ಚಂಡ್ತಿಮಾರ್: ದ್ವಿಚಕ್ರ ವಾಹನಕ್ಕೆ ಸಿಮೆಂಟ್ ಮಿಕ್ಸರ್ ಲಾರಿ ಢಿಕ್ಕಿ; ಇಬ್ಬರಿಗೆ ಗಾಯ
Team Udayavani, Jan 12, 2023, 6:07 PM IST
ಬಂಟ್ವಾಳ: ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯ ಜಕ್ರಿಬೆಟ್ಟು ಸಮೀಪದ ಚಂಡ್ತಿಮಾರಿನಲ್ಲಿ ದ್ವಿಚಕ್ರವಾಹನವೊಂದಕ್ಕೆ ಸಿಮೆಂಟ್ ಮಿಕ್ಸರ್ ಲಾರಿಯೊಂದು ಹಿಂಬದಿಯಿಂದ ಢಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಹಾಗೂ ಸಹಸವಾರೆ ಗಾಯಗೊಂಡ ಘಟನೆ ಗುರುವಾರ ನಡೆದಿದೆ.
ಘಟನೆಯಲ್ಲಿ ಸವಾರ ಸರಪಾಡಿ ಗ್ರಾಮದ ವಚ್ಚಾರು ನಿವಾಸಿ ಸಂತೋಷ್ ಅಂಚನ್ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರ ತಾಯಿ ಸಹಸವಾರೆ ರಾಜೀವಿ ಅವರಿಗೆ ಕೊಂಚ ಹೆಚ್ಚಿನ ಗಾಯಗಳಾಗಿವೆ ಎನ್ನಲಾಗಿದೆ. ಗಾಯಗೊಂಡವರು ತುಂಬೆ ಆಸ್ಪತ್ರೆಗೆ ದಾಖಲಿಸಲ್ಪಟ್ಟಿದ್ದಾರೆ. ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿ.ಸಿ.ರೋಡು-ಪುಂಜಾಲಕಟ್ಟೆ ಹೆದ್ದಾರಿಯು ಅಭಿವೃದ್ಧಿಗೊಂಡ ಬಳಿಕ ನಿರಂತರವಾಗಿ ಅಪಘಾತಗಳು ಉಂಟಾಗುತ್ತಿದ್ದು, ಜಕ್ರಿಬೆಟ್ಟು ಚಂಡ್ತಿಮಾರ್ ಪ್ರದೇಶವು ಡೆತ್ ಸ್ಪಾಟ್ ಆಗಿ ಮಾರ್ಪಟ್ಟಿದೆ. ಈಗಾಗಲೇ ಇಲ್ಲಿ ಪ್ರತ್ಯೇಕ ಅಪಘಾತದಲ್ಲಿ ಇಬ್ಬರು ಕಾರು ಚಾಲಕರು ಮೃತಪಟ್ಟಿದ್ದಾರೆ. ಸಣ್ಣ ಪುಟ್ಟು ಅಪಘಾತಗಳು ನಿರಂತರವಾಗಿ ನಡೆಯುತ್ತಲೇ ಇದ್ದು, ಗುರುವಾರವೂ ಮೂರ್‍ನಾಲ್ಕು ಸಣ್ಣಪುಟ್ಟ ಅಪಘಾತಗಳು ಸಂಭವಿಸಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: “ಅವರು ಪ್ರತೀ ದಿನ ಫೋನ್ ಮಾಡುತ್ತಿದ್ದರು… ಅಂದು ನನ್ನ ಕರೆಗೆ ಉತ್ತರಿಸಲಿಲ್ಲ’
Pushpa 2film : 21 ದಿನಗಳಲ್ಲಿ 1100 ಕೋಟಿ ರೂ. ಗಳಿಸಿದ “ಪುಷ್ಪ-2′ ಸಿನೆಮಾ
Uttar Pradesh: ಸಂಭಲ್‌ನ ಪ್ರಾಚೀನ ಬಾವಿಯ ಉತ್ಖನನ, ನವೀಕರಣಕ್ಕೆ ಚಾಲನೆ
Uttarakhand ಹೈಕೋರ್ಟ್ ಸಿ.ಜೆ. ಆಗಿ ನರೇಂದ್ರ ಪ್ರಮಾಣ ವಚನ ಸ್ವೀಕಾರ
PM Modi: ತಂತ್ರಜ್ಞಾನವನ್ನು ಅರಿತು ಅಳವಡಿಸಿಕೊಳ್ಳಬೇಕು: ಯವಜನಕ್ಕೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.