ಉಡುಪಿ: ಆಧಾರ್ ಕಾರ್ಡ್ ನವೀಕರಣಕ್ಕೆ ಸೂಚನೆ
Team Udayavani, Jan 20, 2023, 6:47 AM IST
ಉಡುಪಿ: ಜಿಲ್ಲೆಯಲ್ಲಿ 10 ವರ್ಷಗಳ ಹಿಂದೆ ಆಧಾರ್ ಕಾರ್ಡ್ ನೋಂದಣಿ ಮಾಡಿಸಿಕೊಂಡ ಪ್ರತಿಯೊಬ್ಬರೂ ತಮ್ಮ ವಿಳಾಸ ದೃಢೀಕರಣ ದಾಖಲೆಯೊಂದಿಗೆ ಆಧಾರ್ ಕೇಂದ್ರಗಳಿಗೆ ಭೇಟಿ ನೀಡಿ ನವೀಕರಣ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ತಿಳಿಸಿದರು.
ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಆಧಾರ್ ನವೀಕರಣ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಈಗಾಗಲೇ ಜಿಲ್ಲೆಯಲ್ಲಿ 5 ವರ್ಷದೊಳಗಿನ 42,312 ಮಕ್ಕಳು ಆಧಾರ್ ನೋಂದಣಿ ಮಾಡಿಸಿಕೊಂಡಿದ್ದು, ಕೈ ಬೆರಳಚ್ಚು ಮತ್ತು ಕಣ್ಣಿನ ಸ್ಕ್ಯಾನ್, ಬಯೋಮೆಟ್ರಿಕ್ ನೀಡದೇ ಇರುವ ಮಕ್ಕಳು ಬಯೋಮೆಟ್ರಿಕ್ ನೀಡಬೇಕು ಎಂದರು.
2 ಲಕ್ಷ ಆಧಾರ್‌ಗೆ ಫೋನ್ ನಂಬರ್ ಲಿಂಕ್ ಆಗಿಲ್ಲ
ಜಿಲ್ಲೆಯಲ್ಲಿ 13 ಲಕ್ಷಕ್ಕೂ ಅಧಿಕ ಜನರು ಆಧಾರ್ ನೋಂದಣಿ ಮಾಡಿಸಿಕೊಂಡಿದ್ದು, ಇದರಲ್ಲಿ 15 ವರ್ಷ ಮೇಲ್ಪಟ್ಟ 2 ಲಕ್ಷ ಮಂದಿ ತಮ್ಮ ಮೊಬೈಲ್ ಸಂಖ್ಯೆ ಜೋಡಣೆ ಮಾಡಿಲ್ಲ.
ಅಂಥವರು ಮೊಬೈಲ್ ಸಂಖ್ಯೆಯನ್ನು ಆಧಾರ್ ಜತೆ ಜೋಡಣೆ ಮಾಡಿಕೊಳ್ಳಬೇಕು. ಸರಕಾರದ ಸೌಲಭ್ಯ ಪಡೆಯಲು ಆಧಾರ್ ಸಂಖ್ಯೆ ಮುಖ್ಯವಾಗಿದೆ. ಆಧಾರ್ ಸಂಖ್ಯೆಯು ಬ್ಯಾಂಕ್ ಖಾತೆ ಜೋಡಣೆ ಹೊಂದಿ, ಸರಕಾರದ ವಿವಿಧ ಯೋಜನೆಗಳ ಸಹಾಯಧನವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾಯಿಸಲು ಅನುಕೂಲವಾಗುತ್ತದೆ ಎಂದು ಹೇಳಿದರು.
ಎಸ್ಪಿ ಹಾಕೆ ಅಕ್ಷಯ್ ಮಚ್ಚೀಂದ್ರ, ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎನ್., ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಆಧಾರ್ ಪ್ರಾಧಿಕಾರದ ಉಪ ನಿರ್ದೇಶಕ ರಾಘವೇಂದ್ರ ಎಸ್. ಹಾಗೂ ವಿವಿಧ ಇಲಾಖೆಗಳ ಅನುಷ್ಠಾನಾಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?
Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ
ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ
Shivamogga: ಮಾಂಗಲ್ಯ ಸರ ಕಿತ್ತು ಪರಾರಿಯಾದ ಖರ್ತನಾಕ್ ಕಳ್ಳರು; ಸಿಸಿಟಿವಿಯಲ್ಲಿ ಸೆರೆ
Mollywood: ʼಮಾರ್ಕೊʼ ಬಳಿಕ ಮೋಹನ್ ಲಾಲ್ ನಿರ್ದೇಶನದ ʼಬರೋಜ್ʼ ಚಿತ್ರಕ್ಕೂ ಪೈರಸಿ ಕಾಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.