಾಗುತ್ತಿದೆ. ಉಳಿದ 49 ಕೃತಿಗಳು ನಾಡು-ನುಡಿಗೆ ಸಂಬಂಧಿ ಸಿದ್ದು, ಅವುಗಳಲ್ಲಿ 15 ಹೊಸ ಮತ್ತು 34 ಮರು ಮುದ್ರಣಗೊಳ್ಳುತ್ತಿರುವ ಕೃತಿಗಳಾಗಿವೆ. ಜತೆಗೆ 86ನೇ ನುಡಿ ಜಾತ್ರೆಯ ಸವಿನೆನಪಿಗಾಗಿ 500 ಪುಟಗಳ ಏಲಕ್ಕಿ ಹಾರ ಶೀರ್ಷಿಕೆಯ ಸ್ಮರಣ ಸಂಚಿಕೆ ಹೊರತರಲಾಗುತ್ತಿದೆ.

ಮೈಸೂರು ಮಾದರಿ ದೀಪಾಲಂಕಾರ
ನಗರವನ್ನು ಮಧುವಣಗಿತ್ತಿಯಂತೆ ಸಿಂಗಾರ ಮಾಡಲು ಪ್ರಮುಖ ವೃತ್ತ, ರಸ್ತೆ, ಸರಕಾರಿ ಕಚೇರಿಗಳಿಗೆ ಸುಮಾರು 30 ಲಕ್ಷ ರೂ. ವೆಚ್ಚದಲ್ಲಿ ಮೈಸೂರು ದಸರಾ ಮಾದರಿ ದೀಪಾಲಂಕಾರ ಮಾಡಲಾಗಿದ್ದು, ನಗರದ ಪ್ರಮುಖ ರಸ್ತೆ, ವೃತ್ತಗಳು ವಿದ್ಯುದ್ದೀಪಗಳಿಂದ ಕಂಗೊಳಿಸುವ ಮೂಲಕ ಎಲ್ಲರನ್ನು ಆಕರ್ಷಿಸುತ್ತಿವೆ.

ಕ್ಯೂಆರ್‌ ಕೋಡ್‌ ವ್ಯವಸ್ಥೆ
ಸಮ್ಮೇಳನಕ್ಕೆ ನಾಡಿನ ವಿವಿಧ ಮೂಲೆಗಳಿಂದ ಬರುವವರು ಸಮ್ಮೇಳನದ ಸ್ಥಳ, ಪಾರ್ಕಿಂಗ್‌ ವ್ಯವಸ್ಥೆ, ಯಾವ ಮಾರ್ಗದಲ್ಲಿ ವೇದಿಕೆಯತ್ತ ಬರಬೇಕು ಎಂಬ ಗೊಂದಲ ನಿವಾರಣೆಗಾಗಿ ಕ್ಯೂಆರ್‌ ಕೋಡ್‌ ಬಳಕೆ ಮಾಡುತ್ತಿರುವುದು ವಿಶೇಷವಾಗಿದೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

ಹಾವೇರಿ: 8 ಕೋಟಿ ರೂ. ವೆಚ್ಚದ ಹೈಟೆಕ್‌ ರಂಗಮಂದಿರ ನಿರುಪಯುಕ್ತ

Suicide 3

Haveri; ಪ್ರೀತಿ ವಿಚಾರಕ್ಕೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡ ಯುವಕ

Haveri: ಜಾನಪದ ವಿವಿ ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಘಟಿಕೋತ್ಸವದಲ್ಲಿ ವಿವಿ ಸಿಬ್ಬಂದಿ ಮೇಲೆ ದರ್ಪ ತೋರಿದ ನೂತನ ಶಾಸಕ ಪಠಾಣ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

ನಿರ್ಲಕ್ಷ್ಯಕ್ಕೊಳಗಾದ ರಾಣಿ ಬೆನ್ನೂರ ಕೆರೆ-ಸ್ಥಳೀಯರ ಆಕ್ರೋಶ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

9

Kaup: ಸಮಸ್ಯೆಗೆ ದೂರು ನೀಡಲು 1912ಗೆ ಕರೆ ಮಾಡಿ

8

Shirva: ಹೊಂಡ ಗುಂಡಿ, ಧೂಳುಮಯ ಕೋಡು-ಪಂಜಿಮಾರು ರಸ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.