ತಿಂಗಳಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಬೈರತಿ ಬಸವರಾಜ್‌


Team Udayavani, Jan 4, 2023, 11:34 PM IST

ತಿಂಗಳಾಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಿ: ಸಚಿವ ಬೈರತಿ ಬಸವರಾಜ್‌

ಚಿಕ್ಕಮಗಳೂರು: ಜನವರಿ ಅಂತ್ಯದೊಳಗೆ ಅಮೃತ್‌ ಕುಡಿಯುವ ನೀರು ಯೋಜನೆ ಮತ್ತು ಮಾರ್ಚ್‌ ಅಂತ್ಯದೊಳಗೆ ಒಳಚರಂಡಿ ಕಾಮಗಾರಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಇಲಾಖೆಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಬಸವರಾಜ್‌ ತಿಳಿಸಿದರು.

ಬುಧವಾರ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಈ ಅವಧಿಯಲ್ಲಿ ಕಾಮಗಾರಿಯನ್ನು ಪೂರ್ಣಗೊಳಿಸದಿದ್ದರೆ ಸಂಬಂಧಪಟ್ಟ ಕಾಮಗಾರಿ ಗುತ್ತಿಗೆದಾರರನ್ನು ಕಪ್ಪುಪಟ್ಟಿಗೆ ಸೇರಿಸಲಾಗುವುದು ಹಾಗೂ ಕ್ರಿಮಿನಲ್‌ ಪ್ರಕರಣ ದಾಖಲಿಸಲಾಗುವುದು ಎಂದು ಎಚ್ಚರಿಸಿದರು.

ಅಮೃತ್‌ ಕುಡಿಯುವ ನೀರಿನ ಯೋಜನೆ ಪೂರ್ಣಗೊಳಿಸಲು ಈ ಹಿಂದೆ ನೀಡಿದ್ದ ಅವಧಿಗಿಂತ 10ರಿಂದ 12 ದಿನಗಳ ಹೆಚ್ಚಿನ ಕಾಲಾವಕಾಶವನ್ನು ನೀಡಲಾಗಿದೆ. ಒಳಚರಂಡಿ ಕಾಮಗಾರಿ ಪೂರ್ಣಗೊಳಿಸಲು ಮಾರ್ಚ್‌ ಅಂತ್ಯದವರೆಗೂ ಕಾಲಾವಕಾಶ ನೀಡಲಾಗಿದೆ ಎಂದು ತಿಳಿಸಿದರು.

ಕಲ್ಲು ಕ್ರಷರ್‌ ಮಾಲಕರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕ್ರಷರ್‌ ಕಾರ್ಯಸ್ಥಗಿತಗೊಳಿಸಿದ್ದು, ಇದರಿಂದ ಕಾಮಗಾರಿ ನಡೆಸಲು ಸ್ವಲ್ಪಮಟ್ಟಿನ ಅಡಚಣೆ ಉಂಟಾಗಿದೆ. ಕ್ರಷರ್‌ ಮಾಲಕರೊಂದಿಗೆ ಮುಖ್ಯಮಂತ್ರಿಗಳು ಚರ್ಚಿಸಿದ್ದು, ಶೀಘ್ರವೇ ಕ್ರಷರ್‌ ಆರಂಭಗೊಳ್ಳಲಿದೆ. ಅನಂತರ ರಸ್ತೆದುರಸ್ತಿ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.

ಅಮೃತ ಕುಡಿಯುವ ನೀರು ಯೋಜನೆ ಮತ್ತು ಒಳಚರಂಡಿ ಕಾಮಗಾರಿ ಕಾಲಮಿತಿಯಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದ್ದು, ಗುರಿ ನಿಗಪಡಿಸಲಾಗಿದೆ. ಒಂದು ವೇಳೆ ಅಧಿಕಾರಿಗಳು ಗುರಿಮುಟ್ಟಲು ವಿಫಲರಾದಲ್ಲಿ ದಂಡ ವಿಧಿಸಲಾಗುವುದು ಎಂದು ತಿಳಿಸಿದರು.

