ಕಾಂಗ್ರೆಸ್‌ಗೆ ಸವಾಲು ಹಾಕದೆ ಬಿಜೆಪಿಯವರೇ ದಲಿತ ಸಿಎಂ ಘೋಷಿಸಲಿ; ಡಾ. ಪರಮೇಶ್ವರ್ ಸವಾಲು
Team Udayavani, Jan 5, 2023, 7:57 PM IST
ಬಳ್ಳಾರಿ: ಬಿಜೆಪಿಯವರು, ದಲಿತ ಸಿಎಂ ಘೋಷಣೆ ಮಾಡುವಂತೆ ಬರೀ ಕಾಂಗ್ರೆಸ್‌ನವರಿಗೆ ಸವಾಲು ಹಾಕುವುದಲ್ಲ. ಬಿಜೆಪಿಯವರು ಏಕೆ ದಲಿತ ಸಿಎಂ ಘೋಷಣೆ ಮಾಡಬಾರದು? ಎಂದು ಮಾಜಿ ಉಪಮುಖ್ಯಮಂತ್ರಿ ಡಾ. ಜಿ.ಪರಮೇಶ್ವರ್ ಸವಾಲು ಹಾಕಿದರು.
ನಗರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿಯವರು, ದಲಿತ ಸಿಎಂ ಮಾಡುವಂತೆ ಬರೀ ಕಾಂಗ್ರೆಸ್ ಪಕ್ಷಕ್ಕೆ ಸವಾಲು ಹಾಕುವುದಲ್ಲ. ಬಿಜೆಪಿಯವರು ಏಕೆ ದಲಿತ ಮುಖ್ಯಮಂತ್ರಿಯನ್ನು ಘೋಷಣೆ ಮಾಡಬಾರದು? ನೀವೂ ಘೋಷಣೆ ಮಾಡಿ ನೋಡೋಣ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸುತ್ತಾ ಬಿಜೆಪಿಯವರಿಗೆ ಸವಾಲು ಹಾಕಿದರು.
ಇದೇ ಏಪ್ರಿಲ್ ತಿಂಗಲ್ಲಿ ರಾಜ್ಯ ವಿಧಾನಸಭೆಗೆ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಮುಖ್ಯಮಂತ್ರಿ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣೆಯಲ್ಲಿ ಬಹುಮತ ಬಂದಲ್ಲಿ ಸಿಎಲ್‌ಪಿ ಸಭೆಯನ್ನು ಕರೆದು, ದೆಹಲಿಯಿಂದ ಬರುವ ವರಿಷ್ಠರು ಶಾಸಕರ ಅಭಿಪ್ರಾಯ ಸಂಗ್ರಹಿಸಲಿದ್ದಾರೆ. ಹೆಚ್ಚಿನ ಶಾಸಕರು ಯಾರ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸುತ್ತಾರೆ ಅಂತಹವರನ್ನು ಹೈಕಮಾಂಡ್ ಮುಖ್ಯಮಂತ್ರಿಯನ್ನಾಗಿ ಘೋಷಣೆ ಮಾಡಲಿದೆ ಎಂದು ಸ್ಪಷ್ಟಪಡಿಸಿದರು.
ನಾನು ಪವರ್ ಫುಲ್;
ಮುಖ್ಯಮಂತ್ರಿ ಸ್ಥಾನ ತಪ್ಪಿದ ಬಳಿಕ ಪಕ್ಷದಲ್ಲಿ ನಾನು ನೇಪತ್ಯಕ್ಕೆ ಸರಿದಿಲ್ಲ. ಅಂದು- ಇಂದು ನಾನು ಪವರ್ ಫುಲ್ ಆಗಿದ್ದೇನೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಎ.ಶಿವಕುಮಾರ್, ಮಾಜಿ ಸಿಎಂ ಸಿದ್ದರಾಮಯ್ಯ ಸಿಎಲ್‌ಪಿ ನಾಯಕರಾಗಿದ್ದಾರೆ. ಹಾಗಾಗಿ ಸ್ವಾಭಾವಿಕವಾಗಿ ಅವರು ಮುಂಚೂಣಿಯಲ್ಲಿರುತ್ತಾರೆ. ಸ್ವಲ್ಪ ನಾನು ಹಿಂದಿದ್ದೇನೆ ಅನ್ನಿಸಿರಬಹುದು. ಆದರೆ, ನಾನು ಅಂದು – ಇಂದು ಪವರ್‌ಫುಲ್ ಆಗಿದ್ದೇನೆ ಎಂದು ತಿಳಿಸಿದರು.
ಇದೇ ವೇಳೆ ಪಕ್ಷದಲ್ಲಿ ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಎಂದ ಡಾ. ಜಿ.ಪರಮೇಶ್ವರ್ ಅವರು, 2019 ರಲ್ಲಿ ಕಾಂಗ್ರೆಸ್ ಜೆಡಿಎಸ್ ಸಮ್ಮಿಶ್ರ ಸರ್ಕಾರವನ್ನು ಕೆಡವಿದ್ದು ಯಾರೆಂಬುದು ಜನರಿಗೆ ಗೊತ್ತಿದೆ. 17 ಶಾಸಕರನ್ನು ಮುಂಬೈಗೆ ಕರೆದುಕೊಂಡು ಹೋಗಿದ್ದು, ಹೋಟೇಲ್‌ನಲ್ಲಿ ತಂಗಿದ್ದು, ರಾಜೀನಾಮೆ ನೀಡಲು ಓಡೋಡಿ ಬಂದಿದ್ದು ಎಲ್ಲವೂ ಜನರಿಗೆ ಗೊತ್ತಿದೆ. ಪಕ್ಷದಲ್ಲಿ ನಾವೆಲ್ಲ ಒಗ್ಗಟ್ಟಾಗಿದ್ದೇವೆ. ಆದರೆ, ಕೆಲವೊಂದು ಅಭಿಪ್ರಾಯ ಭೇದಗಳಿರಬಹುದು ಎಂದು ಸ್ಪಷ್ಟಪಡಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಡಾ. ಹೆಚ್.ಸಿ.ಮಹಾದೇವಪ್ಪ, ಮಾಜಿ ಸಂಸದ ಬಿ.ಎನ್.ಚಂದ್ರಪ್ಪ, ಶಾಸಕರಾದ ಪಿ.ಟಿ.ಪರಮೇಶ್ವರ್ ನಾಯ್ಕ್, ಈ.ತುಕಾರಾಂ, ಬಿ.ನಾಗೇಂದ್ರ, ಜೆ.ಎನ್.ಗಣೇಶ್, ಮೇಯರ್ ರಾಜೇಶ್ವರಿ ಸುಬ್ಬರಾಯುಡು, ಜಿಲ್ಲಾಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್, ಹಿರಿಯ ಮುಖಂಡರಾದ ಮುಂಡ್ರಿಗಿ ನಾಗರಾಜ್, ಎ.ಮಾನಯ್ಯ ಸೇರಿದಂತೆ ಹಲವರು ಇದ್ದರು.
ಇದನ್ನೂ ಓದಿ: ವಿಮಾನದಲ್ಲೇ ಮಹಿಳಾ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜನೆ; ಡಿಜಿಸಿಎ ಆಕ್ರೋಶ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.