‘ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ..’; ದೊಡ್ಡದಾಗಿ ಸಿಗ್ನಲ್ ಕೊಟ್ಟ ರಾಕಿಭಾಯ್
Team Udayavani, Jan 6, 2023, 9:38 AM IST
ಕೆಜಿಎಫ್ ಚಿತ್ರದ ಬಳಿಕ ದೇಶಾದ್ಯಂತ ಹೆಸರು ಮಾಡಿರುವ ರಾಕಿ ಭಾಯ್ ಯಶ್ ಅವರ ಹುಟ್ಟುಹಬ್ಬಕ್ಕೆ ಅಭಿಮಾನಿಗಳು ಕಾಯುತ್ತಿದ್ದಾರೆ. ಜ.8ರಂದು ಯಶ್ ಅವರ ಹುಟ್ಟು ಹಬ್ಬವಿದ್ದು, ಈಗಾಗಲೇ ಸಿಡಿಪಿ ( ಕಾಮನ್ ಡಿಪಿ) ಮಾಡಿರುವ ಅವರು ಪ್ರೀತಿಯ ನಟನ ಬರ್ತ್ ಡೇಯನ್ನು ಜೋರಾಗಿ ಆಚರಿಸಲು ತಯಾರಿ ಮಾಡಿಕೊಂಡಿದ್ದಾರೆ. ಆದರೆ ಅಭಿಮಾನಿಗಳಿಗೆ ಯಶ್ ಬೇಸರ ಮೂಡಿಸಿದ್ದಾರೆ.
ಬರ್ತ್ ಡೇ ದಿನದಂದು ತಾನು ಅಭಿಮಾನಿಗಳಿಗೆ ಲಭ್ಯವಿರುವುದಿಲ್ಲ ಎಂದು ಯಶ್ ಹೇಳಿಕೊಂಡಿದ್ದಾರೆ. ಈ ಬಾರಿ ನಾನು ನಿಮ್ಮೊಂದಿಗೆ ಕಳೆಯಬೇಕು ಎಂದುಕೊಂಡಿದ್ದೆ. ಆದರೆ ನಿಮ್ಮ ನಿರೀಕ್ಷೆಗೆ ತಕ್ಕೆಂತೆ ನಿಮ್ಮ ಮುಂದೆ ಬರಲು ಸ್ವಲ್ಪ ಸಮಯ ಬೇಕು. ಅದಕ್ಕಾಗಿ ಕೆಲಸ ಮಾಡುತ್ತಿದ್ದೇನೆ ಎಂದಿದರುವ ಯಶ್, ‘ ದೊಡ್ಡದಾಗಿ’ ಏನೋ ಮಾಡುತ್ತಿರುವ ಬಗ್ಗೆ ಸುಳಿವು ನೀಡಿದ್ದಾರೆ.
ಯಶ್ ಬರೆದಿರುವ ಪತ್ರ ಇಲ್ಲಿದೆ.
ಪ್ರೀತಿಯ ಅಭಿಮಾನಿಗಳಿಗೆ ನಮಸ್ಕಾರ…
ನಿಮ್ಮ ಕಲ್ಮಶವಿಲ್ಲದ ಪ್ರೀತಿ, ಸಾಟಿಯೇ ಇಲ್ಲದ ಅಭಿಮಾನ, ನನ್ನ ಹೃದಯ ತುಂಬುವಂತೆ ಮಾಡಿದೆ. ನನಗೆ ಗೊತ್ತು ನೀವಲ್ಲ ಕಾಯುತ್ತಿದ್ದೀರಾ. ಹುಟ್ಟಿದ ದಿನ ತುಂಬಾ ವಿಶೇಷ ಅಂತ ನನಗೆ ಅನ್ನಿಸೋಕೆ ಶುರುವಾಗಿದ್ದೆ ಇತ್ತೀಚಿನ ವರ್ಷಗಳಲ್ಲಿ. ಯಾವಾಗ ನೀವು ನನ್ನ ದಿನವನ್ನ ನಿಮ್ಮ ದಿನವನ್ನಾಗಿಸಿಕೊಂಡು ಆಚರಿಸಿ ವಿಜೃಂಭಿಸೋಕೆ ಸುರು ಮಾಡಿದ್ದರಿಂದ.
ಹಾಗಾಗಿ ನಾನು ಕೂಡ ಈ ವರ್ಷದ ಹುಟ್ಟುಹಬ್ಬದಂದು ನಿಮ್ಮನ್ನ ನೋಡಬೇಕು. ನಿಮ್ಮೊಂದಿಗೆ ಸಮಯ ಕಳೆಯಬೇಕು ಅಂದುಕೊಂಡಿದ್ದೆ. ಆದರೆ ಜಗದಗಲದ ನಿರೀಕ್ಷೆಯಲ್ಲಿರುವ ನಿಮ್ಮ ಮುಂದೆ ನಿಲ್ಲಲು ಇನ್ನೂ ಸ್ವಲ್ಪವೇ ಸ್ವಲ್ಪ ಸಮಯ ಕೊಡಿ…. ನಿಮಗಾಗಿ ವಿಭಿನ್ನವಾಗಿರೋದನನ್ನೂ ನಿಮ್ಮ ಮುಂದೆ ತರಲು ಶ್ರದ್ಧೆಯಿಂದ ಕೆಲಸ ಮಾಡುತ್ತಿದ್ದೇನೆ. ಅಲ್ಲಿಯವರೆಗೂ ನಿಮ್ಮ ತಾಳ್ಮೆ ಮತ್ತು ಪ್ರೀತಿಯೇ ನನಗೆ ಈ ವರ್ಷದ ಹುಟ್ಟಹಬ್ಬದ ನಿಮ್ಮ ಉಡುಗೊರೆ.
ಕ್ಷಮಿಸಿ… ಈ ವರ್ಷದ ಹುಟ್ಟಹಬ್ಬಕ್ಕೆ ನಿಮ್ಮ ಜೊತೆ ಇರಲು ಸಾಧ್ಯವಾಗುತ್ತಿಲ್ಲ. ಆದರೆ ಆದಷ್ಟು ಬೇಗ ನಿಮಗೆ ಸಿಗುತ್ತೇನೆ ಮತ್ತು ನಿಮ್ಮ ಕಾಯುವಿಕೆಯನ್ನು ಅರ್ಥಪೂರ್ಣವಾಗಿಸುತ್ತೇನೆ.
ನಿಮ್ಮ ಪ್ರೀತಿಯ
ಯಶ್
To my fans,
With love
Yash pic.twitter.com/8Tm4j0Ubzi— Yash (@TheNameIsYash) January 5, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.