ಯಲ್ಲಮ್ಮನ ಯಾತ್ರಾರ್ಥಿಗಳ ಟ್ರ್ಯಾಕ್ಟರ್ ಪಲ್ಟಿ: ಇಬ್ಬರ ಸಾವು, 10 ಕ್ಕೂ ಹೆಚ್ಚು ಜನರಿಗೆ ಗಾಯ
Team Udayavani, Jan 6, 2023, 2:17 PM IST
ಮುಧೋಳ : ಸವದತ್ತಿ ಯಲ್ಲಮ್ಮನ ದೇವಿ ಜಾತ್ರೆಗೆ ತೆರಳಿ ವಾಪಸ್ ಊರಿಗೆ ತೆರಳುತ್ತಿದ್ದ ಟ್ರ್ಯಾಕ್ಟರ್ ಪಲ್ಟಿಯಾಗಿ ಇಬ್ಬರು ಸಾವಿಗೀಡಾಗಿ ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ಸಮೀಪದ ಕುಳಲಿ ಹತ್ತಿರ ಗುರುವಾರ ನಡೆದಿದೆ.
ಗೋವಿಂದ ಪಾಟೀಲ (20) ಹಾಗೂ ಹನಮಂತ ಬೊಮ್ಮಕ್ಕನವರ (20) ಮೃತ ದುರ್ದೈವಿಗಳು. ನಾವಲಗಿಯ ಗ್ರಾಮಸ್ಥರು ಎರಡು ದಿನಗಳ ಹಿಂದೆ ಸವದತ್ತಿ ಯಲ್ಲಮ್ಮನ ಜಾತ್ರೆಗೆ ತೆರಳಿದ್ದರು. ಜಾತ್ರೆ ಮುಗಿಸಿ ಮರಳಿ ಗ್ರಾಮಕ್ಕೆ ವಾಪಸ್ಸಾಗುವ ಇಬ್ಬರು ಟ್ರ್ಯಾಕ್ಟರ್ ಚಾಲಕರು ಒಬ್ಬರಿಗೊಬ್ಬರು ಓವರ್ ಟೇಕ್ ಮಾಡುವ ವೇಳೆ ಚಾಲಕನ ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಟ್ರೇಲರ್ ಅಂದಾಜು 20 ಅಡಿ ತಗ್ಗು ಪ್ರದೇಶದ ಹೊಲದಲ್ಲಿ ಪಲ್ಟಿಯಾಗಿದೆ. ಅವಘಡದಿಂದಾಗಿ ನಾಲ್ವರಿಗೆ ಗಂಭೀರ ಗಾಯವಾಗಿದ್ದು, ಇನ್ನುಳಿದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ನೆರವಿಗೆ ಧಾವಿಸಿದ ಸಾರ್ವಜನಿಕರು
ಟ್ರ್ಯಾಕ್ಟರ್ ಟ್ರೇಲರ್ ಪಲ್ಟಿಯಾದೊಡನೆ ಸ್ಥಳೀಯರ ಗಾಯಾಳುಗಳ ನೆರವಿಗೆ ಧಾವಿಸಿ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ. ಮಗುಚಿ ಬಿದ್ದಿದ್ದ ಟ್ರೇಲರ್ ನ್ನು ಕೂಡಲೇ ಮೇಲೆತ್ತಿದ್ದ ಪರಿಣಾಮ ಹೆಚ್ಚಿನ ಸಾವು ನೋವು ತಪ್ಪಿಸಿದ್ದಾರೆ. ಕೂಡಲೇ ಅಂಬ್ಯುಲೆನ್ಸ್ ಗೆ ಕರೆಮಾಡಿ ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲು ನೆರವಾದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
High Court: ಮುಮ್ತಾಜ್ ಅಲಿ ಆತ್ಮಹ*ತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲ್ಲ
Karnataka: ಲೋಕಾಯುಕ್ತ ದಾಳಿ; ಕಂತೆ ಕಂತೆ ಹಣ ವಶಕ್ಕೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.