ರಸಗೊಬ್ಬರಗಳಿಗೆ ಕ್ಯೂರ್‌ಕೋಡ್‌ ಕಡ್ಡಾಯ: ಆಗಸ್ಟ್‌ 1ರಿಂದಲೇ ಹೊಸ ಕ್ರಮ ಜಾರಿಗೆ

ನಕಲಿ ರಸಗೊಬ್ಬರ ಉತ್ಪನ್ನಗಳಿಗೆ ಕಡಿವಾಣ

Team Udayavani, Jan 22, 2023, 7:15 AM IST

ರಸಗೊಬ್ಬರಗಳಿಗೆ ಕ್ಯೂರ್‌ಕೋಡ್‌ ಕಡ್ಡಾಯ: ಆಗಸ್ಟ್‌ 1ರಿಂದಲೇ ಹೊಸ ಕ್ರಮ ಜಾರಿಗೆ

ಹೊಸದಿಲ್ಲಿ: ನಕಲಿ ರಸಗೊಬ್ಬರ ಉತ್ಪನ್ನಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ರಸಗೊಬ್ಬರ ಪ್ಯಾಕೆಟ್‌ಗಳ ಮೇಲೆ ಬಾರ್‌ಕೋಡ್‌ ಅಥವಾ ಕ್ಯುಆರ್‌ ಕೋಡ್‌ ಕಡ್ಡಾಯಗೊಳಿಸಲು ಕೇಂದ್ರ ಸರಕಾರ ಮುಂದಾಗಿದೆ.

ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವಾಲಯದ ಅಡಿ ಬರುವ ಔಷಧೋದ್ಯಮ ಇಲಾಖೆ ಈ ಕುರಿತು ಗೆಜೆಟ್‌ ನೋಟಿಫಿಕೇಶನ್‌ ಹೊರಡಿಸಿದ್ದು, ಇದರ ಪ್ರಕಾರ 2023ರ ಆ. 1ರಿಂದ ಮಾರಾಟ ಮಾಡುವ ಎಲ್ಲ ರಸಗೊಬ್ಬರಗಳ ಪ್ಯಾಕೆಟ್‌ಗಳ ಮೇಲೆ ಬಾರ್‌ಕೋಡ್‌ ಅಥವಾ ಕ್ಯುಆರ್‌ ಕೋಡ್‌ ಕಡ್ಡಾಯವಾಗಿದೆ.

ಈ ಕ್ರಮವು ನಕಲಿ ರಸಗೊಬ್ಬರ ತಡೆಯುವ ಮೂಲಕ ಕೃಷಿಕರಿಗೆ ಸಹಕಾರಿಯಾಗಿದೆ. ನಕಲಿ ರಸಗೊಬ್ಬರ ಹಾವಳಿಯಿಂದಾಗಿ ಕೃಷಿ ಉತ್ಪನ್ನಗಳ ಇಳುವರಿ ಕಡಿಮೆಯಾಗುತ್ತದೆ. ಈ ಮೂಲಕ ರೈತರ ಆದಾಯ ಕುಸಿಯುತ್ತದೆ. ಇದಕ್ಕೆ ಕಡಿವಾಣ ಹಾಕಲು ಕೇಂದ್ರ ಸರಕಾರ ಸಿಂಗಲ್‌ ಸೂಪರ್‌ ಫಾಸ್ಪೇಟ್‌ (ಎಸ್‌ಎಸ್‌ಪಿ) ರಸಗೊಬ್ಬರಕ್ಕೆ ಬಾರ್‌ಕೋಡಿಂಗ್‌ ಕಡ್ಡಾಯಗೊಳಿಸಿದೆ.

