ನ್ಯಾಯಾಧೀಶರ ನೇಮಕ ವಿಚಾರದಲ್ಲಿ ಪ್ರತಿಷ್ಠೆ ಬೇಡ


Team Udayavani, Jan 17, 2023, 6:00 AM IST

ನ್ಯಾಯಾಧೀಶರ ನೇಮಕ ವಿಚಾರದಲ್ಲಿ ಪ್ರತಿಷ್ಠೆ ಬೇಡ

ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಅತ್ಯುತ್ತಮ ನ್ಯಾಯಾಂಗ ವ್ಯವಸ್ಥೆಯನ್ನು ಹೊಂದಿರುವ ದೇಶ ಎಂಬ ಹೆಗ್ಗಳಿಕೆಗೆ ಪಾತ್ರವಾಗಿರುವ ಭಾರತದಲ್ಲೀಗ ನ್ಯಾಯಾಂಗ ಮತ್ತು ಸರಕಾರದ ನಡುವೆ ತಿಕ್ಕಾಟ ತೀವ್ರಗೊಂಡಿದೆ. ನಮ್ಮ ನ್ಯಾಯಾಂಗ ವ್ಯವಸ್ಥೆಯ ಅತ್ಯುನ್ನತ ನ್ಯಾಯಾಲಯಗಳಾಗಿರುವ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಾಧೀಶರನ್ನು ನೇಮಕ ಮಾಡುವ ವಿಚಾರ ಈ ವಿವಾದದ ಕೇಂದ್ರಬಿಂದು. ವಿವಾದ ತಲೆದೋರಿ ತಿಂಗಳುಗಳೇ ಉರುಳಿದ್ದರೂ ಇದಕ್ಕೊಂದು ಪರಿಹಾರೋಪಾಯವನ್ನು ಕಂಡುಹುಡುಕುವ ನಿಟ್ಟಿನಲ್ಲಿ ಇತ್ತಂಡಗಳಿಂದಲೂ ಸಕಾರಾತ್ಮಕ ಪ್ರಯತ್ನ ನಡೆಯದಿರುವುದು ಸೋಜಿಗವೇ ಸರಿ.

ನ್ಯಾಯಾಧೀಶರ ನೇಮಕಾತಿಯನ್ನು ಕೇಂದ್ರ ಸರಕಾರ ಮತ್ತುಸು. ಕೋ. ಪ್ರತಿಷ್ಠೆಯ ವಿಷಯವನ್ನಾಗಿಸಿಕೊಂಡಿದ್ದು ಪಾರಮ್ಯ ಮೆರೆಯಲು ಪೈಪೋಟಿ ನಡೆಸಿವೆ. ಈ ವಿಷಯವಾಗಿ ರಾಜ್ಯಸಭೆಯ ಸಭಾಧ್ಯಕ್ಷರೂ ಆಗಿರುವ ಉಪರಾಷ್ಟ್ರಪತಿ ಜಗದೀಪ್‌ ಧನ್‌ಕರ್‌, ಲೋಕಸಭೆ ಸ್ಪೀಕರ್‌ ಓಂ ಬಿರ್ಲಾ, ಕೇಂದ್ರದ ಕಾನೂನು ಸಚಿವ ಕಿರಣ್‌ ರಿಜಿಜು ಬಹಿರಂಗ ಹೇಳಿಕೆಗಳನ್ನು ನೀಡುವ ಮೂಲಕ ವಿವಾದಕ್ಕೆ ತುಪ್ಪ ಸುರಿಯುತ್ತಿದ್ದಾರೆ. ಸು. ಕೋ. ಮುಖ್ಯ ನ್ಯಾಯಾಧೀಶರ ನೇತೃತ್ವದ ಕೊಲೀಜಿಯಂ ಕೂಡ ಈ ವಿವಾದವನ್ನು ತಣ್ಣಗಾಗಿಸಲು ಮುಂದಾಗದೆ ಸರಕಾರದ ಹೇಳಿಕೆಗೆ ಪ್ರತಿಕ್ರಿಯೆ ನೀಡಲು ಹೆಚ್ಚಿನ ಆಸಕ್ತಿ ತೋರುತ್ತಿರುವುದು ದುರದೃಷ್ಟಕರ.

