ಸೆನ್ಸಾರ್ ಪಾಸಾದ “ಧೈರ್ಯಂ ಸರ್ವತ್ರ ಸಾಧನಂ’
Team Udayavani, Jan 8, 2023, 3:43 PM IST
ಬಹುತೇಕ ಹೊಸಪ್ರತಿಭೆಗಳೆ ಇರುವ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾ ತೆರೆಗೆ ಬರಲು ಸಿದ್ಧವಾಗುತ್ತಿದೆ. ಇತ್ತೀಚೆಗಷ್ಟೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ “ಎ’ ಸರ್ಟಿಫಿಕೆಟ್ ನೀಡುವ ಮೂಲಕ ಬಿಡುಗಡೆಗೆ ಅಸ್ತು ಎಂದಿದೆ.
“ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾದಲ್ಲಿ ನವನಟ ವಿವನ್ ಕೆ. ಕೆ ನಾಯಕ ನಟನಾಗಿ ನಟಿಸುತ್ತಿದ್ದು, ಅನುಷಾ ರೈ ನಾಯಕಿಯಾಗಿ ತೆರೆ ಹಂಚಿಕೊಂಡಿದ್ದಾರೆ. ಉಳಿದಂತೆ ಯಶ್ಶೆಟ್ಟಿ, ಬಾಲ ರಾಜವಾಡಿ, ಜೀವನ್ ರಿಚಿ, ಪ್ರದೀಪ್ ಪೂಜಾರಿ, ರಾಮ್ ಪವನ್, ವರ್ಧನ್ ತೀರ್ಥಹಳ್ಳಿ ಹೊಂಗಿರಣ ಚಂದ್ರು ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
“ಎ. ಪಿ. ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಆನಂದ್ ಬಾಬು. ಜಿ ನಿರ್ಮಿಸಿರುವ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾಕ್ಕೆ ಜ್ಯೂಡ ಸ್ಯಾಂಡಿ ಸಂಗೀತ ಸಂಯೋಜಿಸಿ ದ್ದಾರೆ. ಚಿತ್ರದ ಹಾಡುಗಳಿಗೆ ಕಿನ್ನಾಲ್ ರಾಜ್, ಅರಸು ಅಂತಾರೆ, ಹೃದಯ ಶಿವ ಸಾಹಿತ್ಯವಿದೆ.
ಚಿತ್ರಕ್ಕೆ ರವಿಕುಮಾರ್ ಸನ ಛಾಯಾಗ್ರಹಣ, ಶ್ರೀಕಾಂತ್ ಸಂಕಲನವಿದೆ. ಎ. ಆರ್ ಸಾಯಿರಾಮ್ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗಾಗಲೇ “ಹೆಂಡವೇ ನಮ್ಮ ಮನೆ ದ್ಯಾವರು…’ ಎಂಬ ಹಾಡನ್ನು ಬಿಡುಗಡೆ ಮಾಡುವ ಮೂಲಕ “ಧೈರ್ಯಂ ಸರ್ವತ್ರ ಸಾಧನಂ’ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿರುವ ಚಿತ್ರತಂಡ, ಇದೇ ಫೆಬ್ರವರಿ ಅಥವಾ ಮಾರ್ಚ್ನಲ್ಲಿ ತೆರೆಗೆ ಬರುವ ಯೋಜನೆಯಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Jammu and Kashmir; ಉಗ್ರವಾದ ಪರಿಸರ ವ್ಯವಸ್ಥೆ ಬಹುತೇಕ ಕೊನೆಗೊಂಡಿದೆ: ಶಾ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.