ಬೀದಿ ಬದಿ ಅಂಗಡಿಗಳಲ್ಲಿ ಟೇಸ್ಟಿಂಗ್ ಪೌಡರ್ ಬಳಕೆ :ಪುರಸಭೆ ಅಧಿಕಾರಿಗಳಿಂದ ದಿಢೀರ್ ದಾಳಿ
Team Udayavani, Jan 10, 2023, 8:00 AM IST
ಕಾರ್ಕಳ: ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ಬೀದಿ ಬದಿ ವ್ಯಾಪಾರ ಅಂಗಡಿಗಳಲ್ಲಿ ತಿನಿಸುಗಳಿಗೆ ಟೇಸ್ಟಿಂಗ್ ಪೌಡರ್ ಬಳಸುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬಂದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ ನೇತೃತ್ವದಲ್ಲಿ ಪುರಸಭೆ ಅಧಿಕಾರಿಗಳು ಸೋಮವಾರ ಸಂಜೆ ದಿಢೀರಣೆ ಕಾರ್ಯಾಚರಣೆ ನಡೆಸಿ, ಪೌಡರ್ ವಶಕ್ಕೆ ಪಡೆದು ವ್ಯಾಪಾರಿಗಳಿಗೆ ಎಚ್ಚರಿಕೆ ನೀಡಿದರು.
ಕಾರ್ಕಳ ಪುರಸಭೆ ವ್ಯಾಪ್ತಿಯ ಖಾಸಗಿ ಬಸ್ ನಿಲ್ದಾಣದ ಸಮೀಪ, ಅನಂತಶಯನದ ಬಳಿ, ಆನೆಕೆರೆ, ಗೊಮ್ಮಟಬೆಟ್ಟ ಮೊದಲಾದ ಕಡೆಗಳಲ್ಲಿ ಬೀದಿ ಬದಿ ಸಣ್ಣ ವ್ಯಾಪಾರಿಗಳು ಗೂಡಂಗಡಿಗಳನ್ನು ತೆರೆದು ವ್ಯಾಪಾರ ನಡೆಸುತ್ತಿದ್ದಾರೆ. ಸಂಜೆ ವೇಳೆ ಶಾಲಾ ಮಕ್ಕಳು ಸಹಿತ ಗುಂಪಾಗಿ ಇಂತಹ ಅಂಗಡಿಗಳ ಮುಂದೆ ಆಹಾರಕ್ಕೆ ಮುಗಿ ಬೀಳುತ್ತಿರುತ್ತಾರೆ. ಇಲ್ಲಿ ಸಿದ್ಧಪಡಿಸುವ ಗೋಬಿ ಮಂಚೂರಿ, ನೂಡಲ್ಸ್ ಮೊದಲಾದ ತಿನಿಸುಗಳನ್ನು ಸಿದ್ಧಪಡಿಸುವಾಗ ಟೇಸ್ಟಿಂಗ್ ಪೌಡರ್ ಬಳಸುತ್ತಿದ್ದು, ಇದು ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆ.
ಪರವಾನಿಗೆ ರದ್ದು-ಎಚ್ಚರಿಕೆ
ಈ ಹಿನ್ನೆಲೆಯಲ್ಲಿ ದಾಳಿ ನಡೆಸಿದ ವೇಳೆ ಆಹಾರಗಳಿಗೆ ರುಚಿಕರ (ಅಜಿನ ಮೊಟೋ) ಪೌಡರ್ ಬಳಸುತ್ತಿರುವುದು ಕಂಡು ಬಂದಿದೆ. ಅಂಗಡಿಯವರಿಗೆ ಎಚ್ಚರಿಕೆ ನೀಡಿ ಪೌಡರ್‌ಗಳನ್ನು ವಶಕ್ಕೆ ಪಡೆಯಲಾಯಿತು. ಬೀದಿ ಬದಿ ವ್ಯಾಪಾರಿಗಳು ಸ್ಥಳದಲ್ಲಿ ಸ್ವತ್ಛತೆ ಕಾಪಾಡಿಕೊಳ್ಳದೆ ಇರುವುದು ಕಂಡುಬಂದಿದೆ. ತಿಂಡಿಗೆ ಬಳಸುವ ಎಣ್ಣೆ ಬದಲಾಯಿಸದೆ ಇರುವುದು. ಪರಿಸರದಲ್ಲಿ ಸ್ವತ್ಛತೆ ಕಾಪಾಡಿಕೊಳ್ಳದೆ ಇರುವುದಕ್ಕೆ ಅಧಿಕಾರಿಗಳು ವ್ಯಾಪಾರಸ್ಥ ರನ್ನು ತರಾಟೆಗೆ ತೆಗೆದುಕೊಂಡರು. ಮುಂದೆಯೂ ಇದೇ ರೀತಿ ಕಂಡುಬಂದರೆ ವ್ಯಾಪಾರ ಪರವಾನಿಗೆ ರದ್ದುಪಡಿಸುವ ಎಚ್ಚರಿಕೆ ನೀಡಿದರು.
ಈ ಸಂದರ್ಭ ಆರೋಗ್ಯ ನಿರೀಕ್ಷಕಿ ಲೈಲಾ ಥೋಮಸ್, ಮ್ಯಾನೇಜರ್ ಸೂರ್ಯಕಾಂತ ಖಾರ್ವಿ, ನಾಗೇಶ್, ಶೈಲೇಶ್ ಮತ್ತಿತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.