ಸರಕಾರ ಮತ್ತು ಕೊಲೀಜಿಯಂ ನಡುವಣ ಈ ಸಂಘರ್ಷದಿಂದಾಗಿ ದೇಶದ ವಿವಿಧ ಹೈಕೋರ್ಟ್‌ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾ ಧೀಶರ ಹಲವು ಹುದ್ದೆಗಳಿಗೆ ನೇಮಕಾತಿ ಸಾಧ್ಯವಾಗಿಲ್ಲ. ಇದರಿಂದಾಗಿ ಪ್ರಕರಣಗಳ ವಿಚಾರಣೆಯ ಮೇಲೆ ಭಾರೀ ಪರಿಣಾಮ ಬೀರುತ್ತಿದೆ.

ನ್ಯಾಯಾಧೀಶರ ನೇಮಕಾತಿಯಲ್ಲಿ ಪಾರದರ್ಶಕತೆ ಮತ್ತು ಉತ್ತರದಾಯಿತ್ವ ತರುವ ಅಗತ್ಯವಿದೆ ಎಂದು ಪ್ರತಿಪಾದಿಸುತ್ತಿರುವ ಕೇಂದ್ರ, ಸು. ಕೋ. ಸಂಸತ್‌ನ ಅಧಿಕಾರವನ್ನು ಮೊಟಕುಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದೆ. ಸರಕಾರವು ಸಂವಿಧಾನದ ಮೇಲೆ ಸವಾರಿ ಮಾಡಹೊರಟಿದೆ ಮತ್ತು ನ್ಯಾಯಾಂಗದ ಮೇಲೆ ತನ್ನ ಪ್ರಭಾವನ್ನು ಬೀರಲು ಮುಂದಾಗಿದೆ ಎಂಬುದು ಕೊಲೀಜಿಯಂನ ಪ್ರತ್ಯಾರೋಪ.

ಈ ವಿವಾದದ ಮುಂದುವರಿದ ಭಾಗವಾಗಿ ನ್ಯಾಯಾಧೀಶರ ನೇಮ ಕಾತಿಗಾಗಿರುವ ಕೊಲೀಜಿಯಂಗೆ ಕೇಂದ್ರ ಮತ್ತು ಆಯಾಯ ರಾಜ್ಯ ಸರಕಾರಗಳ ಪ್ರತಿನಿಧಿಯನ್ನು ಸೇರ್ಪಡೆಗೊಳಿಸುವಂತೆ ಸಲಹೆ ನೀಡಿ ಕೇಂದ್ರ ಕಾನೂನು ಸಚಿವ ಕಿರಣ್‌ ರಿಜಿಜು ಸು. ಕೋರ್ಟ್‌ ಮುಖ್ಯ ನ್ಯಾಯಾಧೀಶರಿಗೆ ಪತ್ರ ಬರೆದಿರುವುದು ಈ ಕುರಿತಾಗಿನ ಚರ್ಚೆಯನ್ನು ಮತ್ತೆ ಮುನ್ನೆಲೆಗೆ ತಂದಿದೆ. ಆದರೆ ಕೊಲೀಜಿಯಂ ಕೇಂದ್ರದ ಈ ಸಲಹೆಯನ್ನು ಸಾರಾಸಗಟಾಗಿ ತಿರಸ್ಕರಿಸಿದೆ. ಅಷ್ಟು ಮಾತ್ರವಲ್ಲದೆ ಈ ಹಿಂದೆ ಸು. ಕೋರ್ಟ್‌ನಿಂದ ರದ್ದುಗೊಳಿಸಲ್ಪಟ್ಟ ರಾಷ್ಟ್ರೀಯ ನ್ಯಾಯಾಂಗ ನೇಮಕಾತಿ ಆಯೋಗವನ್ನು ಹಿಂಬಾಗಿಲಿನಿಂದ ಜಾರಿಗೆ ತರುವ ಪ್ರಯತ್ನ ಇದಾಗಿದೆ ಎಂದು ಆರೋಪಿಸಿದೆ.

