ಸ್ಯಾಂಟ್ರೋ ರವಿ ಬಂಧನ; ಹರಕೆ ತೀರಿಸಿದ ಎಡಿಜಿಪಿ ಅಲೋಕ್ ಕುಮಾರ್
ಹರಕೆ ಹೊತ್ತುಕೊಂಡ 26 ಗಂಟೆಗಳಲ್ಲೇ ಕುಖ್ಯಾತನ ಬಂಧನ...
Team Udayavani, Jan 14, 2023, 4:52 PM IST
ಶ್ರೀರಂಗಪಟ್ಟಣ : ಸ್ಯಾಂಟ್ರೋ ರವಿ ಬಂಧನದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಅವರು ಶುಕ್ರವಾರ ಶ್ರೀರಂಗಪಟ್ಟಣದ ಗಂಜಾಂ ಗ್ರಾಮದಲ್ಲಿರುವ ಶಕ್ತಿ ದೇವತೆ ನಿಮಿಷಾಂಭ ದೇವಸ್ಥಾನದಲ್ಲಿ ಹರಕೆ ತೀರಿಸಿದ್ದಾರೆ.
ಕಳೆದ 4 ದಿನಗಳ ಹಿಂದೆ ಇದೇ ದೇವಸ್ಥಾನಕ್ಕೆ ಆಗಮಿಸಿ ಹರಕೆ ಹೊತ್ತುಕೊಂಡಿದ್ದ ಅಲೋಕ್ ಕುಮಾರ್ ಅವರು ನಿಮಿಷಾಂಭ ದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಸ್ಯಾಂಟ್ರೋ ರವಿ ಬಂಧನವಾದರೆ ಮತ್ತೆ ದೇಗುಲಕ್ಕೆ ಆಗಮಿಸುವುದಾಗಿ ಹರಕೆ ಹೊತ್ತಿದ್ದರು. ಹರಕೆ ಹೊತ್ತುಕೊಂಡ 26 ಗಂಟೆಗಳಲ್ಲೆ ಸ್ಯಾಂಟ್ರೋ ರವಿಯನ್ನು ಗುಜರಾತ್ ನಲ್ಲಿ ಬಂಧಿಸಲಾಗಿತ್ತು.
ದೇವಸ್ಥಾನಕ್ಕೆ ಬಂದು ಹರಕೆ ತೀರಿಸಿದ ಬಳಿಕ ಅಲೋಕ್ ಕುಮಾರ್ ಹೇಳಿಕೆ ನೀಡಿದ್ದು, ದೇವಿ ಮೇಲೆ ಹನ್ನೆರಡು ವರ್ಷಗಳಿಂದ ನನಗೆ ನಂಬಿಕೆ ಇದೆ. 2011 ರಲ್ಲಿ ಮೈಸೂರಿನಲ್ಲಿ ಡಬಲ್ ಕೇಸ್ ಆಗಿತ್ತು.ಆಗಲೂ ಬಂದು ನಾನು ದೇವಿಗೆ ಹರಕೆ ಹೊತ್ತಿದ್ದೆ.ಹಾಗೆ ಹರಕೆ ಹೊತ್ತು ಪೂಜೆ ಸಲ್ಲಿಸಿ ನಾವು ಮೈಸೂರಿಗೆ ಹೋಗುವುದರೊಳಗಾಗಿ ಅಂದರೆ 5 ಗಂಟೆಗಳಲ್ಲಿ ಆರೋಪಿಗಳನ್ನ ಬಂಧಿಸಲಾಗಿತ್ತು. ಈಗಲೂ ಹತ್ತನೇ ತಾರೀಕಿನಂದು ಬಂದು ನಾನು ಪೂಜೆ ಸಲ್ಲಿಸಿ ಸ್ಯಾಂಟ್ರೋ ರವಿ ಬಂಧನವಾಗಲಿ ಎಂದು ಹರಕೆ ಹೊತ್ತಿದ್ದೆ.ಈಗಲೂ ಹರಕೆ ಹೊತ್ತ 22 ಗಂಟೆಗಳಲ್ಲೇ ಆರೋಪಿ ಸಿಕ್ಕಿದ್ದಾನೆ. ಹಾಗಾಗಿ ದೇವಿಗೆ ಪೂಜೆ ಸಲ್ಲಿಸಿ ಹರಕೆ ತೀರಿಸಿದ್ದೇನೆ.ದೇವಿ ಮೇಲೆ ನನಗೂ ಬಹಳ ನಂಬಿಕೆ ಇದೆ ಎಂದರು.
ಆತನಿಂದಾಗಿ ಸರ್ಕಾರಕ್ಕೆ, ಪೊಲೀಸ್ ಇಲಾಖೆಗೆ ಕೆಟ್ಟ ಹೆಸರು ಬರುತ್ತಿತ್ತು. ಹಾಗಾಗಿ ಆತ ನಮಗೆ ಬೇಗ ಸಿಗಲಿ ಎಂದು ಹರಕೆ ಹೊತ್ತಿದ್ದೆ. ಆತ ಈಗ ನಮ್ಮ ಕಸ್ಟಡಿಯಲ್ಲಿದ್ದಾನೆ. ಆತನ ಹೇಳಿಕೆ ದಾಖಲಿಸಲಾಗುತ್ತಿದೆ. ಮೊದಲು ಆತನ ವಿರುದ್ದ ದಾಖಲಾಗಿರುವ ಕೇಸ್ ಬಗೆಗೆ ವಿಚಾರಣೆ ನಡೆಯುತ್ತೆ ನಂತರ ಆತ ತಲೆ ಮರೆಸಿಕೊಂಡು ಎಲ್ಲೆಲ್ಲಿ ಇದ್ದ ಆತನಿಗೆ ಯಾರೆಲ್ಲಾ ಸಹಾಯ ಮಾಡಿದರು ಎಂಬ ಬಗೆಗೆ ವಿಚಾರಣೆ ಮಾಡುತ್ತೇವೆ. ಹಾಗೊಂದು ವೇಳೆ ಯಾರಾದರೂ ಸಹಾಯ ಮಾಡಿದ್ದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
MUST WATCH
ಹೊಸ ಸೇರ್ಪಡೆ
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.