130 ಸ್ಥಾನ ಗೆಲ್ಲುತ್ತೇವೆ, 150 ಆದರೂ ಆಗಬಹುದು : ಸಿದ್ದರಾಮಯ್ಯ ಲೆಕ್ಕಾಚಾರ
ಕೋಲಾರ ಸ್ಪರ್ಧೆ ಬಗ್ಗೆ ಸ್ಪಷ್ಟನೆ; ಯಾರೇ ಬಂದರೂ, ಏನೇ ಮಾಡಿದರೂ ನಾನೇ ಗೆಲ್ಲುವುದು
Team Udayavani, Jan 21, 2023, 3:44 PM IST
ಮೈಸೂರು : ಮುಂದಿನ ಚುನಾವಣೆಯಲ್ಲಿ ನಾವು 130 ಸ್ಥಾನ ಗೆಲ್ಲುತ್ತೇವೆ, ಅದು 150 ಆದರೂ ಆಗಬಹುದು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಶನಿವಾರ ಹೇಳಿಕೆ ನೀಡಿದ್ದಾರೆ.
ರಾಜ್ಯದ ಜನ ಕಾಂಗ್ರೆಸ್ ಅಧಿಕಾರದಲ್ಲಿ ಆಗಿದ್ದ ಕೆಲಸಗಳ ಬಗ್ಗೆ ತಿಳಿದುಕೊಂಡಿದ್ದಾರೆ. ನಾವು ಹಿಂದೆ ಪ್ರಣಾಳಿಕೆಯಲ್ಲಿ ಹೇಳಿದ್ದ ಶೇಕಡ 99 ರಷ್ಟು ಕೆಲಸ ಮಾಡಿದ್ದೇವೆ. ಈಗಲೂ 200 ಯೂನಿಟ್ ಉಚಿತ ವಿದ್ಯುತ್, ಕುಟುಂಬ ಮುಖ್ಯಸ್ಥೆಗೆ ತಿಂಗಳು 2 ಸಾವಿರ ಹಣ ನೀಡುವುದಾಗಿ ಘೋಷಣೆ ಮಾಡಿದ್ದೇವೆ. ಇನ್ನೂ ಹಲವು ಘೋಷಣೆ ಮಾಡಲಿದ್ದೇವೆ. ಇವುಗಳು ಚುನಾವಣೆಯಲ್ಲಿ ನಮ್ಮ ಕೈ ಹಿಡಿಯುತ್ತವೆ. ಯಾರು ಏನೇ ಹೇಳಿದರೂ ಕಾಂಗ್ರೆಸ್ ಅಧಿಕಾರ ಹಿಡಿಯುವುದು ಸತ್ಯ ಎಂದರು.
ಸ್ಯಾಂಟ್ರೋ ರವಿ ಪ್ರಕರಣವನ್ನು ಮುಚ್ಚಿ ಹಾಕುವ ಯತ್ನ ನಡೆದಿದೆ. ಸ್ಯಾಂಟ್ರೋ ರವಿ ಒಬ್ಬ ಪಿಂಪ್,ವೇಶ್ಯಾವಾಟಿಕೆ, ವರ್ಗಾವಣೆ ದಂಧೆ, ಪೋಕ್ಸೋ ಪ್ರಕರಣದ ಆರೋಪಿ.ಆತ ಹೊರಗೆ ಬಂದರೆ ಹಲವರ ಬಂಡವಾಳ ಹೊರಗೆ ಬರುತ್ತದೆ. ಆ ಕಾರಣದಿಂದ ಮುಚ್ಚಿಹಾಕುವ ಯತ್ನ ನಡೆದಿದೆ. ಸಿಐಡಿಗೆ ಪ್ರಕರಣವನ್ನು ವಹಿಸಿದ್ದು ಏಕೆ? ಆತನನ್ನು ಆರಂಭದಲ್ಲಿ ವಶಕ್ಕೆ ಪಡೆಯದೆ ಇರುವುದು ಏಕೆ? ಆತನನ್ನು ನ್ಯಾಯಾಂಗ ಬಂಧನಕ್ಕೆ ಕಳಿಸಿದ್ದು ಏಕೆ? ಸಿಐಡಿ ಕೂಡ ರಾಜ್ಯ ಪೊಲೀಸ್ ಒಂದು ಘಟಕ. ಇದೆಲ್ಲದರ ಹಿಂದೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆದಿದೆ. ಎಂದು ಸರ್ಕಾರದ ವಿರುದ್ಧ ಗಂಭೀರ ಆರೋಪ ಮಾಡಿದರು.
