ಕಾಮಗಾರಿಗಳಲ್ಲಿ ಹಸ್ತಕ್ಷೇಪ ಖಂಡಿಸಿ ಪ್ರತಿಭಟನೆ


Team Udayavani, Jan 10, 2023, 4:38 PM IST

TDY-21

ಅರಕಲಗೂಡು: ಪಪಂ ಅಧಿಕಾರಿ, ಸಿಬ್ಬಂದಿ ಪಟ್ಟಣದ ವಿವಿಧ ವಾರ್ಡ್‌ಗಳಲ್ಲಿ ಕೈಗೊಳ್ಳುವ ವಿವಿಧ ಯೋಜನೆ ಕಾಮಗಾರಿಗಳ ಕ್ರಿಯಾ ಯೋಜನೆಯನ್ನು ಸದಸ್ಯರ ಗಮನಕ್ಕೆ ತರದೆ ಸಭೆಗೆ ಮಂಡಿಸುತಿದ್ದು, ಇದಕ್ಕೆ ಸಭೆ ಅನುಮೋದನೆ ನೀಡಬಾರದು ಎಂದು ಮಾಜಿ ಉಪಾಧ್ಯಕ್ಷ ನಿಖಿಲ್‌ ಕುಮಾರ್‌ ಸಭೆಯಲ್ಲಿ ಆಗ್ರಹಿಸಿದರು.

ಸೋಮವಾರ ಪಪಂ ಸಭಾಂಗಣದಲ್ಲಿ ಅಧ್ಯಕ್ಷೆ ಶಾರದ ಪೃಥ್ವಿರಾಜ್‌ ಅಧ್ಯಕ್ಷತೆಯಲ್ಲಿ ನಡೆ ದ ವಿಶೇಷ ಸಭೆಯಲ್ಲಿ 2022-23ನೇ ಸಾಲಿನ ಎಸ್‌ಎಫ್‌ಸಿ ಮತ್ತು ಪಪಂ ನಿಧಿ ಶೇ.24.10 ಮ ತ್ತು ಶೇ.7.25ರ ಯೋಜನೆಯಡಿ 4. 82 ಲಕ್ಷ ಹಾಗೂ ಪಪಂ ನಿಧಿ ಯಡಿ ಅಂಗನವಾಡಿಗಳಿಗೆ ಅವಶ್ಯಕ ಸಾಮಗ್ರಿಗಳನ್ನ ಸರಬರಾಜು ಮಾಡಲು 5.88ಲಕ್ಷ ವೆಚ್ಚದ ಕ್ರಿಯಾ ಯೋಜನೆಯನ್ನ ತಯಾರಿಸಿ ಸಭೆ ಅನುಮೋದನೆಗೆ ಮಂಡಿಸಲಾಗಿದೆ. ಆದರೆ, ಈ ವಿಷಯದ ಬಗ್ಗೆ ಹಿಂದಿನ ಯಾವುದೇ ಸಭೆಗಳಲ್ಲಿ ವಿಷಯ ಪ್ರಸ್ತಾಪವಾಗಿಲ್ಲ. ಏಕಾಏಕಿ ಇಂದಿನ ಸಭೆಯಲ್ಲಿ ಇಡಲಾಗಿದೆ ಎಂದು ಅಧಿಕಾರಿಗಳನ್ನ ತರಾಟೆಗೆ ತೆಗೆದು ಕೊಂಡು, ನ್ಯಾಯಾ ಸಿಗುವ ತನಕ ಸಭೆ ನಡೆಯಲು ಬಿಡುವುದಿಲ್ಲ ಎಂದು ಏಕಾಂಗಿ ಪ್ರತಿಭಟನೆ ನಡೆಸಿದರು.

ಗುತ್ತಿಗೆದಾರರು ಪರವಾನಗಿ ಹೊಂದಿಲ್ಲ: ಪೌರಕಾರ್ಮಿಕರಿಗೆ ನೀಡುವ ಬೆಳಗ್ಗಿನ ಉಪಾಹಾರ ಸರಬ ರಾಜು ಕುರಿತು ಒಂದೇ ಕುಟುಂಬದ ಇಬ್ಬರು ವ್ಯಕ್ತಿಗಳು ಟೆಂಡರ್‌ ಸಲ್ಲಿಸಿದ್ದಾರೆ. ಇವರು ಅಧಿಕೃತ ಪರವಾನಗಿ ಹೊಂದಿಲ್ಲ. ಹೀಗಿದ್ದರೂ ಕೂಡ ಇವರ ಕೊಟೇಷನ್‌ನ ಅಂಗೀಕರಿಸಿ ಟೆಂಡರ್‌ ಅಂತಿಮಗೊಳಿಸಲು ಸಭೆ ಗಮನಕ್ಕೆ ತರಲಾಗಿದೆ. ಅಲ್ಲದೆ ಅಂಗನವಾಡಿ ಗಳಿಗೆ ಅಗತ್ಯ ವಸ್ತುಗಳು ಪೂರೈಕೆ ಸರಬರಾಜು ಕುರಿತು ಸ್ಥಳೀಯ ಪ್ಲೇವುಡ್‌, ಗ್ಲಾಸ್‌ ಅಂಗಡಿಯವರು ಕೊಟೇಷನ್‌ ಸಲ್ಲಿಸಿದ್ದಾರೆ.

