25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್ ಆರಂಭ; ಚಿಂತನೆ
ನೇಕಾರ ಸಮ್ಮಾನ್ ಯೋಜನೆಯ ಸಹಾಯಧನ ವರ್ಗಾವಣೆಗೆ ಮುಖ್ಯಮಂತ್ರಿ ಚಾಲನೆ
Team Udayavani, Jan 12, 2023, 12:24 AM IST
ಬೆಂಗಳೂರು: ಮುಂದಿನ ದಿನಗಳಲ್ಲಿ ರಾಜ್ಯದ 25 ತಾಲೂಕುಗಳಲ್ಲಿ ಮಿನಿ ಜವಳಿ ಪಾರ್ಕ್‌ಗಳು ತಲೆಯೆತ್ತಲಿವೆ. ಹತ್ತಿ ಸಂಸ್ಕರಣೆ, ವಸ್ತ್ರ ತಯಾರಿ, ಸಿದ್ಧ ಉಡುಪು ತಯಾರಿಕೆಯಿಂದ ಹಿಡಿದು ಎಲ್ಲ ಸೌಲಭ್ಯಗಳು ಈ ಪಾರ್ಕ್‌ಗಳ ಸೂರಿನಡಿ ಬರಲಿವೆ.
ಈ ಸಂಬಂಧ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೈಮಗ್ಗ ಮತ್ತು ಜವಳಿ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಬುಧವಾರ ವಿದ್ಯುತ್ ಮಗ್ಗ ನೇಕಾರರು ಮತ್ತು ಕಾರ್ಮಿಕರಿಗೆ ನೇರ ನಗದು ವರ್ಗಾವಣೆ (ಡಿಬಿಟಿ) ಮೂಲಕ ನೇಕಾರ ಸಮ್ಮಾನ್ ಯೋಜನೆಯ ಸಹಾಯಧನ ವರ್ಗಾವಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ನೇಕಾರರು ಹೆಚ್ಚಿನ ಸಂಖ್ಯೆಯಲ್ಲಿರುವ 25 ತಾಲೂಕು ಗಳಲ್ಲಿ ಮಿನಿ ಜವಳಿ ಪಾರ್ಕ್ ಸ್ಥಾಪಿಸಬೇಕು. ಜವಳಿಗೆ ಸಂಬಂಧಿಸಿದ ಎಲ್ಲ ಹಂತಗಳ ಸೌಲಭ್ಯಗಳು ಈ ಮಿನಿ ಜವಳಿ ಪಾರ್ಕ್ ನಲ್ಲಿ ಇರಬೇಕು ಎಂದು ನಿರ್ದೇಶಿಸಿದರು.
ನೇಕಾರರು ತಮ್ಮ ಉತ್ಪನ್ನಗಳ ಗುಣಮಟ್ಟ ವೃದ್ಧಿಸುವ ಮೂಲಕ ರಫ್ತು ಮಾಡಲು ಸಹ ಮುಂದಾ ಗ ಬೇಕು ಎಂದು ಸಲಹೆ ನೀಡಿದ ಮುಖ್ಯಮಂತ್ರಿಗಳು, ಇದಕ್ಕೆ ಪೂರಕವಾಗಿ ಡಿಜಿಟಲ್ ವೇದಿಕೆ ಮೂಲಕ ಮಾರುಕಟ್ಟೆ ವಿಸ್ತರಿಸಬೇಕು. ಈ ನಿಟ್ಟಿನಲ್ಲಿ ಕೈಮಗ್ಗ ಮತ್ತು ಜವಳಿ ಇಲಾಖೆ ಸಹಕಾರ ನೀಡಲಿದ್ದು, ಅಮೆಜಾನ್, ಫ್ಲಿಪ್‌ಕಾರ್ಟ್ ಮತ್ತಿತರ ಆನ್‌ಲೈನ್ ವ್ಯಾಪಾರಿ ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ನೇಕಾರರ ಮಕ್ಕಳು ಆರ್ಥಿಕ ಸಂಕಷ್ಟದ ಕಾರಣ ರೈತ ವಿದ್ಯಾನಿಧಿಯನ್ನು ನೇಕಾರರಿಗೆ ವಿಸ್ತರಿಸಲಾಗಿದೆ. ಇದಲ್ಲದೆ, ವೃತ್ತಿಪರ ನೇಕಾರ ಸಮುದಾಯಕ್ಕೆ ತಮ್ಮ ಘಟಕದ ವಿಸ್ತರಣೆಗೆ ನೀಡಲಾಗುತ್ತಿದ್ದ ಶೇ. 30ರ ಸಹಾಯಧನವನ್ನು ಶೇ. 50ಕ್ಕೆ ಹೆಚ್ಚಿಸಲಾಗಿದೆ. ನೇಕಾರರ ಕಾಲನಿಗಳಲ್ಲಿ ವಾಸಿಸುವವರಿಗೆ ರಹವಾಸಿ ಪತ್ರಗಳನ್ನು ನೀಡಲು ತೀರ್ಮಾನಿಸಲಾಗಿದೆ. ನೇಕಾರರಿಗೆ 2 ಲಕ್ಷ ರೂ.ವರೆಗೆ ಶೂನ್ಯ ಬಡ್ಡಿದರದಲ್ಲಿ ಸಾಲ ಒದಗಿಸಲಾಗುತ್ತಿದೆ.