ಕೋಲಾರದಲ್ಲಿ ಯಾರೇ ಬಂದರೂ ಏನೇ ಮಾಡಿದರೂ ನಾನು ಗೆಲ್ಲುತ್ತೇನೆ. ಬದಾಮಿಯಲ್ಲೂ ನನ್ನನ್ನು ಸೋಲಿಸಲು ಅಮಿತ್ ಶಾ ಬಂದಿದ್ದರು. ಅಶೋಕ್ ಪಟ್ಟಣಶೆಟ್ಟಿ ಬದಲು ಶ್ರೀ ರಾಮುಲು ನಿಲ್ಲಿಸಿದರು. ಆದರೂ ನನ್ನನ್ನು ಸೋಲಿಸಲು ಸಾಧ್ಯವಾಗಲಿಲ್ಲ. ನಾನು ಅಲ್ಲಿ ಪ್ರಚಾರಕ್ಕೆ ಹೋಗಿದ್ದು ಎರಡೇ ದಿನ. ನಾನು ಬದಾಮಿ ಕ್ಷೇತ್ರ ಬದಲಾಯಿಸಿದ್ದು ದೂರ ಅನ್ನೋ ಕಾರಣಕ್ಕೆ. ನಾನು ಅಲ್ಲಿ ನಿಂತರೆ ಸೋಲುತ್ತೇನೆ ಅಂತ ಅಲ್ಲ.
ಬಾದಾಮಿ ಜನ ಹೆಲಿಕ್ಯಾಪ್ಟರ್ ಕೊಡಿಸುತ್ತೇವೆ ಅಂದರು,ನಾನೇ ಬೇಡ ಎಂದು ಕೋಲಾರದಿಂದ ಸ್ಪರ್ಧೆ ಮಾಡಿದೆ. ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕ್ಷೇತ್ರ ಹತ್ತಿರವಾಗುತ್ತದೆ ಎಂದು ಸ್ಪರ್ಧೆ ಬಗ್ಗೆ ಸ್ಪಷ್ಟನೆ ನೀಡಿದರು.
ರಾಜ್ಯ ಸರ್ಕಾರಕ್ಕೆ ಪ್ರಧಾನಿ ಮೋದಿ ಸರ್ಟಿಫಿಕೇಟ್ ಅನಗತ್ಯ. ರಾಜ್ಯದಲ್ಲಿ ಪಿಎಸ್‌ಐ ಹಗರಣ ನಡೆದಿರುವುದು ಸುಳ್ಳಾ? ಎಡಿಜಿಪಿ ಜೈಲು ಸೇರಿರುವುದು ಸುಳ್ಳಾ ? ಏನು ಆಗಿಲ್ಲ ಅಂದರೆ ಆತ ಇನ್ನೂ ಏಕೆ ಜೈಲಿನಲ್ಲಿದ್ದಾನೆ? ರಾಜ್ಯಕ್ಕೆ ಪದೇ ಪದೇ ಬಿಜೆಪಿ ಕೇಂದ್ರ ನಾಯಕರ ಭೇಟಿ ಯಾರು ಬಂದರೂ ಏನು ಪ್ರಯೋಜನ ಇಲ್ಲ. ನಡ್ಡಾಗೂ ರಾಜ್ಯಕ್ಕೂ ಏನು ಸಂಬಂಧ? ಅವರು ಏಕೆ ರಾಜ್ಯಕ್ಕೆ ಬರುತ್ತಿದ್ದಾರೆ ? ಎಂದು ಬಿಜೆಪಿ ವಿರುದ್ಧ ಪ್ರಶ್ನೆಗಳ ಸುರಿಮಳೆ ಗೈದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
MUST WATCH
ಹೊಸ ಸೇರ್ಪಡೆ
Karkala: ಡಾ. ಟಿ.ಎಂ.ಎ. ಪೈ ರೋಟರಿ ಆಸ್ಪತ್ರೆಯಲ್ಲಿ 24*7 ಸಿಟಿ ಸ್ಕ್ಯಾನ್ ಸೌಲಭ್ಯ ಉದ್ಘಾಟನೆ
Manipal: ಡಿಸಿ ಕಚೇರಿ ಆವರಣದಲ್ಲೂ ಬೀದಿನಾಯಿ ಉಪಟಳ
Malpe: ಕೋಡಿಬೆಂಗ್ರೆ-ಹಂಗಾರಕಟ್ಟೆ ಸಂಪರ್ಕ ಇನ್ನು ದೂರ
Hotel Room: ಹೋಟೆಲ್ ಕೊಠಡಿಯಲ್ಲೇ ವೈದ್ಯನ ನಿಗೂಢ ಸಾ*ವು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ
Bengaluru: ಬೆಂಗಳೂರಲ್ಲಿ ಶೀಘ್ರ ಪ್ರತಿ ಕೆಜಿ ಈರುಳ್ಳಿ ಬೆಲೆ 100?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.