ನ್ಯಾಯಾಧೀಶರ ನೇಮಕಾತಿ ವಿಷಯವಾಗಿ ಹೊತ್ತಿಕೊಂಡಿರುವ ಕಿಡಿ ಸದ್ಯಕ್ಕಂತೂ ಶಮನವಾಗುವ ಲಕ್ಷಣ ಕಾಣುತ್ತಿಲ್ಲ. ಇಂಥ ಗಂಭೀರ ವಿಷಯ ಗಳು ಸಾರ್ವಜನಿಕವಾಗಿ ಚರ್ಚೆಗೀಡಾಗುವುದು ಸರಿಯಲ್ಲ. ಸರಕಾರ ಮತ್ತು ನ್ಯಾಯಾಂಗ ಪರಸ್ಪರ ಕೊಡು-ಕೊಳ್ಳುವಿಕೆಯ ಮನೋಭಾವ ದೊಂದಿಗೆ ಸಂವಿಧಾನದ ಚೌಕಟ್ಟಿನಲ್ಲಿ ಈ ಸಮಸ್ಯೆಗೆ ಪರಿಹಾರ ಸೂತ್ರವನ್ನು ಕಂಡುಹಿಡಿಯಬೇಕಾದುದು ಇಂದಿನ ಅಗತ್ಯ ಮತ್ತು ಅನಿವಾರ್ಯತೆ.

ಟಾಪ್ ನ್ಯೂಸ್

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

0055

BBK11: ಮಂಜು ಅವರದ್ದು ಚೀಪ್ ಮೆಂಟಲಿಟಿ‌ ಎಂದ ರಜತ್; ಭವ್ಯ – ಮೋಕ್ಷಿತಾ ವಾಗ್ವಾದ

9-ullala

Ullala: ಸೇತುವೆಗೆ ತೇಪೆ ಹಚ್ಚುವ ಕಾಮಗಾರಿ; ರಾ. ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯತ್ಯಯ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hdd

Government: ಮೀಸಲಾತಿ ಪರಾಮರ್ಶೆ ಮಾಜಿ ಪಿಎಂ ಸಲಹೆ ಚಿಂತನಾರ್ಹ

ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

Karnataka Govt.,: ಹೈನುಗಾರರ ಅಳಲಿಗೆ ಸರಕಾರ ತತ್‌ಕ್ಷಣ ಸ್ಪಂದಿಸಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

ಪಡಿತರ ವ್ಯವಸ್ಥೆ ಸಮರ್ಪಕವಾಗಲಿ

MONEY (2)

Loan; ಅಡಮಾನ ರಹಿತ ಸಾಲ ಹೆಚ್ಚಳ: ಬ್ಯಾಂಕ್‌ಗಳ ಸ್ಪಂದನೆ ಮುಖ್ಯ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

Karnataka ಹೈಕೋರ್ಟ್‌ನಲ್ಲಿ ಕನ್ನಡದಲ್ಲಿ ತೀರ್ಪು ಇನ್ನಾದರೂ ಸರಕಾರ ಎಚ್ಚೆತ್ತುಕೊಳ್ಳಲಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

Atlee to collaborate with Salman Khan

Atlee Kumar; ಸಲ್ಮಾನ್‌ ಖಾನ್‌ ಜತೆಗೆ ಅಟ್ಲಿ ಸಿನಿಮಾ

11-

ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ

10-tumkur

Tumkur: ನೀರಾವರಿ ವಿದ್ಯುತ್ ಬಿಲ್ ಪಾವತಿ ಮಾಡುವಂತೆ ಸಿದ್ದಗಂಗಾ ಮಠಕ್ಕೆ ಪತ್ರ

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾವು

Mumbai: ಚಿಕಿತ್ಸೆಗೆಂದು ಮುಂಬೈಗೆ ಹೋಗಿದ್ದ ನಾಸಿಕ್ ನ ಒಂದೇ ಕುಟುಂಬದ ಮೂವರ ದುರಂತ ಸಾ*ವು

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Kadur: ದೇಗುಲ ಕಂಪೌಂಡ್‌ ಪ್ರವೇಶಿಸಿದರೆಂದು ದಲಿತರಿಗೆ ದಂಡ; ಸವರ್ಣೀಯರಿಂದ ದೇಗುಲಕ್ಕೆ ಬೀಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.