ಮಾರಾಟ ತೆರಿಗೆ ನೋಟಿಸ್ ವಿರುದ್ಧ ಅನುಷ್ಕಾ ಕೋರ್ಟ್‌ಗೆ ಮೊರೆ
Team Udayavani, Jan 12, 2023, 7:10 PM IST
ಮುಂಬೈ/ನವದೆಹಲಿ: ಮಹಾರಾಷ್ಟ್ರ ಸರ್ಕಾರದ ಮಾರಾಟ ತೆರಿಗೆ ಇಲಾಖೆಯ ಉಪ ಆಯುಕ್ತರು 2012-13 ಮತ್ತು 2013-14ನೇ ಸಾಲಿಗೆ ಸಂಬಂಧಿಸಿದಂತೆ ನೀಡಿದ ತೆರಿಗೆ ನೋಟಿಸ್ ವಿರುದ್ಧ ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಬಾಂಬೆ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದಾರೆ.
ಮಿತಿಗಿಂತ ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಪಾವತಿ ಮಾಡುವಂತೆ ರಾಜ್ಯ ಸರ್ಕಾರ ಸೂಚನೆ ನೀಡಿದೆ. ಅದನ್ನು ರದ್ದು ಮಾಡಬೇಕು ಎಂದು ಅವರು ಅರಿಕೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ನ್ಯಾ.ನಿತಿನ್ ಜಾಮ್‌ದಾರ್ ಮತ್ತು ನ್ಯಾ.ಅಭಯ ಅಹುಜಾ ಅವರನ್ನೊಳಗೊಂಡ ನ್ಯಾಯಪೀಠ ಮಾರಾಟ ತೆರಿಗೆ ಇಲಾಖೆಗೆ ನೋಟಿಸ್ ನೀಡಿದ್ದಾರೆ. ಸಿನಿಮಾ ಮತ್ತು ಪ್ರಶಸ್ತಿ ವಿತರಣೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ತನಗೆ ಕೇವಲ ನಟಿ ಎಂಬ ನೆಲೆಯಲ್ಲಿ ತೆರಿಗೆ ಪಾವತಿ ಮಾಡಲು ಸೂಚನೆ ನೀಡಬೇಕು ಎಂದು ವಾದಿಸಿದ್ದಾರೆ.
2012-13ನೇ ಸಾಲಿನಲ್ಲಿ 1.2 ಕೋಟಿ ರೂ., 2013-14ನೇ ಸಾಲಿನಲ್ಲಿ 1.6 ಕೋಟಿ ರೂ. ತೆರಿಗೆ ಪಾವತಿ ಮಾಡಲು ನೋಟಿಸ್ ನೀಡಲಾಗಿತ್ತು. ಫೆ.6ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
IFFI 2024: ತಾಲಿಯಾ..ತಾಲಿಯಾ…ಜೋರ್ ದಾರ್ ತಾಲಿಯಾ..!
A.R.Rahman Divorce: ಎ.ಆರ್.ರೆಹಮಾನ್ ವಿಚ್ಚೇದನಕ್ಕೆ ಆಕೆಯೇ ಕಾರಣ?; ವಕೀಲೆ ಹೇಳಿದ್ದೇನು?
55th IFFI Goa: 55ನೇ ಭಾರತೀಯ ಅಂತಾರಾಷ್ಟ್ರೀಯ ಚಿತ್ರೋತ್ಸವಕ್ಕೆ ವಿಧ್ಯುಕ್ತ ಚಾಲನೆ
Maharashtra Polls: ಪ್ರಾಣ ಬೆದರಿಕೆ ನಡುವೆ ಮತ ಹಾಕಿ ಫೋಟೋ ತೆಗೆಸಿದ ಸಲ್ಮಾನ್!
MUST WATCH
ಹೊಸ ಸೇರ್ಪಡೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Naxal ಎನ್‌ಕೌಂಟರ್ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?
Hebri: ಎನ್‌ಕೌಂಟರ್ ತನಿಖೆ ನಡೆಸುವ ಹೆಬ್ರಿ ಪೊಲೀಸ್ ಠಾಣೆ ಇಲ್ಲಗಳ ಆಗರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.