![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Jan 13, 2023, 6:30 AM IST
ಬೆಂಗಳೂರು: ಕೆಲವು ದಿನಗಳಿಂದ “ತೋಳ ಬಂತು ತೋಳ’ ಕತೆಯಂತೆ ಆಗಿರುವ ಸಚಿವ ಸಂಪುಟ ವಿಸ್ತರಣೆಗೆ ಮತ್ತೆ ಜೀವ ಬಂದಿದ್ದು, ಸಂಕ್ರಾಂತಿ ಹಬ್ಬದ ಬಳಿಕ ಮುಹೂರ್ತ ನಿಗದಿಯಾಗಲಿದೆ.
ಕೆಲವು ಹೊಸ ಮುಖಗಳನ್ನು ಚುನಾವಣ ದೃಷ್ಟಿಯಿಂದ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಸಾಧ್ಯತೆ ಬಗ್ಗೆ ಬಿಜೆಪಿಯಲ್ಲಿ ಚರ್ಚೆಗಳು ಪ್ರಾರಂಭವಾಗಿವೆ. ಜತೆಗೆ ಪಕ್ಷದ ಕೆಲವು ಆಯಕಟ್ಟಿನ ಸ್ಥಾನಗಳಲ್ಲೂ ಬದಲಾವಣೆ ನಿರೀಕ್ಷಿಸಲಾಗುತ್ತಿದೆ. ಸಂಪುಟದಲ್ಲಿ ಖಾಲಿ ಇರುವ ಆರು ಸ್ಥಾನಗಳನ್ನು ಭರ್ತಿ ಮಾಡಲು ಒಪ್ಪಿಗೆ ದೊರೆತಿದ್ದು, ಅಚ್ಚರಿಯ ಮುಖಗಳು ಸಂಪುಟ ಪ್ರವೇಶ ಮಾಡಲಿವೆ ಎನ್ನಲಾಗಿದೆ.
ಈ ಹಂತದಲ್ಲಿ ಸಂಪುಟಕ್ಕೆ ಸೇರ್ಪಡೆಯಾಗುವುದಕ್ಕೆ ಬಹುತೇಕ ಶಾಸಕರು ಆಸಕ್ತಿ ಕಳೆದುಕೊಂಡಿದ್ದಾರೆ. ಆದರೆ ಚುನಾವಣೆಯ ದೃಷ್ಟಿಯಿಂದ ಕೆಲವು ಸಮುದಾಯಗಳನ್ನು ಓಲೈಸುವ ಅನಿವಾರ್ಯ ಬಿಜೆಪಿಗೆ ಇದೆ. ಹೀಗಾಗಿ ಕೆಲವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಂಡು ಜಾತಿ ಹಾಗೂ ಪ್ರದೇಶವಾರು ಅಸಮಾಧಾನ ಶಮನಕ್ಕೆ ಬಿಜೆಪಿ ವರಿಷ್ಠರು ಚಿಂತನೆ ನಡೆಸಿದ್ದಾರೆ.
ಮೂಲಗಳ ಪ್ರಕಾರ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹಾಗೂ ಕೆ.ಎಸ್. ಈಶ್ವರಪ್ಪ ಅವರನ್ನು ಸೇರಿಸಿಕೊಳ್ಳುವ ಸಾಧ್ಯತೆ ಹೆಚ್ಚಿದೆ. ಜತೆಗೆ ನಾಲ್ಕು ಹೊಸ ಮುಖಗಳಿಗೆ ಅವಕಾಶ ನೀಡಲು ನಿರ್ಧರಿಸಲಾಗಿದೆ. ವಿಶೇಷವಾಗಿ ಪಂಚಮಸಾಲಿ ಸಮುದಾಯದಲ್ಲಿ ಮೂಡಿರುವ ಬೇಸರ ಶಮನಕ್ಕೆ ಬಿಜೆಪಿ ಚಿಂತನೆ ನಡೆಸಿದ್ದು, ಆ ಸಮುದಾಯಕ್ಕೆ ಸೇರಿದ ಇಬ್ಬರಿಗೆ ಸಂಪುಟದಲ್ಲಿ ಅವಕಾಶ ಕಲ್ಪಿಸುವ ಬಗ್ಗೆ ಚಿಂತನೆ ನಡೆದಿದೆ.
ಪಕ್ಷದಲ್ಲೂ ಬದಲಾವಣೆ?:
ಪಕ್ಷದ ಆಯಕಟ್ಟಿನ ಸ್ಥಾನದಲ್ಲೂ ಮಹತ್ತರ ಬದಲಾವಣೆ ಸಾಧ್ಯತೆ ಇದೆ. ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅಥವಾ ಇಂಧನ ಸಚಿವ ಸುನಿಲ್ ಕುಮಾರ್ ಅವರನ್ನು ಸಂಘಟನಾತ್ಮಕ ಜವಾಬ್ದಾರಿಗೆ ಬಳಸಿಕೊಳ್ಳುವ ಬಗ್ಗೆ ಪಕ್ಷದ ಆಂತರಿಕ ವಲಯದಲ್ಲಿ ಚರ್ಚೆಗಳು ನಡೆಯುತ್ತಿದ್ದು, ಜ. 17ರ ಬಳಿಕ ಈ ಬಗ್ಗೆ ಸ್ಪಷ್ಟ ಚಿತ್ರಣ ಸಿಗಬಹುದು ಎನ್ನಲಾಗುತ್ತಿದೆ.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.