![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Jan 4, 2023, 3:33 PM IST
ಬೆಂಗಳೂರು: ಹಾವೇರಿಯಲ್ಲಿ ನಡೆಯಲಿರುವ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರಿಗೆ ಷರತ್ತುಬದ್ಧ ವಿಶೇಷ ಸಾಂದರ್ಭಿಕ ರಜೆ ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ.
ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ಸರ್ಕಾರಿ ನೌಕರರ ಸಂಖ್ಯೆ 100ಕ್ಕೆ ಮೀರದಂತೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ನೀಡಲಾಗುತ್ತದೆ. ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರು, ಕಾರ್ಯದರ್ಶಿಗಳ ಪತ್ರದ ಅನ್ವಯ ಪ್ರತಿ ವರ್ಷವೂ ಈ ರಜೆಯನ್ನು ನೀಡಲಾಗುತ್ತದೆ. ವಿಶೇಷ ಸಾಂದರ್ಭಿಕ ರಜೆಯು ಸಾಹಿತ್ಯ ಸಮ್ಮೇಳನದಲ್ಲಿ ಭಾಗವಹಿಸುವ ನೌಕರರು ಅವರ ಆಸಕ್ತಿಯ ಒಂದು ಅಥವಾ ಎರಡು ದಿನಗಳ ಅವಧಿಗೆ ಮತ್ತು ಹೋಗಿ ಬರುವ ಪ್ರಯಾಣಕ್ಕೆ ಬೇಕಾಗುವ ಅವಧಿಗೆ ಸೀಮಿತವಾಗಿರಬೇಕು.
ಕನ್ನಡ ಸಾಹಿತ್ಯದ ಜ್ಞಾನ ಮತ್ತು ಅಭಿರುಚಿ ಇದ್ದು, ಕನ್ನಡ ಸಾಹಿತ್ಯ ಪರಿಷತ್ತಿನಿಂದ ಆಮಂತ್ರಿಸಲ್ಪಟ್ಟ ಸರ್ಕಾರಿ ನೌಕರರಿಗೆ ಈ ರಜೆಯ ಸೌಲಭ್ಯ ನೀಡಲಾಗುವುದು. ಕನ್ನಡ ಸಾಹಿತ್ಯದ ಅಭಿರುಚಿಯುಳ್ಳ ನೌಕರರು ಕನ್ನಡ ಸಾಹಿತ್ಯ ಪರಿಷತ್ತಿನ ಸದಸ್ಯರಾಗಿದ್ದರೆ ಅವರಿಗೂ ಈ ಸೌಲಭ್ಯ ನೀಡುವುದು.
ಯಾವುದೇ ವಿಶೇಷ ಗುರುತರ ಸರ್ಕಾರಿ ಕೆಲಸದ ಮೇಲೆ ನೇಮಿಸಲ್ಪಟ್ಟ ನೌಕರರಿಗೆ ಸಮ್ಮೇಳನದಲ್ಲಿ ಭಾಗವಹಿಸಲು ಅನುಮತಿ ಕೊಡಬಾರದು. ಈ ಸಮ್ಮೇಳನ ಮುಗಿದ ಮೇಲೆ ಸಮ್ಮೇಳನದಲ್ಲಿ ಭಾಗವಹಿಸಿದ ಸರ್ಕಾರಿ ನೌಕರರಿಗೆ ಸಾಹಿತ್ಯ ಪರಿಷತ್ತಿನವರು ಅಧಿಕೃತ ರಾಜ್ಯ ಪರಿಷತ್ ಕೊಡಬೇಕು. ಈ ಆಧಾರದ ಮೇಲೆ ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡುವ ಅಧಿಕಾರವಿರುತ್ತದೆ.
ಅಧಿಕಾರಿಗಳು ಈ ರಜೆಯನ್ನು ಮಂಜೂರು ಮಾಡುವುದು ಹಾಗೂ ಈ ರಜೆ ಪಡೆಯಲಿಚ್ಛಿಸುವ ನೌಕರರು ರಜೆ ಮಂಜೂರು ಮಾಡುವ ಪ್ರಾಧಿಕಾರದಿಂದ ಪೂರ್ವಾನುಮತಿ ಪಡೆಯಬೇಕು ಎಂದು ಸೂಚಿಸಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.