ಆಧುನಿಕ ತಂತ್ರೋಪಕರಣ ಬಳಸಿ ಇಂಗ್ಲಿಷ್ ಸಂವಹನ ತರಬೇತಿ: ಅಶ್ವತ್ಥನಾರಾಯಣ
Team Udayavani, Jan 7, 2023, 3:42 PM IST
ಬೆಂಗಳೂರು: ವಿದ್ಯಾರ್ಥಿಗಳಲ್ಲಿ ಇಂಗ್ಲಿಷ್ ಸಂವಹನ ಕೌಶಲವನ್ನು ಹೆಚ್ಚಿಸಿ ಅವರ ಉದ್ಯೋಗಾವಕಾಶಗಳನ್ನು ವಿಸ್ತರಿಸಲು ಆಧುನಿಕ ತಂತ್ರೋಪಕರಣಗಳ ನೆರವಿನಿಂದ ತರಬೇತಿ ಕೊಡಲು ಒತ್ತು ನೀಡಲಾಗಿದೆ ಎಂದು ಕೌಶಲಾಭಿವೃದ್ಧಿ ಸಚಿವ ಡಾ. ಸಿ ಎನ್ ಅಶ್ವಥ್ ನಾರಾಯಣ ಶನಿವಾರ ಹೇಳಿದರು.
ಮಲ್ಲೇಶ್ವರದ 13ನೇ ಕ್ರಾಸ್ ಬಾಲಕಿಯರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಕೌಶಲಾಭಿವೃದ್ಧಿ ನಿಗಮದ ವತಿಯಿಂದ ‘ಸಂಕಲ್ಪ್’ ಉಪಕ್ರಮದಡಿ ಸ್ಥಾಪಿಸಿರುವ ಭಾಷಾ ಪ್ರಯೋಗಾಲಯವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರಾಜ್ಯದಲ್ಲಿ 2022ರ ಜನವರಿಯಿಂದ ಈಚೆಗೆ 6 ಕಡೆಗಳಲ್ಲಿ ಇಂತಹ ಭಾಷಾ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದೆ. ಈ ಸಾಲಿನಲ್ಲಿ ಇದುವರೆಗೆ ಈ ಪ್ರಯೋಗಾಲಯಗಳಲ್ಲಿ 784 ವಿದ್ಯಾರ್ಥಿಗಳಿಗೆ ತರಬೇತಿ ಕೊಡಲಾಗಿದೆ ಎಂದು ವಿವರಿಸಿದರು.
ಈ ಪ್ರಯೋಗಾಲಯಗಳಲ್ಲಿ ಹೆಡ್ ಸೆಟ್, ಮೈಕ್ರೋಫೋನ್, ಪ್ರೊಜೆಕ್ಟರ್ ಇತ್ಯಾದಿಗಳನ್ನು ಬಳಸಿ ಇಂಗ್ಲಿಷ್ ಸಂವಹನ ಕಲಿಸಲಾಗುವುದು. ಇಂಗ್ಲಿಷ್ ಉಚ್ಚಾರಣೆ ಸೇರಿದಂತೆ ಹಲವು ಅಂಶಗಳಿಗೆ ಗಮನ ಕೊಡಲಾಗುತ್ತದೆ. ನಮ್ಮ ಮಾತೃಭಾಷೆ ಕನ್ನಡದಂತೆಯೇ ವಿದ್ಯಾರ್ಥಿಗಳು ಇಂಗ್ಲೀಷ್ ನಲ್ಲಿಯೂ ಹಿಡಿತ ಸಾಧಿಸಬೇಕೆಂಬ ಆಶಯದೊಂದಿಗೆ ತರಬೇತಿಯನ್ನು ಕೊಡಲಾಗುತ್ತದೆ ಎಂದರು.
ಈ ಕೇಂದ್ರವನ್ನು ಹೊರತುಪಡಿಸಿ ಚಳ್ಳಕೆರೆ, ಕೊಪ್ಪಳ, ಯಾದಗಿರಿಗಳಲ್ಲಿರುವ ಜಿಟಿಟಿಸಿ ಗಳು, ಕೊಳ್ಳೇಗಾಲದಲ್ಲಿರುವ ಸರ್ಕಾರಿ ಐಟಿಐ ಮತ್ತು ಮಂಗಳೂರಿನಲ್ಲಿರುವ ಸರ್ಕಾರಿ ಮಹಿಳಾ ಐಟಿಐ ಗಳಲ್ಲಿ ಈ ಭಾಷಾ ಪ್ರಯೋಗಗಳು ಕಾರ್ಯಾಚರಿಸುತ್ತಿವೆ. ಮಂಡ್ಯ ವಿಶ್ವವಿದ್ಯಾಲಯದಲ್ಲಿ ಇಂತಹ ಪ್ರಯೋಗಾಲಯ ಶೀಘ್ರವೇ ಸ್ಥಾಪನೆಯಾಗಲಿದೆ ಎಂದು ಸಚಿವರು ತಿಳಿಸಿದರು.
ಕಾರ್ಯಕ್ರಮದಲ್ಲಿ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಶ್ವಿನ್ ಗೌಡ, ನಿಗಮ ಜಂಟಿ ನಿರ್ದೇಶಕ ಕೃಷ್ಣಮೂರ್ತಿ, ಕಾಲೇಜಿನ ಪ್ರಾಂಶುಪಾಲರಾದ ರವಿ ಸೇರಿದಂತೆ ಇತರ ಅಧಿಕಾರಿಗಳು ಮತ್ತು ಕಾಲೇಜಿನ ಸಿಬ್ಬಂದಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ:ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶನ
MUST WATCH
ಹೊಸ ಸೇರ್ಪಡೆ
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.