ದೇಶದಲ್ಲಿ ಸಂವಿಧಾನ ತಿದ್ದುಪಡಿ ಹುನ್ನಾರ; ಡಾ| ರಾಜರತ್ನ ಅಂಬೇಡ್ಕರ್‌

ವೈದಿಕರ ಮಾತುಗಳನ್ನು ನಂಬಿ ದೇವರುಗಳಿಗೆ ಪ್ರಾಣಿ ಬಲಿಕೊಡುವ ಕೆಲಸವನ್ನು ತಕ್ಷಣವೇ ಕೈಬಿಡಬೇಕು.

Team Udayavani, Jan 5, 2023, 6:23 PM IST

ದೇಶದಲ್ಲಿ ಸಂವಿಧಾನ ತಿದ್ದುಪಡಿ ಹುನ್ನಾರ; ಡಾ| ರಾಜರತ್ನ ಅಂಬೇಡ್ಕರ್‌

ಸಂಕೇಶ್ವರ: ಸದ್ಯ ದೇಶದಲ್ಲಿ ಸಂವಿಧಾನ ತಿದ್ದುಪಡಿ, ಮೀಸಲಾತಿ ಕಿತ್ತುಕೋಳ್ಳುವ ಹುನ್ನಾರ ಮನುವಾದಿಗಳು ಮಾಡುತಿದ್ದು, ಇದರ ಬಗ್ಗೆ ದಲಿತರು ಎಚ್ಚರದ ಹೆಜ್ಜೆ ಇಡುವ ಮೂಲಕ ಜಾಗೃತಿ ವಹಿಸಬೇಕಾಗಿದೆ ಎಂದು ಬುದ್ಧಿಸ್ಟ್‌ ಸೊಸೈಟಿ ಆಫ್‌ ಇಂಡಿಯಾದ ಅಧ್ಯಕ್ಷ, ಡಾ| ಬಿ.ಆರ್‌.ಅಂಬೇಡ್ಕರ್‌ ಮರಿಮೊಮ್ಮಗ ಡಾ| ರಾಜರತ್ನ ಅಂಬೇಡ್ಕರ್‌ ಹೇಳಿದರು.

ಸಂಕೇಶ್ವರದಲ್ಲಿ ಭೀಮಾ-ಕೊರೆಗಾಂವ ವಿಜಯೋತ್ಸವದ 205ನೇ ವರ್ಷಾಚರಣೆ ಹಾಗೂ ಸಾವಿತ್ರಿಬಾಯಿ ಫುಲೆ ಜಯಂತಿ ನಿಮಿತ್ತ ಡಾ| ಬಿ.ಆರ್‌.ಅಂಬೇಡ್ಕರ್‌ ಜನಜಾಗ್ರತಿ ವೇದಿಕೆ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿ, ಸದ್ಯ ದೇಶದಲ್ಲಿ ಡಾ| ಅಂಬೇಡ್ಕರ್‌ ಅವರು ನೀಡಿರುವ ಸಂವಿಧಾನ ಬದಲಿಸುವ ಪ್ರಯತ್ನಗಳು ನಡೆದಿವೆ. ದಲಿತರಿಗಾಗಿ ಡಾ. ಅಂಬೇಡ್ಕರ್‌ ಅವರು ಪಟ್ಟಿರುವ ಶ್ರಮವನ್ನು ನಾವಿಂದು ನೆನಪಿಸಿ ಮುನ್ನಡೆಯಬೇಕಿದೆ. ಡಾ| ಅಂಬೇಡ್ಕರರು ಇಲ್ಲವಾಗಿದ್ದರೆ ನಾವು ಎಲ್ಲಿ ಇರುತ್ತಿದ್ದೇವೆ ಎಂದು ಗೊತ್ತಾಗುತ್ತಿರಲಿಲ್ಲ ಎಂದು ನುಡಿದರು.

