ಕಾರಾಗೃಹದಲ್ಲಿ ಅಕ್ರಮವೆಸಗಿದರೆ ಕಠಿಣ ಶಿಸ್ತುಕ್ರಮ: ಆರಗ ಜ್ಞಾನೇಂದ್ರ ಎಚ್ಚರಿಕೆ
Team Udayavani, Jan 20, 2023, 12:47 PM IST
ಬೆಂಗಳೂರು: ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆಗಳಲ್ಲಿ ತೊಡಗುವ ಹಾಗೂ ಕುಮ್ಮಕ್ಕು ನೀಡುವ ಸಿಬ್ಬಂದಿಗಳ ವಿರುದ್ಧ ಕಠಿಣ ಶಿಸ್ತಿನ ಕ್ರಮ ಜರುಗಿಸುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಎಚ್ಚರಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಇತ್ತೀಚೆಗೆ ರಾಮನಗರ, ತುಮಕೂರು, ಕಲಬುರಗಿ ಹಾಗೂ ಬೆಳಗಾವಿ ಕಾರಾಗೃಹಗಳಲ್ಲಿ ಕೆಲವು ಅಕ್ರಮ ಚಟುವಟಿಕೆಗಳ ಬಗ್ಗೆ ವರದಿಯಾಗಿದ್ದು, ಇದರ ಬಗ್ಗೆ ವಿಸ್ತೃತ ತನಿಖೆಗೆ ಆದೇಶ ನೀಡಿದ್ದು, ತುಮಕೂರು ಜಿಲ್ಲಾ ಕಾರಾಗೃಹದ ವಾರ್ಡನ್ ಪ್ರವೀಣ್ ಎಂಬುವರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ ಎಂದು ಹೇಳಿದರು.
ಹಾಸನ ಜಿಲ್ಲಾ ಕಾರಾಗೃಹದ ಮೇಲೆ ನಿನ್ನೆ ಜಿಲ್ಲಾ ಪೊಲೀಸ್ ಸಿಬ್ಬಂದಿ ದಿಢೀರ್ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟುಕೊಳ್ಳಲಾಗಿದ್ದ ಮೊಬೈಲ್ ಸೆಟ್ ಗಳು ಸೀಜ್ ಮಾಡಿದ್ದಾರೆ. ಮೊಬೈಲ್ ಗಳನ್ನು ಜೈಲಿನೊಳಗೆ ಸಾಗಿಸಲು ಸಹಕರಿಸಿದ ಸಿಬ್ಬಂದಿ ಹಾಗೂ ಅದನ್ನು ಜೈಲಿನೊಳಗೆ ಉಪಯೋಗಿಸಿದ ಜೈಲು ಬಂದಿಗಳ ವಿರುದ್ಧ ಕಾನೂನಾತ್ಮಕ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ ಎಂದು ತಿಳಿಸಿದರು.
ಬೆಳಗಾವಿ ಕೇಂದ್ರ ಕಾರಾಗೃಹದಿಂದ, ಇತ್ತೀಚೆಗೆ ಕೇಂದ್ರ ಸಚಿವ ನಿತಿನ್ ಗಡ್ಕರಿಯವರಿಗೆ ಬೆದರಿಕೆ ಕರೆ ಮಾಡಿದ ಕೈದಿಯ ವಿರುದ್ಧವೂ ಮೊಕದ್ದಮೆ ದಾಖಲು ಮಾಡಲಾಗಿದೆ ಎಂದೂ ಸಚಿವರು ಹೇಳಿದರು.
ರಾಜ್ಯದ ಕಾರಾಗೃಹಗಳಲ್ಲಿ ಅಕ್ರಮವಾಗಿ ಮೊಬೈಲ್ ಉಪಯೋಗಿಸುವುದನ್ನು, ಪ್ರತಿಬಂಧಿಸಲು ಅತ್ಯಾಧುನಿಕ ಮೊಬೈಲ್ ಜಾಮರ್ ಗಳನ್ನು ಅಳವಡಿಸಲಾಗುತ್ತಿದೆ ಎಂದು ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
MUST WATCH
ಹೊಸ ಸೇರ್ಪಡೆ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Dandeli: ಅಧಿಕಾರಿಗಳಿಂದ ರೈಲು ಮಾರ್ಗದ ವಿದ್ಯುದ್ದೀಕರಣ ಪರಿಶೀಲನೆ
Love Reddy: ತೆರೆಗೆ ಬಂತು ʼಲವ್ ರೆಡ್ಡಿʼ
Yadagiri: ಕೆಡಿಪಿ ಸಭೆಯಲ್ಲಿ ಸಚಿವರ-ಶಾಸಕರ ನಡುವೆ ವಾಕ್ ಸಮರ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.