ತಮಿಳುನಾಡು ಮಾದರಿಯಲ್ಲಿ ವಿದ್ಯುತ್ ಮಗ್ಗ ಹಾಗೂ ಮಗ್ಗ ಪೂರ್ವ ಘಟಕಗಳಿಗೆ 5 ಎಚ್‌ಪಿವರೆಗೆ ಉಚಿತ ವಿದ್ಯುತ್ ಹಾಗೂನಿಗದಿತ ಶುಲ್ಕದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಲಾಗುತ್ತಿದೆ. ನೇಕಾರರ ಸಂಕಷ್ಟಗಳಿಗೆ ಸರಕಾರ ಸದಾ ಸ್ಪಂದಿಸಿದೆ ಎಂದರು.
ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗ ನೇಕಾರರ ಸಮಸ್ಯೆಗಳಿಗೆ ಸ್ಪಂದಿಸಿದರು. ಕೋವಿಡ್ 19 ಸಂದರ್ಭದಲ್ಲಿ ನೇಕಾರ ಸಮ್ಮಾನ್ ಯೋಜನೆ, ನೇಕಾರರ ಸಾಲಮನ್ನಾ ಮೊದಲಾದ ಕ್ರಮಗಳ ಮೂಲಕ ನೆರವಿಗೆ ಧಾವಿಸಿದರು. ಪ್ರಸ್ತುತ ನಮ್ಮ ಸರಕಾರ ನೇಕಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳ ಶಾಸಕರು ಸಲ್ಲಿಸಿದ ಬೇಡಿಕೆಗಳನ್ನು ಈಡೇರಿಸುವ ಮೂಲಕ ಹೆಚ್ಚಿನ ಬೆಂಬಲ ನೀಡಲಾಗಿದೆ ಎಂದರು.
ಇದೇ ಸಂದರ್ಭದಲ್ಲಿ ಬೆಂಗಳೂರು ನಗರ, ಬೆಂಗ ಳೂರು ಗ್ರಾಮಾಂತರ, ತುಮಕೂರು, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯ ನೇಕಾರರೊಂದಿಗೆ ಮುಖ್ಯಮಂತ್ರಿ ಸಂವಾದ ನಡೆಸಿದರು. ಜವಳಿ ಹಾಗೂ ಸಕ್ಕರೆ ಶಂಕರ ಪಾಟೀಲ್ ಮುನೇನ ಕೊಪ್ಪ, ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮದ ಅಧ್ಯಕ್ಷ ಸಿದ್ದು ಸವದಿ, ಶಾಸಕರಾದ ಮಹಾದೇವಪ್ಪ ಶಿವಲಿಂಗಪ್ಪ ಯಾದವಾಡ, ಎಂ.ಡಿ. ಲಕ್ಷ್ಮೀನಾರಾಯಣ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಗುತ್ತಿಗನೂರು ವಿರೂ ಪಾಕ್ಷ ಗೌಡ, ಕಾವೇರಿ ಹ್ಯಾಂಡ್‌ಲೂಮ್ಸ್ ಅಧ್ಯಕ್ಷ ಬಿ.ಜೆ. ಗಣೇಶ್, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ್ ಪ್ರಸಾದ್, ಸಣ್ಣ ಕೈಗಾರಿಕಾ ಇಲಾಖೆ ಕಾರ್ಯದರ್ಶಿ ಪಂಕಜ್ ಕುಮಾರ್ ಪಾಂಡೆ, ಕೈಮಗ್ಗ ಮತ್ತು ಜವಳಿ ಇಲಾಖೆ ಆಯುಕ್ತ ಟಿ.ಎಚ್.ಎಂ. ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ವಿದ್ಯುತ್ ಮಗ್ಗಕ್ಕೂ ವಿಸ್ತರಣೆ
ನೇಕಾರ ಸಮ್ಮಾನ ಯೋಜನೆ ಅಡಿ ಈವರೆಗೆ ಕೈಮಗ್ಗ ನೇಕಾರರಿಗೆ ಮಾತ್ರ ನೆರವು ನೀಡಲಾಗುತ್ತಿತ್ತು. ಆದರೆ, ವಿದ್ಯುತ್ ಮಗ್ಗದ ನೇಕಾರರು ಹಾಗೂ ಕಾರ್ಮಿ ಕರೂ ಸಂಕಷ್ಟದಲ್ಲಿರುವುದನ್ನು ಅರಿತು ಸಂಕ್ರಾಂತಿ ಕೊಡುಗೆಯಾಗಿ ಮಗ್ಗಪೂರ್ವ ಚಟುವಟಿಕೆಗಳ ಕಾರ್ಮಿಕರು ಹಾಗೂ ವಿದ್ಯುತ್ ಮಗ್ಗ ನೇಕಾರರಿಗೂ ಸೌಲಭ್ಯ ವಿಸ್ತರಿಸಲಾಗಿದೆ ಎಂದು ಸಿಎಂ ಹೇಳಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.