ಕಾವೂರು: ಸಂತೆ ವ್ಯಾಪಾರಕ್ಕೆ ಅಡ್ಡಿ ಬ್ಯಾನರ್, ಡಿವೈಎಫ್‌ಐ ಪೊಲೀಸ್ ದೂರು
Team Udayavani, Jan 15, 2023, 7:25 AM IST
ಕಾವೂರು : ಕಾವೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಅನ್ಯಮತೀಯರಿಗೆ ವ್ಯಾಪಾರಕ್ಕೆ ಅನುಮತಿಯಿಲ್ಲ ಎಂದು ವಿಹಿಂಪ/ ಬಜರಂಗದಳ ಹಾಕಿದ ಬ್ಯಾನರ್ ತೆರವಿಗೆ ಆಗ್ರಹಿಸಿ ಹಾಗೂ ಕರ್ತವ್ಯದಲ್ಲಿ ವಿಫಲರಾದ ಸ್ಥಳೀಯ ಠಾಣೆಯ ಪೊಲೀಸರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಡಿವೈಎಫ್‌ಐ, ಸಿಪಿಐಎಂ ಸಂಘಟನೆ ಹಿರಿಯ ಪೊಲೀಸ್ ಆಯುಕ್ತರಿಗೆ ಮನವಿ ಸಲ್ಲಿಸಿತು.
ಸೌಹಾರ್ದದಿಂದ ಎಲ್ಲ ಧರ್ಮದವರೂ ಅನಾದಿ ಕಾಲದಿಂದಲೂ ಇಲ್ಲಿನ ಉತ್ಸವದ ಸಂದರ್ಭ ವ್ಯಾಪಾರ ಮಾಡುತ್ತಿದ್ದರು. ಆದರೆ ಜ. 10ರಂದು “ಅನ್ಯ ಧರ್ಮದವರು ಸಂತೆ ವ್ಯಾಪಾರ ನಡೆಸುವುದನ್ನು ಬಹಿಷ್ಠಾರ ಹಾಕಲಾಗಿದೆ’ ಎಂಬ ಜನಾಂಗೀಯ ನಿಂದನೆಯ ಬ್ಯಾನರ್ ಅಳವಡಿಸಲಾಗಿದೆ. ಈ ಬ್ಯಾನರನ್ನು ಸ್ಥಳೀಯ ಪೊಲೀಸರಿಗೆ ಹಾಗೂ ಎಸಿಪಿಯವರಿಗೆ ತಿಳಿಸಿದ ಮೇರೆಗೆ ತೆಗೆಯಲಾಗಿತು.
ಇದೀಗ ಆಡಳಿತ ಮಂಡಳಿಯ ತೀರ್ಮಾನ ಎಂದು ಪೊಲೀಸರು ಹೇಳಿದ್ದರೂ ವಿಹಿಂಪ ಬಜರಂಗದಳ ಹೆಸರಿನಲ್ಲಿ ಹಾಕಲಾಗಿದೆ. ಈ ಹಿನ್ನೆಲೆಯಲ್ಲಿ ಕರ್ತವ್ಯಲೋಪ ಎಸಗಿದ ಪೊಲೀಸರ ವಿರುದ್ದ ಕ್ರಮ ಜರಗಿಸಬೇಕೆಂದು ಸಂಘಟನೆ ಮುಖಂಡರು ಒತ್ತಾಯಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Mangaluru: ಕರಾವಳಿಯ ವೃತ್ತಿಪರರಿಗೆ ವಿಶ್ವದೆಲ್ಲೆಡೆ ಮನ್ನಣೆ
Mangaluru: ಪಿಲಿಕುಳ ಕಂಬಳ; ಮೂಲಸೌಲಭ್ಯ ಕಲ್ಪಿಸಲು ಜಿಲ್ಲಾಧಿಕಾರಿ ಸೂಚನೆ
MUST WATCH
ಹೊಸ ಸೇರ್ಪಡೆ
Bantwal: ತುಂಬೆ ಶ್ರೀಮಹಾಲಿಂಗೇಶ್ವರ ದೇವಸ್ಥಾನಕ್ಕೆ ಕನ್ನ; ಲಕ್ಷಾಂತರ ಮೌಲ್ಯದ ನಗನಗದು ಲೂಟಿ
Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಅಂಗಡಿಯಲ್ಲಿ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.