5 ವರ್ಷದ ಬಳಿಕ ಶ್ರೀ ಬಿಳಿಗಿರಿರಂಗನಾಥ ಸ್ವಾಮಿ ಜಾತ್ರೋತವ

Team Udayavani, Jan 9, 2023, 3:10 PM IST

TDY-21

ಯಳಂದೂರು: ತಾಲೂಕಿನ ಪೌರಾಣಿಕ, ಜಾನಪ ದೀಯ ಪ್ರಸಿದ್ಧ ಗಿರಿಧಾಮವಾಗಿರುವ ಬಿಳಿಗಿರಿರಂಗನ ಬೆಟ್ಟದಲ್ಲಿ ಶ್ರೀ ಬಿಳಿಗಿರಿರಂಗನಾಥ ಸ್ವಾಮಿಯ ಚಿಕ್ಕ ಜಾತ್ರೆ 5 ವರ್ಷಗಳ ನಂತರ ನಡೆಯುತ್ತಿದ್ದು ಇದಕ್ಕಾಗಿ ಭರಪೂರ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿದೆ.

ಪೌರಾಣಿಕ ಪ್ರಸಿದ್ಧ ಯಾತ್ರಸ್ಥಳ: ಬಿಳಿಗಿರಿರಂಗನಾಥ ಸ್ವಾಮಿ ದೇಗುಲವನ್ನು ತನ್ನೊಡಲಿ ನಲ್ಲಿಟ್ಟು ಕೊಂಡಿರುವ ಬಿಳಿಗಿರಿರಂಗನಬೆಟ್ಟ ಪೌರಾಣಿಕ ಪ್ರಸಿದ್ಧಿಯನ್ನು ಪಡೆದುಕೊಂಡಿದೆ. ತಿರುಪತಿಯಿಂದ ತಲೆಶೂಲೆಗೆ ಮದ್ದನ್ನು ತರಲು ಬಂದ ದೇವರು ಇಲ್ಲಿಯೇ ಬಿಳಿಗಿರಿರಂಗನಾಥಸ್ವಾಮಿಯಾಗಿ ಉಳಿದನೆಂಬ ಪ್ರತೀತಿ ಇದೆ. ಇದರೊಂದಿಗೆ ಪರಶು ರಾಮ ಮಾತೃಹತ್ಯೆ ದೋಷಕ್ಕಾಗಿ ಇಲ್ಲಿ ಹರಿಯುವ ಭಾರ್ಗವಿ ನದಿಯಲ್ಲಿ ಸ್ನಾನಮಾಡಿದ್ದರೂ ಎಂಬುದು ಮತ್ತೂಂದು ಕತೆಯಿಂದ ಸ್ಪಷ್ಟವಾಗುತ್ತದೆ. ಅಲ್ಲದೆ ಅನೇಕ ಬಗೆಯ ಜಾನಪದ ಹಾಡ್ಗವಿತೆಗಳು, ಕತೆಗಳು, ಇಡೀ ರಾತ್ರಿ ಕತೆಯನ್ನು ಮಾಡುವ ಅಪಾರ ಸಂಪತ್ತು ಈ ದೇವರಿಗಿದೆ. ಜಿಲ್ಲೆಯ ಮಲೆಮಹ ದೇಶ್ವರ, ರಾಚ ಪ್ಪಾಜಿ, ಸಿದ್ಧಪ್ಪಾಜಿಯಂತೆ ಇಲ್ಲಿನ ಬಿಳಿ ಗಿರಿರಂಗನು ಪುರಾಣ ಹಾಗೂ ಜಾನಪದ ಇಬ್ಬ ರಿಂದಲೂ ಸ್ಥಾನ ಗಿಟ್ಟಿಸಿಕೊಂಡಿರುವುದು ವಿಶೇಷ.

