ಉಡುಪಿ: ಶ್ರೀಕೃಷ್ಣ ಮಠದಲ್ಲಿ ವೈಭವದ ಮಕರಸಂಕ್ರಾಂತಿ ಉತ್ಸವ
Team Udayavani, Jan 14, 2023, 11:11 PM IST
ಉಡುಪಿ : ಶ್ರೀಕೃಷ್ಣ ಮಠದಲ್ಲಿ ಪರ್ಯಾಯ ಕೃಷ್ಣಾಪುರ ಮಠದ ಶ್ರೀ ವಿದ್ಯಾಸಾಗರ ತೀರ್ಥ ಶ್ರೀಪಾದರ ನೇತೃತ್ವದಲ್ಲಿ ಶನಿವಾರ ಮಕರ ಸಂಕ್ರಾಂತಿಯಂದು ಬ್ರಹ್ಮರಥ ಸಹಿತ ಮೂರು ತೇರುಗಳ ಉತ್ಸವ ವೈಭವದಿಂದ ಜರಗಿತು.
ಬ್ರಹ್ಮರಥ, ಗರುಡ ರಥ, ಸಣ್ಣ ರಥಗಳಲ್ಲಿ ಶ್ರೀಕೃಷ್ಣ, ಮುಖ್ಯಪ್ರಾಣ, ಅನಂತೇಶ್ವರ, ಚಂದ್ರಮೌಳೀಶ್ವರ ದೇವರ ಉತ್ಸವ ಮೂರ್ತಿಗಳನ್ನು ಪೂಜಿಸಿ ಉತ್ಸವ ನಡೆಸಲಾಯಿತು. ಉತ್ಸವದಲ್ಲಿ ಪಲಿಮಾರು ಮಠದ ಶ್ರೀವಿದ್ಯಾಧೀಶತೀರ್ಥ ಶ್ರೀಪಾದರು, ಶ್ರೀವಿದ್ಯಾರಾಜೇಶ್ವರ ತೀರ್ಥ ಶ್ರೀಪಾದರು, ಪೇಜಾವರ ಮಠದ ಶ್ರೀವಿಶ್ವಪ್ರಸನ್ನ ತೀರ್ಥ ಶ್ರೀಪಾದರು, ಕಾಣಿಯೂರು ಮಠದ ಶ್ರೀವಿದ್ಯಾವಲ್ಲಭತೀರ್ಥ ಶ್ರೀಪಾದರು, ಸೋದೆ ಮಠದ ಶ್ರೀವಿಶ್ವವಲ್ಲಭ ತೀರ್ಥ ಶ್ರೀಪಾದರು, ಅದಮಾರು ಮಠದ ಶ್ರೀಈಶಪ್ರಿಯ ತೀರ್ಥ ಶ್ರೀಪಾದರು, ಶೀರೂರು ಮಠದ ಶ್ರೀವೇದವರ್ಧನ ತೀರ್ಥ ಶ್ರೀಪಾದರು ಪಾಲ್ಗೊಂಡಿದ್ದರು.
ಮಧ್ವಸರೋವರದಲ್ಲಿ ತೆಪ್ಪೋತ್ಸವ ನಡೆದ ಬಳಿಕ ಮೂರು ರಥಗಳ ಉತ್ಸವವು ವಿದ್ಯುದ್ದೀಪಗಳು ಮತ್ತು ಆಕರ್ಷಕ ಸುಡು ಮದ್ದುಗಳಿಂದ ಕೂಡಿದ ರಥಬೀದಿಯಲ್ಲಿ ಸಂಪನ್ನಗೊಂಡಿತು. ಉತ್ಸವ ಅರ್ಧ ಸುತ್ತು ಬಂದ ಬಳಿಕ ರಥಬೀದಿಯ ದಕ್ಷಿಣ ಭಾಗದಲ್ಲಿ ಸುಡು ಮದ್ದುಗಳ ಪ್ರದರ್ಶನ ನಡೆಯಿತು. ಮಧ್ಯಾಹ್ನ ವಿಶೇಷ ಅನ್ನಸಂತರ್ಪಣೆ ನಡೆಯಿತು.
ಇಂದು ಚೂರ್ಣೋತ್ಸವ
ರವಿವಾರ ಬೆಳಗ್ಗೆ ಚೂರ್ಣೋತ್ಸವ, ಅವಭೃಥ ಸ್ನಾನ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: 16 ವರ್ಷದ ಬಾಲಕ ಮೃತ್ಯು, ಮೃತರ ಸಂಖ್ಯೆ 3ಕ್ಕೆ ಏರಿಕೆ
ನನ್ನ ಮಾರ್ಗದರ್ಶಕರನ್ನು ಕಳೆದುಕೊಂಡಿದ್ದೇನೆ… ಮಾಜಿ ಪ್ರಧಾನಿ ನಿಧನಕ್ಕೆ ರಾಹುಲ್ ಸಂತಾಪ
Gangavathi: 25 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಆರೋಪಿ ಬಂಧನ
Patna: “ರಘುಪತಿ ರಾಘವ’ ಭಜನೆ ಹಾಡಿದ ಗಾಯಕಿ ವಿರುದ್ಧ ಪ್ರತಿಭಟನೆ: ಹಾಡುಗಾರ್ತಿ ಕ್ಷಮೆ
Canada: ಮಾನವ ಕಳ್ಳಸಾಗಣೆಯಲ್ಲಿ ಕೆನಡಾದ 260 ಕಾಲೇಜು! ವಿದ್ಯಾರ್ಥಿ ವೀಸಾ ಮೂಲಕ ಆಮಿಷ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.