ಒಂದು ಜಿಪಂ, 18 ತಾಪಂ ಕ್ಷೇತ್ರ ಕಡಿತ

Team Udayavani, Jan 8, 2023, 4:36 PM IST

tdy-15

ಮಂಡ್ಯ: ಜಿಲ್ಲೆಯಲ್ಲಿ ಜಿಲ್ಲಾ ಪಂಚಾಯ್ತಿ ಹಾಗೂ ತಾಲೂಕು ಪಂಚಾಯ್ತಿಗಳ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಿರುವ ಕರ್ನಾಟಕ ಪಂಚಾಯತ್‌ ರಾಜ್‌ ಸೀಮಾ ನಿರ್ಣಯ ಆಯೋಗ ಜಿಪಂ ಹಾಗೂ ತಾಪಂ ಕ್ಷೇತ್ರಗಳ ಸದಸ್ಯರ ಸಂಖ್ಯೆ ಇಳಿಸಿ ಸೀಮಾ, ಗಡಿ ನಿರ್ಣಯ ಮಾಡಿದೆ.

ಜಿಲ್ಲೆಯ ಜಿಪಂ ಹಾಗೂ ತಾಪಂ ಕ್ಷೇತ್ರಗಳ ವ್ಯಾಪ್ತಿ ಯೊಳಗಿರುವ ಪ್ರದೇಶಗಳನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರಗಳನ್ನಾಗಿ ವಿಂಗಡಿಸಿ ಅವುಗಳ ಸೀಮಾ/ಗಡಿಯನ್ನು ಪ್ರಾದೇಶಿಕ ಚುನಾವಣಾ ಕ್ಷೇತ್ರದ ಸಂಖ್ಯೆ ಹಾಗೂ ಗ್ರಾಮಗಳನ್ನೊಳಗೊಂಡ ಪ್ರದೇಶವನ್ನು ಚುನಾವಣಾ ಕ್ಷೇತ್ರದ ವ್ಯಾಪ್ತಿ ಎಂದು ನಿಗದಿಪಡಿಸಿದೆ.

ಆಕ್ಷೇಪಣೆಗೆ 15 ದಿನಗಳ ಅವಕಾಶ: ಜಿಪಂ ಹಾಗೂ ತಾಪಂ ಸದಸ್ಯರ ಸಂಖ್ಯೆ ಹಾಗೂ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳಿದ್ದಲ್ಲಿ ಜ.16ರ ಸಂಜೆ 5ರೊಳಗೆ ಸಲ್ಲಿಸಲು ತಿಳಿಸಲಾಗಿದೆ. ಆನ್‌ಲೈನ್‌, ಖುದ್ದಾಗಿ ಹಾಗೂ ಅಂಚೆ ಮೂಲಕ ಸಲ್ಲಿಸಬಹುದಾಗಿದೆ.

ಜಿಪಂ ಒಂದು ಕ್ಷೇತ್ರ ಇಳಿಕೆ: ಮಂಡ್ಯ ಜಿಲ್ಲೆಯ ಜಿಪಂಗೆ ಕಳೆದ ಬಾರಿ 41 ಕ್ಷೇತ್ರಗಳಿದ್ದವು. ಪುನರ್‌ವಿಂಗಡಣೆ ನಂತರ ಒಂದು ಕ್ಷೇತ್ರ ಇಳಿಕೆ ಮಾಡಿ, ಒಟ್ಟು 40 ಕ್ಷೇತ್ರ ನಿಗದಿಪಡಿಸಿದೆ. ಮಂಡ್ಯ, ಮದ್ದೂರು, ಮಳವಳ್ಳಿ ತಲಾ 7, ಪಾಂಡವಪುರ 5, ಶ್ರೀರಂಗಪಟ್ಟಣ 4, ಕೆ.ಆರ್‌.ಪೇಟೆ 6 ಹಾಗೂ ನಾಗಮಂಗಲ 4 ಕ್ಷೇತ್ರಗಳಿಗೆ ನಿಗದಿಪಡಿಸಲಾಗಿದೆ. ಇದರಲ್ಲಿ ನಾಗಮಂಗಲದಲ್ಲಿ ಮೊದಲು 5 ಕ್ಷೇತ್ರಗಳಲ್ಲಿ ಒಂದು ಕ್ಷೇತ್ರ ಕಡಿತಗೊಳಿಸಲಾಗಿದೆ. ತಾಪಂ 18 ಕ್ಷೇತ್ರ ಕಡಿತ: ಕಳೆದ ಬಾರಿ ಜಿಲ್ಲೆಯ ಎಲ್ಲಾ ತಾಲೂಕುಗಳಿಂದ ಇದ್ದ ತಾಪಂ ಕ್ಷೇತ್ರಗಳನ್ನು 155 ರಿಂದ 137ಕ್ಕೆ ಇಳಿಸಲಾಗಿದೆ. ಇದರಿಂದ ಒಟ್ಟು 18 ಕ್ಷೇತ್ರ ಕಡಿತಗೊಳಿಸಲಾಗಿದೆ. ಮಂಡ್ಯ 28ರಿಂದ 24ಕ್ಕೆ ಇಳಿಸಲಾಗಿದೆ. ಅದರಂತೆ ಮದ್ದೂರು 27ರಿಂದ 23ಕ್ಕೆ, ಮಳವಳ್ಳಿ 25ರಿಂದ 21ಕ್ಕೆ, ಪಾಂಡವಪುರ 17, ಶ್ರೀರಂಗ ಪಟ್ಟಣ 16 ಕ್ಷೇತ್ರಗಳೇ ಯಥಾವತ್ತಾಗಿ ಮುದುವರಿಸಲಾಗಿದೆ. ಕೆ.ಆರ್‌.ಪೇಟೆ 24ರಿಂದ 20ಕ್ಕೆ ಹಾಗೂ ನಾಗಮಂಗಲ ತಾಲೂಕಿನಲ್ಲಿ 18ರಿಂದ 16ಕ್ಕೆ ಇಳಿಸಲಾಗಿದೆ.

