ಫೆಬ್ರವರಿಯಲ್ಲಿ ಕೈಗಾರಿಕೋದ್ಯಮಿಗಳ ಸಮಾವೇಶ: ಸಚಿವ ಎಂಟಿಬಿ ನಾಗರಾಜು
Team Udayavani, Jan 5, 2023, 9:04 PM IST
ಬೆಂಗಳೂರು: ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ ಬಂಡವಾಳ ಹೂಡಿಕೆಗೆ ಒಪ್ಪಂದ ಮಾಡಿಕೊಂಡಿರುವ ಬೃಹತ್ ಕೈಗಾರಿಕೆಗಳಿಗೆ ಅಗತ್ಯವಾದ ಬಿಡಿ ಭಾಗಗಳ ಪೂರೈಕೆಗಾಗಿ ಬೃಹತ್ ಮತ್ತು ಸಣ್ಣ ಕೈಗಾರಿಕೋದ್ಯಮಿಗಳನ್ನು ಒಂದೆಡೆ ಸೇರಿಸಿ ಫೆಬ್ರವರಿಯಲ್ಲಿ ಸಮಾವೇಶ ನಡೆಸಲಾಗುವುದು ಎಂದು ಪೌರಾಡಳಿತ, ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವ ಎಂಟಿಬಿ ನಾಗರಾಜು ತಿಳಿಸಿದರು.
ಗುರುವಾರ ವಿಧಾನ ಸೌಧದಲ್ಲಿ ಕೈಗಾರಿಕೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ, ನಂತರ ಮಾತನಾಡಿ, ನಗರದಲ್ಲಿ ಇತ್ತೀಚೆಗೆ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ರಾಜ್ಯದಲ್ಲಿ 9.81ಲಕ್ಷ ಕೋಟಿ ರೂ.ಬಂಡವಾಳ ಹೂಡಿಕೆಯ ಒಪ್ಪಂದ ಮಾಡಿಕೊಂಡಿರುವ ಬೃಹತ್ ಉದ್ದಿಮೆಗಳಿಗೆ ಭಾರೀ ಪ್ರಮಾಣದಲ್ಲಿ ಬಿಡಿ ಭಾಗಗಳ ಅಗತ್ಯ ಬೀಳಲಿದೆ. ಆದ್ದರಿಂದ ಮತ್ತಷ್ಟು ಸಣ್ಣ ಮತ್ತು ಅತಿ ಸಣ್ಣ ಕೈಗಾರಿಕೆಗಳ ಸ್ಥಾಪನೆ ಆಗಬೇಕಿದೆ ಎಂದು ಹೇಳಿದರು.
ಈ ಹಿನ್ನೆಲೆಯಲ್ಲಿ ಫೆಬ್ರವರಿ ನಾಲ್ಕನೇ ವಾರದಲ್ಲಿ ಬೃಹತ್ ಮತ್ತು ಸಣ್ಣ ಉದ್ದಿಮೆದಾರರನ್ನು ಒಂದೆಡೆ ಸೇರಿಸಿ ಬೆಂಗಳೂರಿನಲ್ಲಿ ಸಮಾವೇಶ ನಡೆಸಲಾಗುವುದು. ತಾತ್ಕಾಲಿಕವಾಗಿ ಫೆ.22 ಮತ್ತು 23ರಂದು ಅರಮನೆ ಮೈದಾನದಲ್ಲಿ ಸಮಾವೇಶ ನಡೆಸಲು ಉದ್ದೇಶಿಸಲಾಗಿದ್ದು, ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ದಿನಾಂಕ ಅಂತಿಮಗೊಳಿಸಲಾಗುವುದು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಮಹಾನಗರ ಪಾಲಿಕೆ ಉಪ ಚುನಾವಣೆ… ವಾರ್ಡ್ ನಂ.29ರಲ್ಲಿ ಬಿಜೆಪಿ ಗೆಲುವು
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Siddaramaiah ಸಂಪುಟ ಸೇರಲು ಭರ್ಜರಿ ಲಾಬಿ: ಆಕಾಂಕ್ಷಿಗಳು ಯಾರು? ಕೆಲವರಿಗೆ ಕೊಕ್?
Karnataka BJP; ಬಣ ಸಂಘರ್ಷ ತೀವ್ರ…;ಶಿಸ್ತುಕ್ರಮಕ್ಕೆ ವಿಜಯೇಂದ್ರ ಪಟ್ಟು?
BJP: ಇಂದು ಅಶೋಕ್ ನೇತೃತ್ವದ ಸಭೆ; ಡಿ. 7ಕ್ಕೆ ಬಿಜೆಪಿ ಕೋರ್ ಕಮಿಟಿ ಸಭೆ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
26/11 Te*rror Attack: ಕರಾಳ ನೆನಪಿಗೆ 16 ವರ್ಷ-ಆರು ಧೀರ ಹೀರೋಗಳು..ಹುತಾತ್ಮರಿಗೆ ಗೌರವ
Census: ಇರಾಕ್ನಲ್ಲಿ 37 ವರ್ಷಗಳ ಬಳಿಕ ಗಣತಿ… 4.54 ಕೋಟಿ ಜನಸಂಖ್ಯೆ
Dharmasthala: ಲಕ್ಷದೀಪಗಳ ಜಗಮಗ; ವಿದ್ಯುತ್ ದೀಪಗಳಿಂದ ಶೃಂಗಾರ
Dharmasthala: ಇಂದಿನಿಂದ ಲಕ್ಷದೀಪೋತ್ಸವ… ರಾಜ್ಯಮಟ್ಟದ ವಸ್ತು ಪ್ರದರ್ಶನಕ್ಕೆ ಚಾಲನೆ
Maharashtra: ಮುಖ್ಯಮಂತ್ರಿ ಸ್ಥಾನಕ್ಕೆ ಏಕನಾಥ್ ಶಿಂದೆ ರಾಜೀನಾಮೆ… ಮುಂದಿನ ಸಿಎಂ ಯಾರು?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.