ಮಂಗಳೂರು: ಡಿಫೆನ್ಸ್ ಕೌನ್ಸೆಲ್ ಕಚೇರಿ ಕಾರ್ಯಾರಂಭ
Team Udayavani, Jan 16, 2023, 12:36 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ನ್ಯಾಯಾಲಯ ಸಂಕೀರ್ಣದಲ್ಲಿ ಕಾನೂನು ನೆರವು ಅಭಿರಕ್ಷಕರ (ಡಿಫೆನ್ಸ್ ಕೌನ್ಸೆಲ…) ಕಚೇರಿ ಕಾರ್ಯಾರಂಭ ಮಾಡಿದೆ.
ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಜೆ. ವೀರಪ್ಪ ಅವರು ಶುಕ್ರವಾರ ರಾಜ್ಯದ 15 ಜಿÇÉೆಗಳಲ್ಲಿ ಅಭಿರಕ್ಷಕರ ಕಚೇರಿಯನ್ನು ಏಕಕಾಲಕ್ಕೆ ಲೋಕಾರ್ಪಣೆ ಮಾಡಿದರು.
ಮಂಗಳೂರಿನ ನ್ಯಾಯಾಲಯ ಸಂಕೀರ್ಣದಲ್ಲಿ ಜಿÇÉಾ ಪ್ರಧಾನ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ರವೀಂದ್ರ ಜೋಷಿ ಅವರು ಕಚೇರಿಯನ್ನು ವಿಧ್ಯುಕ್ತವಾಗಿ ಉದ್ಘಾಟಿಸಿದರು.
ಹಿರಿಯ ನ್ಯಾಯವಾದಿ ವಾಸುದೇವ ಗೌಡ ಮುಖ್ಯ ಡಿಫೆನ್ಸ್ ಕೌನ್ಸೆಲ್ ಆಗಿ ಅಧಿಕಾರ ವಹಿಸಿಕೊಂಡರು. ಉಪ ಡಿಫೆನ್ಸ್ ಕೌನ್ಸೆಲ್ ಆಗಿ ಶುಕರಾಜ ಕೊಟ್ಟಾರಿ ಹಾಗೂ ಸಹಾಯಕ ಡಿಫೆನ್ಸ್ ಕೌನ್ಸೆಲ್ ಆಗಿ ಕೃಷ್ಣ ಅಧಿಕಾರ ಸ್ವೀಕರಿಸಿದರು.
ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಬಿ.ಜಿ. ಶೋಭಾ, ಮಂಗಳೂರು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ, ಕಾರ್ಯದರ್ಶಿ ಶ್ರೀಧರ ಎಣ್ಮಕಜೆ, ಹಿರಿಯ ವಕೀಲರಾದ ಇಬ್ರಾಹಿಂ ಹಾಗೂ ವಿವಿಧ ನ್ಯಾಯಾಧೀಶರು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಕ್ರಿಮಿನಲ್ ಪ್ರಕರಣದ ಉಚಿತ ಸೇವೆ
ಬಡವರ್ಗ ಮತ್ತು ಅಶಕ್ತರಿಗೆ ಪ್ರಾಧಿಕಾರ ಉಚಿತವಾಗಿ ಕಾನೂನು ಸೇವೆ ಒದಗಿಸುತ್ತಿದೆ. ಅದಕ್ಕಾಗಿ ವಕೀಲರ ಪ್ಯಾನೆಲನ್ನು ನೇಮಿಸಿದೆ. ಇದೀಗ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿ ಪ್ರಾಧಿಕಾರ ಡಿಫೆನ್ಸ್ ಕೌನ್ಸೆಲ್‌ನ್ನು ನೇಮಕ ಮಾಡಿ ಅದಕ್ಕೆ ಪ್ರತ್ಯೇಕವಾಗಿ ಪೂರ್ಣಕಾಲಿಕವಾಗಿ ವಕೀಲರನ್ನು ನಿಯೋಜಿಸಿದೆ ಎಂದು ವಕೀಲರ ಸಂಘದ ಅಧ್ಯಕ್ಷ ಪೃಥ್ವಿರಾಜ್ ರೈ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
ವಿಡಿಯೋ | Mangaluru; ಕದ್ರಿ ಪೊಲೀಸ್ ಠಾಣೆ ಬಳಿ ಇದ್ದಕ್ಕಿದ್ದಂತೆ ಹೊತ್ತಿ ಉರಿದ ಕಾರು
Hampanakatte: ಗುಟ್ಕಾ ಉಗುಳುವವರು, ಧೂಮಪಾನಿಗಳ ಹಾವಳಿ
Mangaluru: ತೆರೆದ ತೋಡಿನಲ್ಲಿ ಕೊಳಚೆ ನೀರು ಹರಿಯುವುದು ನಿಂತಿಲ್ಲ
MUST WATCH
ಹೊಸ ಸೇರ್ಪಡೆ
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Maharashtra Election: ಬೂತ್ ಗೆಲ್ಲುವತ್ತ ಗಮನ ಹರಿಸಿ: ಕಾರ್ಯಕರ್ತರಿಗೆ ಮೋದಿ ಕರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.