ಸುನಿಲ್ ಕುಮಾರ್ ವಿರುದ್ಧ ಅವಹೇಳನಕಾರಿ ಬರಹ; ಆರೋಪಿಗಳಿಗೆ ದಂಡ ವಿಧಿಸಿದ ನ್ಯಾಯಾಲಯ
Team Udayavani, Jan 9, 2023, 3:22 PM IST
ಬೆಂಗಳೂರು: ಇಂಧನ, ಕನ್ನಡ ಮತ್ತು ಸಂಸ್ಕ್ರತಿ ಸಚಿವ ವಿ. ಸುನಿಲ್ ಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಬರಹ ಪ್ರಕಟಿಸಿದ್ದ ಕಾರ್ಕಳದ ಇಬ್ಬರು ಸ್ಥಳೀಯ ಮುಖಂಡರಿಗೆ ಬೆಂಗಳೂರಿನ 12ನೇ ಸಿಟಿ ಸಿವಿಲ್ ನ್ಯಾಯಾಲಯ ದಂಡ ವಿಧಿಸುವ ಜತೆಗೆ ಬಹಳ ಬೇಷರತ್ ಕ್ಷಮೆಯಾಚನೆಗೆ ಸೂಚಿಸಿದೆ.
ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ಕಾರ್ಕಳದ ಯೋಗೇಶ್ ನಯನಾ ಇನ್ನಾ ಹಾಗೂ ರಾಧಾಕೃಷ್ಣ ನಾಯಕ್ ಎಂಬುವರು ಸುನಿಲ್ ಕುಮಾರ್ ವಿರುದ್ಧ ಫೇಸ್ ಬುಕ್ ಹಾಗೂ ಇತರೆ ಜಾಲತಾಣದಲ್ಲಿ ಅವಹೇಳನಕಾರಿ, ಸುಳ್ಳು ಹಾಗೂ ದುರುದ್ದೇಶಪೂರಿತ ಬರಹವನ್ನು ಪ್ರಕಟಿಸಿದ್ದರು.
ಈ ಹಿನ್ನೆಲೆ ಆರೋಪಿಗಳ ವಿರುದ್ಧ ನ್ಯಾಯಾಲಯದ ಮೊರೆ ಹೋದ ಸುನಿಲ್ ಕುಮಾರ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಆರೋಪಿಗಳು ಬೇಷರತ್ ಕ್ಷಮೆ ಯಾಚಿಸುವ ಜತೆಗೆ ತಲಾ 25 ಸಾವಿರ ರೂ. ದಂಡ ಸಲ್ಲಿಸಬೇಕು. ಜತೆಗೆ ಆಧಾರ ರಹಿತ, ಅಪ್ರಮಾಣಿಕೃತ, ದುರುದ್ದೇಶಪೂರಿತ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸದಂತೆ ಪ್ರತಿಬಂಧ ವಿಧಿಸಿದೆ.
ಪ್ರಕರಣಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿರುವ ಸಚಿವ ಸುನಿಲ್ ಕುಮಾರ್, ” ನನ್ನ ವಿರುದ್ಧ ಜಾಲಾತಾಣದಲ್ಲಿ ಕೆಲವರು ವ್ಯವಸ್ಥಿತ ಅಪಪ್ರಚಾರ ನಡೆಸುತ್ತಿದ್ದರು. ಈ ಹಿನ್ನೆಲೆ ನ್ಯಾಯಾಲಯದ ಮೊರೆ ಹೋಗಿದ್ದೆ. ಈಗ ನನ್ನ ಪರ ತೀರ್ಪು ಬಂದಿದೆ. ಮಾನಹಾನಿಕಾರಿ ಬರಹಗಳನ್ನು ಜಾಲತಾಣದಲ್ಲಿ ಪ್ರಕಟಿಸುವವರಿಗೆ ಇದೊಂದು ಪಾಠ ಎಂದು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.