ಮಲ್ಪೆಯಲ್ಲಿ ಇಂದಿನಿಂದ ಬೀಚ್‌ ಉತ್ಸವ


Team Udayavani, Jan 20, 2023, 7:45 AM IST

ಮಲ್ಪೆಯಲ್ಲಿ ಇಂದಿನಿಂದ ಬೀಚ್‌ ಉತ್ಸವ

ಮಲ್ಪೆ: ಜಿಲ್ಲೆಯ ರಜತ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತದ ಆಯೋಜಕತ್ವದಲ್ಲಿ ಮಲ್ಪೆಯಲ್ಲಿ ಜ. 20ರಿಂದ 22ರ ವರೆಗೆ ನಡೆಯಲಿರುವ ಬೀಚ್‌ ಉತ್ಸವ-2023ಕ್ಕೆ ಭರದ ಸಿದ್ಧತೆಗಳು ನಡೆಯುತ್ತಿವೆ.

ಬೃಹತ್‌ ಗಾತ್ರದ ವೇದಿಕೆ ನಿರ್ಮಾಣವಾಗುತ್ತಿದೆ. ಕರಕುಶಲ ವಸ್ತುಗಳು ಸೇರಿದಂತೆ ಆಹಾರ ಮೇಳಗಳ ಪ್ರದರ್ಶನ ಮತ್ತು ಮಾರಾಟದ 20 ಮಳಿಗೆಗಳನ್ನು ತೆರೆಯಲಾಗುತ್ತದೆ. ಸುಮಾರು 5 ಸಾವಿರ ಮಂದಿ ವೀಕ್ಷಕರಿಗೆ ಆಸನ ವ್ಯವಸ್ಥೆ ಮಾಡಲಾಗಿದೆ.

ಜ. 20ರಂದು ಸಂಜೆ 6ಕ್ಕೆ ನಡೆಯಲಿರುವ ಕಾರ್ಯಕ್ರಮಕ್ಕೆ ಮೀನುಗಾರಿಕೆ ಸಚಿವ ಎಸ್‌. ಅಂಗಾರ ಚಾಲನೆ ನೀಡಲಿದ್ದಾರೆ. ಶಾಸಕ ರಘುಪತಿ ಭಟ್‌ ಅಧ್ಯಕ್ಷತೆ ವಹಿಸಲಿದ್ದು, ಸಂಸದೆ ಶೋಭಾ ಕರಂದ್ಲಾಜೆ, ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ವಿ. ಸುನಿಲ್‌ ಕುಮಾರ್‌, ಆನಂದ ಸಿಂಗ್‌, ಸಂಸದರು, ಜಿಲ್ಲೆಯ ಶಾಸಕರು, ವಿವಿಧ ನಿಗಮಗಳ‌ ಅಧ್ಯಕ್ಷರು ಮೊದಲಾದ ಗಣ್ಯರು ಪಾಲ್ಗೊಳ್ಳಲಿರುವರು.

ಮುಂಜಾಗ್ರತೆಗಾಗಿ ಈಗಾಗಲೇ ಬೀಚ್‌ ಅಭಿವೃದ್ಧಿ ಸಮಿತಿಯಿಂದ 32 ಕೆಮರಾಗಳನ್ನು ಅಳವಡಿಸಲಾಗಿದೆ. ವಾಹನಗಳ ನಿಲುಗಡೆಗೆ ಅಲ್ಲಲ್ಲಿ ವ್ಯವಸ್ಥೆ ಮಾಡಲಾಗಿದೆ. 100ಕ್ಕೂ ಅಧಿಕ ಪೊಲೀಸ್‌ ಸಿಬಂದಿಯನ್ನು ನಿಯೋಜಿಸಲಾಗಿದ್ದು, 4 ವೀಕ್ಷಣ ಟವರ್‌ಗಳನ್ನು ನಿರ್ಮಿಸಲಾಗಿದೆ.

ಜ. 20ರಂದು ಸಂಜೆ ರಾಜೇಶ್‌ ಕೃಷ್ಣನ್‌ ಹಾಗೂ ಚಂದನ್‌ ಶೆಟ್ಟಿ ಅವರಿಂದ ರಸಸಂಜೆ, 21ರಂದು ಕುನಾಲ್‌ ಗಾಂಜಾವಾಲ, 22ರಂದು ರಘುದೀಕ್ಷಿತ್‌ ಅವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ.

ರಾಷ್ಟ್ರೀಯ ಓಪನ್‌ ಈಜು :

ಸ್ವಿಮ್ಮಿಂಗ್‌ ಫೆಡರೇಶನ್‌ ಆಫ್ ಇಂಡಿಯಾ, ಕರ್ನಾಟಕ ಸ್ವಿಮ್ಮಿಂಗ್‌ ಅಸೋಸಿಯೇಶನ್‌ ಮತ್ತು ಯುವ ಸಬಲೀಕರಣ ಕ್ರೀಡಾ ಇಲಾಖೆಯ ವತಿಯಿಂದ ರಾಷ್ಟ್ರ ಮಟ್ಟದ ಓಪನ್‌ ಸ್ವಿಮ್ಮಿಂಗ್‌ ಸ್ಪರ್ಧೆಗಳು ಮಲ್ಪೆ ಸಮುದ್ರದಲ್ಲಿ ನಡೆಯಲಿದೆ. 10 ಕಿ.ಮೀ., 7.5 ಕಿ.ಮೀ., 5 ಕಿ.ಮೀ. ಮತ್ತು ರಿಲೇ ವಿಭಾಗದ ಸ್ಪರ್ಧೆಗಳು ಇರಲಿವೆ.