ಟೆಂಡರ್‌ ಮರು ಕರೆಯಲಾಗುವುದು: ಇಲ್ಲಿಂದ ಅಂಗನವಾಡಿಗಳಿಗೆ ಅಗತ್ಯ ವಸ್ತುಗಳ ಸರಬರಾಜು ಸಾಧ್ಯವೇ ಎಂದು ಪ್ರಶ್ನಿಸಿದರಲ್ಲದೇ, ಈ ಬಗ್ಗೆ ಅನಧಿ ಕೃತ ಏಜೆನ್ಸಿಗಳಿಗೆ ನೋಟಿಸ್‌ ನೀಡಬೇಕೆಂದು ಒತ್ತಾಯಿಸಿದಾಗ ಸರ್ವ ಸದಸ್ಯರು ಒಪ್ಪಿಗೆ ಸೂಚಿಸಿದರು. ಈ ವಿಷಯಗಳ ಟೆಂಡರ್‌ಗಳನ್ನು ಮರು ಕರೆಯಲಾಗುವುದು ಎಂದು ಮುಖ್ಯಾಧಿಕಾರಿ ಶಿವಕುಮಾರ್‌ ತಿಳಿಸಿದರು.

ತೆರಿಗೆ ಹಣ ಲೂಟಿ: ಪಪಂ ಅಧಿಕಾರಿಗಳು ಕಾಮಗಾರಿಗಳ ಹೆಸರಿನಲ್ಲಿ ಅವೈಜ್ಞಾನಿಕ ಹಾಗೂ ಅನಾವಶ್ಯಕವಾಗಿ ಕ್ರಿಯಾ ಯೋಜನೆಯನ್ನ ತಯಾರಿಸಿ ಗುತ್ತಿಗೆದಾರರಿಗೆ ಹಣ ಮಾಡಿಕೊಡುವ ಉದ್ದೇಶವನ್ನ ಹೊಂದುವ ಮೂಲಕ ಜನರ ತೆರಿಗೆ ಹಣ ಲೂಟಿ ಮಾಡುತ್ತಿದ್ದಾರೆ ಎಂದು ಸದಸ್ಯೆ ಲಕ್ಷ್ಮೀ ಸಭೆಯಲ್ಲಿ ಆಕ್ರೋಶ ವ್ಯಕ್ತಪಡಿಸಿದರು.

ಶೇ.7.25 ರ ಯೋಜನೆಯಡಿ ಅಂಗನ ವಾಡಿಗಳಿಗೆ ಅವ ಶ್ಯಕತೆ ಇರುವ ಸಾಮಗ್ರಿ ಸರಬರಾಜು ಮಾಡಲು 5.88 ಲಕ್ಷ ವೆಚ್ಚವನ್ನ ಕಾಯ್ದಿರಿಸಲಾಗಿದೆ. ವಾರ್ಡಿನ ಸದಸ್ಯರ ಗಮನಕ್ಕೆ ತರದೆ ಅಂಗನವಾಡಿಗಳ ಹೆಸರಿನಲ್ಲಿ ಕ್ರಿಯಾ ಯೋಜನೆ ಸಿದ್ಧಪಡಿಸಿ ಟೆಂಡರ್‌ ಅನುಮೋದನೆಗೆ ತಂದಿರುವುದು ಎಷ್ಟರ ಮಟ್ಟಿಗೆ ಸರಿ? ಅಂಗನವಾಡಿಗಳಿಗೆ ಬೇಕಾಗಿರುವ ಅವಶ್ಯಕ ವಸ್ತುಗಳನ್ನ ನೀಡುವಂತೆ ಕ್ರಮಕೈಗೊಳ್ಳಿ. ಬೀದಿ ದೀಪಗಳ ನಿರ್ವಹಣೆ ಸರಿ ಇಲ್ಲ ಎಂದು ಅಧಿಕಾರಿಗಳಿಗೆ ಎಚ್ಚರಿಸಿದರು.

ಸಭೆಯಲ್ಲಿ ಉಪಾಧ್ಯಕ್ಷೆ ರಶ್ಮಿ ಮಂಜುನಾಥ್‌, ಸ್ಥಾಯಿ ಸಮಿತಿ ಅಧ್ಯಕ್ಷ ಕೃಷ್ಣಯ್ಯ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ನವೆಂಬರ್‌ ಬಳಿಕ ಕಾಂಗ್ರೆಸ್‌ನಲ್ಲಿ ಜ್ವಾಲಾಮುಖಿ ಸ್ಫೋ*ಟ: ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

R. Ashok: ಮೈಸೂರು ಕೇಸ್‌ನಲ್ಲಿ ಪೊಲೀಸರೇ ಅಪರಾಧಿಗಳಾಗ್ತಾರೆ; ಆರ್‌.ಅಶೋಕ್‌

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

ಇಂದು ಎತ್ತಿನಹೊಳೆ ವೈಮಾನಿಕ ಪರಿವೀಕ್ಷಣೆ ನಡೆಸುವ ಡಿಸಿಎಂ

de

Arsikere: ಮದುವೆಗೆ ಪ್ರಿಯತಮೆ ನಿರಾಕರಣೆ; ಯುವಕ ಸಾವು

HD-Revanna

ಕಾಂಗ್ರೆಸ್‌ಗೆ 136 ಸ್ಥಾನವಿದ್ದರೂ ಜೆಡಿಎಸ್‌ ಶಾಸಕರ ಸೆಳೆಯೋ ದುಸ್ಥಿತಿ: ಎಚ್‌.ಡಿ.ರೇವಣ್ಣ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.