ಡಾ| ಅಂಬೇಡ್ಕರ್‌ ಅವರಿಗೆ ಶಾಹು ಮಹಾರಾಜ, ಮಹಾತ್ಮ ಫುಲೆ, ಶಿವಾಜಿ ಮಹಾರಾಜರು ನೀಡಿದ ಪ್ರೇರಣೆಯನ್ನು ನಾವು ಎಂದಿಗೂ ಮರೆಯಲು ಸಾಧ್ಯಇಲ್ಲ. ಅಲ್ಲದೆ ಸಾವಿತ್ರಿಬಾಯಿ ಫುಲೆ ಅವರು ಶಿಕ್ಷಣಕ್ಕೆ ನೀಡಿದ ಕೊಡುಗೆಯನ್ನು ಯಾರು ಮರೆಯುವಂತಿಲ್ಲ. ಸದ್ಯ ಭಾರತ ಸರಕಾರ 5ನೇ ತರಗತಿ ಮೇಲಿನ ವಿದ್ಯಾರ್ಥಿಗಳಿಗೆ ಭಗವದ್ಗೀತೆ ಬೋಧನೆ ಮಾಡಲು ಹೊರಟಿದೆ. ವೇದ ಕಲಿಸಿ ನಮ್ಮನ್ನು ಮತ್ತೆ ಶೂದ್ರರಾಗಿ ಕಾಣುವ ಕಾಲ ಬರಬಹುದು. ಸದ್ಯ ದೇಶದ ಶಿಕ್ಷಣ ಕ್ಷೇತ್ರದಲ್ಲಿ ಎಲ್ಲವನ್ನು ವ್ಯಾಪಾರೀಕರಣ ಮಾಡಲಾಗುತ್ತಿದೆ.

ದೇಶದಲ್ಲಿ ಶಿಕ್ಷಣವನ್ನು ಹಿಂದಿ ಭಾಷೆಯಲ್ಲಿ ಕಲಿಸುವ ಹುನ್ನಾರ ನಡೆಯುತ್ತಿದೆ. ಇದರಿಂದ ನಮ್ಮ ಹಿಂದೂಳಿದ ಜನರು ಮತ್ತೆ ಸಂಕಷ್ಟಕ್ಕೆ ಸಿಲುಕಲಿದ್ದಾರೆ ಎಂದು ನುಡಿದರು. 205 ವರ್ಷಗಳ ಹಿಂದೆ ಪೇಶ್ವೆಗಳ ವಿರುದ್ದ ಮಹಾರರು ಗಳಿಸಿದ ವಿಜಯವು ಭಾರತದ ಇತಿಹಾಸದಲ್ಲಿ ದಾಖಲು ಆಗಲೇ ಇಲ್ಲ. ಮನುವಾದಿಗಳು ಅಂಥ ಸತ್ಯವನ್ನು ದಾಖಲಿಸಲೇ ಇಲ್ಲ. ಈಗ ಪುಃನ ಸತ್ಯವನ್ನು ದೇಶದ ಜನರಿಗೆ ತಿಳಿಸುವ ಕಾಲ ಬಂದಿದೆ ಎಂದು ಅವರು ಹೇಳಿದರು.

ದೇಶದ ಸಂವಿಧಾನದಂತೆ ಅನೇಕ ಯೋಜನೆಗಳನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದಲಿತರಿಗಾಗಿ ರೂಪಿಸಿದ್ದು, ಅವುಗಳ ಲಾಭ ಪಡೆಯಬೇಕು. ಇದರಿಂದ ದಲಿತರ ಒಟ್ಟು ಅಭಿವೃದ್ಧಿ ಆಗುತ್ತದೆ. ಪ್ರಧಾನಿ ಮೋದಿ ಅವರು ದೇಶದಲ್ಲಿ ಒನ್‌ ನೇಶನ್‌, ಒನ್‌ ಎಜ್ಯುಕೇಶನ್‌ ನೀತಿಯನ್ನು ಜಾರಿ ತರಲಿ ಎಂದು ಒತ್ತಾಯಿಸಿದರು. ಸಾನ್ನಿಧ್ಯ ವಹಿಸಿದ್ದ ಹೆಬ್ಟಾಳದ ಬಸವ ಚೇತನ ದೇವರು ಮಾತನಾಡಿ, ದಲಿತರು ವೈದಿಕರ ಮಾತುಗಳನ್ನು ನಂಬಿ ದೇವರುಗಳಿಗೆ ಪ್ರಾಣಿ ಬಲಿಕೊಡುವ ಕೆಲಸವನ್ನು ತಕ್ಷಣವೇ ಕೈಬಿಡಬೇಕು. ಪ್ರತಿಯೊಬ್ಬ ದಲಿತರು ತಮ್ಮ ಬದುಕಿಗೆ ಪುನಶ್ಚೆತನ ತಂದು ಕೊಟ್ಟ ಅಂಬೇಡ್ಕರರ ಭಾವಚಿತ್ರವನ್ನು ಮನೆಯಲ್ಲಿ ಹಾಕಿ ಅವರ ತತ್ವಗಳನ್ನು ಬದುಕಿನುದ್ದಕ್ಕೂ ಪಾಲಿಸಬೇಕು ಎಂದರು.