ಈಗಾಗಲೇ ರಾಜ್ಯ ಮತ್ತು ರಾಷ್ಟ್ರ ಮಟ್ಟದ 200 ಈಜುಗಾರರು ನೋಂದಣಿ ಮಾಡಿದ್ದಾರೆ. ಅಗತ್ಯವಿರುವ ಕ್ರೀಡಾ ಸಾಮಗ್ರಿಗಳನ್ನು ತರಲಾಗಿದೆ. ಜನರಲ್‌ ತಿಮ್ಮಯ್ಯ ರಾಷ್ಟ್ರೀಯ ಅಕಾಡೆಮಿ ವತಿಯಿಂದ ಮಕ್ಕಳಿಗೆ ಉಚಿತವಾಗಿ ಕಯಾಕಿಂಗ್‌ ತರಬೇತಿ ನೀಡಲಾಗುತ್ತದೆ.

ವಿನೂತನ ವಾಟರ್‌ ಸೋರ್ಟ್ಸ್, ಸ್ಪರ್ಧೆಗಳು :

ಮಹಿಳೆಯರಿಗೆ ತ್ರೋಬಾಲ್‌, ಪುರುಷರಿಗೆ ಕಬ್ಬಡಿ, ಮಕ್ಕಳಿಗೆ ಚಿತ್ರಕಲಾ ಸ್ಪರ್ಧೆ, ಗಾಳಿಪಟ ಉತ್ಸವ, ಶ್ವಾನ ಪ್ರದರ್ಶನ ಸ್ಪರ್ಧೆ, ಕಲಾ ಶಿಬಿರ, ಛಾಯಾಚಿತ್ರ ಪ್ರದರ್ಶನ ನಡೆಯಲಿದೆ. ವಿನೂತನ ಬಗೆಯ ವಾಟರ್‌ ಸೋರ್ಟ್ಸ್ ಗಳಾದ ಯಾಚ್‌ ಚಾರ್ಟರ್‌, ಕ್ಲಿಫ್‌ ಡೈವಿಂಗ್‌, ಸ್ಲಾಕ್‌ ಲೆನ್‌, ಫ್ಲೈ ಬೋರ್ಡ್‌, ಸ್ಕೂಬಾ ಡೈವಿಂಗ್‌ ನಡೆಯಲಿದೆ.

ಜಿಲ್ಲೆಯಲ್ಲೇ ಪ್ರಥಮ ಬಾರಿ ಎಂಬಂತೆ ವಿಶೇಷ ರೀತಿಯಲ್ಲಿ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ವಿನೂತನ ಬಗೆಯ ವಾಟರ್‌ ನ್ಪೋರ್ಟ್ಸ್ ಗಳನ್ನು ಪರಿಚಯಿಸಲಾಗುತ್ತದೆ. ರಾಷ್ಟ್ರ ಮಟ್ಟದ ಈಜುಗಾರರು ಭಾಗವಹಿಸಲಿದ್ದು, 50-60 ಸಾವಿರ ಮಂದಿ ಅಗಮಿಸುವ ನಿರೀಕ್ಷೆ ಇದೆ. 2,500 ವಾಹನಗಳ ನಿಲುಗಡೆಗೆ ವ್ಯವಸ್ಥೆ ಮಾಡಲಾಗಿದೆ. ಅತ್ಯಾಧುನಿಕ ಧ್ವನಿ-ಬೆಳಕಿನ ವ್ಯವಸ್ಥೆ ಕಲ್ಪಿಸಲಾಗಿದೆ.ಕೆ. ರಘುಪತಿ ಭಟ್‌, ಶಾಸಕರು, ಉಡುಪಿ

 

ಟಾಪ್ ನ್ಯೂಸ್

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ

police

Belgavi; ವೇಶ್ಯಾವಾಟಿಕೆ ಆರೋಪ: ತಾಯಿ, ಮಗಳನ್ನು ರಸ್ತೆಗೆ ಎಳೆದು ಹಲ್ಲೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ರೈಲು ಬಡಿದು ವ್ಯಕ್ತಿ ಸಾವು

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

Udupi: ಗಾಂಜಾ ಮಾರಾಟ ಮಾಡುತ್ತಿದ್ದ ಮೂವರ ಬಂಧನ; 8 ಲಕ್ಷ ಮೌಲ್ಯದ ಗಾಂಜಾ ವಶಕ್ಕೆ

10-karkala

Karkala: ಬಾವಿ‌ಗೆ ಬಿದ್ದು ವ್ಯಕ್ತಿ‌ ‌ಸಾವು‌; ಮೃತದೇಹ ಮೇಲಕ್ಕೆತ್ತಿದ ಅಗ್ನಿಶಾಮಕ‌ ಪಡೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

Udupi: ಗೀತಾರ್ಥ ಚಿಂತನೆ 95: ಹೃಷೀಕೇಶನಲ್ಲಿ ಗುಡಾಕೇಶನ ಪ್ರಾರ್ಥನೆ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.