ಸೋಲಿಗರ ಆರಾಧ್ಯ ದೈವ: ಪ್ರತಿ ವರ್ಷ ಇಲ್ಲಿ ಸಂಕ್ರಾಂತಿ ಹಬ್ಬದ ಮಾರನೇ ದಿನ ಚಿಕ್ಕಜಾತ್ರೆ ನಡೆದರೆ ಏಪ್ರಿಲ್‌ ಅಥವಾ ಮೇ ತಿಂಗಳಲ್ಲಿ ದೊಡ್ಡ ಜಾತ್ರೆ ನಡೆಯುತ್ತದೆ. ಇಲ್ಲಿನ ಸೋಲಿಗರ ಆರಾಧ್ಯ ದೈವವಾಗಿರುವ ಬಿಳಿಗಿರಿರಂಗನಾಥಸ್ವಾಮಿಯ ನಿಶ್ಚಿತಾರ್ಥ ಚಿಕ್ಕಜಾತ್ರೆ ಎಂತಲೂ, ಮದುವೆ, ದೊಡ್ಡ ಜಾತ್ರೆ ಎಂತಲೂ ಇಲ್ಲಿನ ಸೋಲಿಗರು ತಮ್ಮ ಕುಲದ ಕುಸುಮಾಲೆಯನ್ನು ವರಿಸಿದ ರಂಗಪ್ಪನನ್ನು ರಂಗಭಾವ ಎಂದು ಕರೆಯುವ ವಾಡಿಕೆ ಇದೆ. 2017ರಲ್ಲಿ ನಡೆದಿದ್ದ ಚಿಕ್ಕಜಾತ್ರೆ: 2017ರಲ್ಲಿ ಚಿಕ್ಕಜಾತ್ರೆ ನಡೆದಿತ್ತು. ನಂತರ ದೇಗುಲವನ್ನು ಜೀರ್ಣೋದ್ಧಾರ ಮಾಡುವ ಉದ್ದೇಶದಿಂದ ಬಂದ್‌ ಮಾಡಲಾಗಿತ್ತು. 2021 ಏಪ್ರಿಲ್‌ನಲ್ಲಿ ದೇಗುಲ ಆರಂಭಗೊಂಡಿತಾದರೂ ನಂತರ ಕೋವಿಡ್‌ ಹಾಗೂ ದೇಗುಲದ ಮುಂಭಾಗದ ನೆಲಹಾಸು ಕಾಮಗಾರಿ ಪೂರ್ಣ ಗೊಂಡಿರದ ಕಾರಣ ಜಾತ್ರೆ ನಡೆದಿರಲಿಲ್ಲ. ಈಗ ನೆಲಹಾಸು ಕಾಮಗಾರಿ ಪೂರ್ಣಗೊಂಡಿದೆ.

ಶೌಚಾಲಯ ಕಾಮಗಾರಿ ಪೂರ್ಣಗೊಳಿಸಿ: ದೇಗುಲಕ್ಕೆ ಅನತಿ ದೂರದಲ್ಲೇ ವಾಹನ ನಿಲ್ದಾಣವಿದ್ದು ಇಲ್ಲಿ ಅನೇಕ ತಿಂಗಳುಗಳಿಂದ ಶೌಚಾಲಯ ಕಾಮ ಗಾರಿ ನಡೆಯುತ್ತಿದ್ದು ಇದು ಪೂರ್ಣ ಗೊಂಡಿಲ್ಲ. ಜಾತ್ರೆಗಾದರೂ ಇದನ್ನು ಪೂರ್ಣಗೊಳಿಸಬೇಕು. ಅಲ್ಲದೆ ಇಲ್ಲಿರುವ ನೀರಿನ ಓವರ್‌ಹೆಡ್‌ ಟ್ಯಾಂಕ್‌ಗೆ ನೀರು ತುಂಬಿಸಬೇಕು. ಈ ಬಾರಿ ಬೆಟ್ಟಕ್ಕೆ ಹೆಚ್ಚಿನ ಜನರು ಬರುವ ನಿರೀಕ್ಷೆ ಇದೆ ಎಂದು ದೇಗುಲದ ಆಡಳಿತ ವರ್ಗದ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಕೆಎಸ್‌ಆರ್‌ ಟಿಸಿ ವತಿಯಿಂದ 100 ಬಸ್‌ಗಳನ್ನು ಓಡಿಸಲಾಗುವುದು. ಬೆಟ್ಟಕ್ಕೆ ಬರುವ ಭಕ್ತಾದಿಗಳಿಗೆ ಯಾವುದೇ ತೊಂದರೆಯಾಗ ದಂತೆ ಸೂಕ್ತ ಕ್ರಮ ವಹಿಸಲು ಸಂಬಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. – ಎನ್‌. ಮಹೇಶ್‌, ಶಾಸಕ

