ನಮ್ಮ ರಾಜ್ಯದಲ್ಲಿ ವಂದೇ ಭಾರತ್ ಗೆ ಕಲ್ಲು ತೂರಾಟ ನಡೆದಿಲ್ಲ: ಮಮತಾ ಬ್ಯಾನರ್ಜಿ
ನಕಲಿ ಸುದ್ದಿ ಹಬ್ಬಿಸಿದವರ ವಿರುದ್ಧ ಕಾನೂನು ಕ್ರಮ
Team Udayavani, Jan 5, 2023, 5:39 PM IST
ಕೋಲ್ಕತಾ : ವಂದೇ ಭಾರತ್ ಎಕ್ಸ್ಪ್ರೆಸ್ಗೆ ನೆರೆಯ ಬಿಹಾರದಲ್ಲಿ ಕಲ್ಲು ತೂರಾಟ ನಡೆಸಲಾಗಿದೆಯೇ ಹೊರತು ತಮ್ಮ ರಾಜ್ಯದಲ್ಲಿ ಅಲ್ಲ ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಹೇಳಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಘಟನೆಗಳು ನಡೆದಿದೆ ಎಂದು ರಾಜ್ಯಕ್ಕೆ ಕೆಟ್ಟ ಹೆಸರು ಬರುವಂತೆ ನಕಲಿ ಸುದ್ದಿ ಹಬ್ಬಿಸಿದ ಮಾಧ್ಯಮಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
”ವಂದೇ ಭಾರತ ವಿಶೇಷವೇನಲ್ಲ. ಇದು ಹೊಸ ಎಂಜಿನ್ನೊಂದಿಗೆ ನವೀಕರಿಸಿದ ಹಳೆಯ ರೈಲು ಎಂದು ಅವರು ಹೇಳಿದರು.
ಜನವರಿ 8 ರಂದು ಪ್ರಾರಂಭವಾಗುವ ಗಂಗಾಸಾಗರ ಮೇಳದ ಸಿದ್ಧತೆಗಳನ್ನು ನೋಡಿಕೊಳ್ಳಲು ಮಮತಾ ಬ್ಯಾನರ್ಜಿ ಸಾಗರ್ ದ್ವೀಪಕ್ಕೆ ಎರಡು ದಿನಗಳ ಭೇಟಿಯನ್ನು ಮುಕ್ತಾಯಗೊಳಿಸಿದರು.
ಹೌರಾ-ನ್ಯೂ ಜಲ್ಪೈಗುರಿ ವಂದೇ ಭಾರತ್ ಎಕ್ಸ್ಪ್ರೆಸ್ ಅನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಿದ ಕೆಲವು ದಿನಗಳ ನಂತರ ಮಂಗಳವಾರ ಎರಡನೇ ಬಾರಿಗೆ ಕಲ್ಲು ತೂರಾಟ ನಡೆಸಲಾಗಿತ್ತು. ರೈಲಿಗೆ ಕಲ್ಲು ಎಸೆದವರನ್ನು ಗುರುತಿಸಿರುವುದಾಗಿ ರೈಲ್ವೆ ಅಧಿಕಾರಿಗಳು ಗುರುವಾರ ಹೇಳಿದ್ದಾರೆ. ಈ ಘಟನೆಯು ಬಿಜೆಪಿ ಮತ್ತು ತೃಣಮೂಲ ಕಾಂಗ್ರೆಸ್ ನಡುವೆ ಜಟಾಪಟಿಗೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.