ಎರಡನೇ ಬಾರಿ ವಿಂಗಡಣೆ: ಕಳೆದ ಬಾರಿ 2021ರಲ್ಲಿ ಪುನರ್‌ ವಿಂಗಡಣೆ ಮಾಡಿದ್ದ ಸಂದರ್ಭದಲ್ಲಿ ಜಿಪಂ ಕ್ಷೇತ್ರಗಳನ್ನು 5 ಕ್ಷೇತ್ರಗಳ ಏರಿಕೆ ಮಾಡಲಾಗಿತ್ತು. ಅದರಂತೆ ತಾಪಂ ಕ್ಷೇತ್ರಗಳನ್ನು 29ಕ್ಕೆ ಇಳಿಕೆ ಮಾಡಿ ನಿಗದಿಪಡಿಸಲಾಗಿತ್ತು. ಆದರೆ, ಈ ಬಾರಿ ಜಿಪಂ ಕ್ಷೇತ್ರಗಳ ಪೈಕಿ ಒಂದು ಕ್ಷೇತ್ರ, ತಾಪಂ 18 ಕ್ಷೇತ್ರಗಳ ಕಡಿತ ಮಾಡಲಾಗಿದೆ. ಜನಸಂಖ್ಯೆ ಆಧಾರದ ಮೇಲೆ ಕ್ಷೇತ್ರಗಳ ವಿಂಗಡಣೆ: 2021ರಲ್ಲಿಯೇ ಕ್ಷೇತ್ರಗಳ ಮರು ವಿಂಗಡಣೆ ಕಾರ್ಯ ನಡೆದಿತ್ತು. ಅದರಂತೆ ಜನಸಂಖ್ಯಾ ಆಧಾರದ ಮೇಲೆ ಜಿಪಂ, ತಾಪಂ ಕ್ಷೇತ್ರಗಳ ವಿಂಗಡಣೆ ಮಾಡಲಾಗಿತ್ತು. ತಾಲೂಕಿನ ಜಿಪಂ, ತಾಪಂ ಕ್ಷೇತ್ರಗಳ ಗಡಿ ಗುರುತಿಸಿ, ನಿಗದಿಪಡಿಸಿದ ಗಡಿ ಕ್ಷೇತ್ರಗಳಲ್ಲಿ ಮತದಾರರ ಸಂಖ್ಯೆ ಕಡಿಮೆಯಾದಲ್ಲಿ ಪಕ್ಕದ ಗ್ರಾಮಗಳನ್ನು ವಿಭಜಿಸದೇ ಸಂಪೂರ್ಣ ಸೇರಿಸಿಕೊಂಡು ಕ್ಷೇತ್ರ ನಿಗದಿಪಡಿಸಲಾಗಿತ್ತು. ಅಲ್ಲದೆ, ಭೌಗೋಳಿಕವಾಗಿ ಗ್ರಾಪಂಗಳನ್ನು ಸೇರಿಸಿಕೊಂಡು ಮತದಾರರ ಸಂಖ್ಯೆ ಹಾಗೂ ಗ್ರಾಮ ದೊಡ್ಡದಾಗಿದ್ದರೆ ಆ ಗ್ರಾಮವನ್ನೇ ಕ್ಷೇತ್ರವನ್ನಾಗಿ ಹೆಸರಿಡಬಹುದು. ತಾಲೂಕುಗಳಲ್ಲಿ ಕ್ಷೇತ್ರಗಳ ಬದಲಾವಣೆ ಇಲ್ಲದಿದ್ದರೆ ಆ ತಾಲೂಕಿನಲ್ಲಿ ಯಾವುದೇ ಬದಲಾವಣೆ ಮಾಡುವಂತಿಲ್ಲ ಎಂದು ಸೂಚಿಸಿತ್ತು. ಅದರಂತೆ ಕ್ಷೇತ್ರಗಳ ಪುನರ್‌ ವಿಂಗಡಣೆ ಮಾಡಿ ವರದಿ ಸಲ್ಲಿಸಲಾಗಿತ್ತು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

2047ಕ್ಕೆ ವಿಕಸಿತ ಭಾರತ ನಿರ್ಮಾಣ: ಉಪರಾಷ್ಟ್ರಪತಿ

Vice President: 2047ಕ್ಕೆ ವಿಕಸಿತ ಭಾರತ ನಿರ್ಮಾಣ: ಜಗದೀಪ್‌ ಧನಕರ್‌

20-mandya

Mahadevapura: ಲಿಫ್ಟ್ ಗುಂಡಿಗೆ ಬಿದ್ದ ಬಾಲಕ ಸಾವು

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya: ದೇಶದ ಮೊದಲ “ರೈತರ ಶಾಲೆ’ ಶೀಘ್ರ ಆರಂಭ

Mandya1

Mandya: ಸಾಹಿತ್ಯ ಸಮ್ಮೇಳನ ಸಂಭ್ರಮಕ್ಕೆ ಕೊರತೆಯಾಗದಂತೆ ಮಿತಿಯಲ್ಲಿ ಖರ್ಚು ಮಾಡಿ: ಸಚಿವ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.