-ಫೈರೋಜ್‌ ಖಾನ್‌

ಟಾಪ್ ನ್ಯೂಸ್

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Re-Release: ಈ ವರ್ಷ ರೀ ರಿಲೀಸ್‌ ಆದ ಬಾಲಿವುಡ್‌ ಸಿನಿಮಾಗಳ ಬಾಕ್ಸ್‌ ಆಫೀಸ್‌ ಗಳಿಕೆ ಎಷ್ಟು?

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

Uttara Pradesh By poll: 30 ವರ್ಷದ ಬಳಿಕ ಮುಸ್ಲಿಂ ಬಾಹುಳ್ಯದ ಕ್ಷೇತ್ರದಲ್ಲಿ ಅರಳಿದ ಕಮಲ!

IPL Mega Auction: 2008-2024.. Here is the list of the most expensive players in each auction

IPL Mega Auction: 2008-2024.. ಪ್ರತಿ ಹರಾಜಿನ ದುಬಾರಿ ಆಟಗಾರರ ಪಟ್ಟಿ ಇಲ್ಲಿದೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Road Mishap: ಬೈಕ್ ಗೆ ಕಾರು ಡಿಕ್ಕಿ: ಓರ್ವ ಸಾವು, ಇಬ್ಬರಿಗೆ ಗಾಯ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾCourt: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Court: ಪ್ರಸಾದಕ್ಕೆ ವಿಷ; 17 ಭಕ್ತರ ಸಾವಿನ ಪ್ರಕರಣ: ಇಮ್ಮಡಿ ಮಹದೇವಸ್ವಾಮಿ ಅರ್ಜಿ ವಜಾ

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Road Mishap: ಶಾಲಾ ವಾಹನ ಹರಿದು 4 ವರ್ಷದ ಬಾಲಕಿ ಸಾ*ವು

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ನೇಮಕ ಸಂದರ್ಶನ

Minister K.J. George: ಒಂದೇ ದಿನದಲ್ಲಿ 2500 ಲೈನ್‌ಮ್ಯಾನ್‌ ನೇಮಕ ಸಂದರ್ಶನ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

55th IFFI Goa: ಪ್ರಸಾರ ಭಾರತಿಯಿಂದಲೂ ಒಟಿಟಿ ವೇವ್ಸ್‌ – ಮನರಂಜನೆಗೆ ಹೊಸ ಆಯಾಮ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

ಮುಂಡಗೋಡ: ಮಂಗನಬಾವು ಉಲ್ಬ‌ಣ-ಮೂರು ದಿನ ಶಾಲೆಗೆ ರಜೆ

Maharashtra Polls: Who will be the next Chief Minister? Fadnavis gives a hint

Maharashtra Polls: ಯಾರಾಗಲಿದ್ದಾರೆ ಮಹಾ ಮುಖ್ಯಮಂತ್ರಿ? ಸುಳಿವು ನೀಡಿದ ಫಡ್ನವೀಸ್‌

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Dhanashree Verma: ಯಶ್‌ ಸಿನಿಮಾಕ್ಕೆ ಕ್ರಿಕೆಟಿಗ ಚಹಾಲ್ ಪತ್ನಿ ಹೀರೋಯಿನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.