ಶಾಸಕ ಸಿ.ಟಿ. ರವಿ ಮಾತನಾಡಿ, ಅಮೃತ ಕುಡಿಯುವ ನೀರಿನ ಯೋಜನೆ ಮತ್ತು ಒಳಚರಂಡಿ ಕಾಮಗಾರಿ ನಿಗದಿತ ಸಮಯದಲ್ಲಿ ಮುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಮೃತ್‌ ಕುಡಿಯುವ ನೀರು ಯೋಜನೆ ಕೆಲವೊಂದು ಕಾಮಗಾರಿ ಮಾತ್ರ ಬಾಕಿ ಇದ್ದು, ಈ ತಿಂಗಳ ಅಂತ್ಯದಲ್ಲಿ ಪೂರ್ಣಗೊಳ್ಳಲಿದೆ ಎಂದರು.

ಒಳಚರಂಡಿ ಕಾಮಗಾರಿ ಪ್ರಾರಂಭದಲ್ಲಿ 57 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಕಾರ್ಯಕ್ಕೆ ಮುಂದಾಗಿದ್ದು, ರೋಷನ್‌ಬೇಗ್‌ ಸಚಿವರಾಗಿದ್ದ ಅವಧಿಯಲ್ಲಿ ಕಾಮಗಾರಿ ವೆಚ್ಚವನ್ನು 87 ಕೋಟಿ ರೂಗೆ ಏರಿಕೆ ಮಾಡಲಾಗಿತ್ತು. ಮನೆ ಮನೆ ಸಂಪರ್ಕ ವ್ಯಕ್ತಿಘತವಾಗಿತ್ತು. ಈಗ ಮನೆ ಮನೆ ಸಂಪರ್ಕ ಸಂಬಂಧಪಟ್ಟ ಇಲಾಖೆಯಿಂದಲೇ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಒಳಚರಂಡಿ ಕಾಮಗಾರಿ ಗುತ್ತಿಗೆದಾರರ ನಿರ್ಲಕ್ಷ Âದಿಂದ ವಿಳಂಬವಾಗಿದ್ದು, ಈ ಹಿಂದಿನ ಗುತ್ತಿಗೆದಾರರಿಂದ ಗುತ್ತಿಗೆ ಹಿಂಪಡೆದು ಆತನಿಂದ ದಂಡ ವಸೂಲಿ ಮಾಡಲಾಗಿದೆ. ಸದ್ಯ ಕಾಮಗಾರಿಯನ್ನು ಬೇರೆ ಗುತ್ತಿಗೆದಾರನಿಗೆ ವಹಿಸಲಾಗಿದೆ ಎಂದು ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಜಿಲ್ಲಾಧಿಕಾರಿ ಕೆ.ಎನ್‌. ರಮೇಶ್‌, ಜಿಪಂ ಸಿಇಒ ಜಿ. ಪ್ರಭು, ನಗರಸಭೆ ಅಧ್ಯಕ್ಷ ವರಸಿದ್ದಿ ವೇಣು ಗೋಪಾಲ್‌, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸಿ. ಆನಂದ್‌, ಅಪರ ಜಿಲ್ಲಾಧಿಕಾರಿ ಬಿ.ಆರ್‌.ರೂಪ ಇದ್ದರು.

ಟಾಪ್ ನ್ಯೂಸ್

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

isrel netanyahu

India ವರ, ಇರಾಕ್‌, ಇರಾನ್‌ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್‌ ಪ್ರಧಾನಿ ನೆತನ್ಯಾಹು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

bjp-congress

BJP vs Congress ; ಕೇಸ್‌ ಮೇಲೆ ಕೇಸ್‌

BJP 2

CM Siddaramaiah ಕಂಡಲ್ಲೆಲ್ಲ ಕಪ್ಪುಪಟ್ಟಿ ಪ್ರದರ್ಶನಕ್ಕೆ ಬಿಜೆಪಿ ಸಜ್ಜು

1-mali

Karnataka; ಮಳಿಗೆಯಲ್ಲಿ 10 ಸಿಬಂದಿ ಇದ್ದರೆ 24 ತಾಸೂ ವ್ಯವಹಾರಕ್ಕೆ ಅವಕಾಶ

naksal (2)

Karnataka; ರಾಜ್ಯದ ಆರು ನಕ್ಸಲರಿಂದ ಶರಣಾಗತಿಗೆ ಒಲವು?

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kota-poojary

Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ

SSLLC

leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ

1-horoscope

Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ

Text-Bokk

KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ

1-hejb

Israel ಸರ್ಜಿಕಲ್‌ ಸ್ಟ್ರೈಕ್‌: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್‌ ಬಾಂಬ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.