ಇದೇ ಸಂದರ್ಭದಲ್ಲಿ ಡಾ. ಬಿ.ಆರ್‌. ಅಂಬೇಡ್ಕರ ಜನಜಾಗ್ರತಿ ವೇದಿಕೆಯ ವತಿಯಿಂದ 1 ಲಕ್ಷ ರೂಗಳನ್ನು ಡಾ. ರಾಜರತ್ನ ಅಂಬೇಡ್ಕರ ಅವರಿಗೆ ನೀಡಲಾಯಿತು. ವೇದಿಕೆಯ ಅಧ್ಯಕ್ಷ ದಿಲೀಪ ಹೊಸಮನಿ ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಸಹಕಾರಿ ಧುರೀಣರಾದ ಎಸ್‌.ಎಸ್‌. ಶಿರಕೋಳಿ, ಶ್ರೀಕಾಂತ ಹತನೂರಿ, ಪುರಸಭೆ ಸದಸ್ಯ ಜಿತೇಂದ್ರ ಮರಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಉಮಾ ಸಾಲಿಗೌಡರ, ವಿಕ್ರಂ ಕರನಿಂಗ, ಬಸವರಾಜ ಕೋಳಿ, ಆನಂದ ಕೆಳಗಡೆ ಮುಂತಾದವರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

1-wqewq

UK; ಪ್ರಧಾನಿ ದೀಪಾವಳಿ ಪಾರ್ಟಿಯಲ್ಲಿ ಮದ್ಯ, ಮಾಂಸ: ಕೊನೆಗೂ ಕ್ಷಮೆ ಯಾಚನೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Congress is taking revenge by forming SIT: Araga Jnanendra

Shimoga: ಎಸ್ಐಟಿ ರಚನೆ ಮೂಲಕ ಕಾಂಗ್ರೆಸ್ ಹಗೆ ತೀರಿಸಿಕೊಳ್ಳುತ್ತಿದೆ: ಆರಗ ಜ್ಞಾನೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೆಳಗಾವಿ:ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ

ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ

ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಎಸ್‌ಡಿಎ ರುದ್ರಣ್ಣ ಕೇಸ್:‌ ಮೂವರು ಆರೋಪಿಗಳಿಗೆ ನಿರೀಕ್ಷಣಾ ಜಾಮೀನು

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

Assembly Election: “ಮಹಾ’ ಅಖಾಡದಲ್ಲಿ ಕರುನಾಡ ನಾಯಕರ ಹವಾ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Ajit Pawar

BJP;’ಬಟೆಂಗೆ ತೊ ಕಟೆಂಗೆ’ ಹೇಳಿಕೆಗೆ ಬೆಂಬಲವಿಲ್ಲ ಎಂದ ಅಜಿತ್ ಪವಾರ್

01

Catacombs: ಇದು ಎಲುಬುಗಳೇ ತುಂಬಿಕೊಂಡ ಸುರಂಗ; ಸುಂದರ ದೇಶದ ಕರಾಳ ಇತಿಹಾಸ

1-qweqwe

Mangaluru: ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು

1-ssss

J-K: ಭೀಕರ ಅಪಘಾ*ತದಲ್ಲಿ SUV ಚಲಾಯಿಸುತ್ತಿದ್ದ 17 ರ ಹುಡುಗರಿಬ್ಬರು ಮೃ*ತ್ಯು

DVG-Rail

Save Life: ಆಯತಪ್ಪಿ ಬಿದ್ದು ರೈಲಿನಡಿ ಸಿಲುಕುತ್ತಿದ್ದ ಪ್ರಯಾಣಿಕನ ಕಾಪಾಡಿದ ಹೋಂಗಾರ್ಡ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.