ಎಸ್‌ಎಸ್‌ಪಿ ಒಂದು ಪ್ರಮುಖ ರಸಗೊಬ್ಬರವಾಗಿದ್ದು, ಸಸ್ಯಗಳಿಗೆ ಅಗತ್ಯವಿರುವ ಮೂರು ಪ್ರಮುಖ ಪೋಷಕಾಂಶಗಳಾದ ಫಾಸ್ಫರಸ್‌, ಸಲ#ರ್‌ ಮತ್ತು ಕ್ಯಾಲ್ಸಿಯಂ ಜತೆಗೆ ಅನೇಕ ಸೂಕ್ಷ್ಮ ಪೋಷಕಾಂಶಗಳನ್ನು ಒಳಗೊಂಡಿದೆ.

ರಸಗೊಬ್ಬರ ಪ್ಯಾಕೆಟ್‌ಗಳಲ್ಲಿರುವ ಕ್ಯುಆರ್‌ ಕೋಡ್‌ ಅನನ್ಯ ಉತ್ಪನ್ನ ಗುರುತಿನ ಕೋಡ್‌, ಬ್ರ್ಯಾಂಡ್‌ ಹೆಸರು, ತಯಾರಕರ ಹೆಸರು ಮತ್ತು ವಿಳಾಸ, ಬ್ಯಾಚ್‌ ಸಂಖ್ಯೆ, ತಯಾರಿಕೆಯ ದಿನಾಂಕ, ಮುಕ್ತಾಯ ದಿನಾಂಕ ಮತ್ತು ಉತ್ಪಾದನ ಪರವಾನಗಿ ಸಂಖ್ಯೆಯನ್ನು ಒಳಗೊಂಡಿರುತ್ತದೆ.

ಕೇಂದ್ರ ಆರೋಗ್ಯ, ಔಷಧ ಮತ್ತು ರಸಗೊಬ್ಬರ ಸಚಿವ ಮನಸುಖ ಮಾಂಡವಿಯಾ ಅವರ ಮುತುವರ್ಜಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ. ಔಷಧ ವಲಯದಲ್ಲಿ ಈಗಾಗಲೇ ಔಷಧಗಳ ಪ್ಯಾಕೆಟ್‌ಗಳ ಮೇಲೆ ಕ್ಯುಆರ್‌ ಕೋಡ್‌ ಕಡ್ಡಾಯಗೊಳಿಸುವ ಕಾರ್ಯ ಪ್ರಗತಿಯಲ್ಲಿದೆ. ಅದೇ ರೀತಿ ರಸಗೊಬ್ಬರಗಳ ಪ್ಯಾಕೆಟ್‌ಗಳ ಮೇಲೂ ಕ್ಯುಆರ್‌ ಕೋಡ್‌ ಕಡ್ಡಾಯಕ್ಕೆ ಸಚಿವರು ಸಲಹೆ ನೀಡಿದ್ದರು ಎಂದು ಉನ್ನತ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ದೇಶದಲ್ಲಿ ಪ್ರತೀ ವರ್ಷ 56 ಲಕ್ಷ ಟನ್‌ ಎಸ್‌ಎಸ್‌ಪಿ ಉತ್ಪಾದಿಸಲಾಗುತ್ತದೆ. ಇದು ಡಿಎಪಿ (ಡಿ-ಅಮೋನಿಯಂ ಫಾಸ್ಪೇಟ್‌) ರಸಗೊಬ್ಬರ ಆಮದು ಮೇಲಿನ ಅತಿಯಾದ ಅವಲಂಬನೆಯನ್ನು ತಗ್ಗಿಸಿದೆ.

ಟಾಪ್ ನ್ಯೂಸ್

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

Udupi: 22 ವರ್ಷದ ಬಳಿಕ ಮನೆ ಸೇರಿಕೊಂಡ ವೃದ್ಧ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Uttar Pradesh: 6 ಪುರುಷರ ವರಿಸಿ ವಂಚಿಸಿದ ಯುವತಿಯ ಗ್ಯಾಂಗ್‌ ಜೈಲಿಗೆ

Shiradi

Road Project: ಶಿರಾಡಿ ಘಾಟ್‌ ಸುರಂಗ ಯೋಜನೆಗೆ ಡಿಪಿಆರ್‌ ರಚಿಸಿ: ಕೇಂದ್ರ ಸೂಚನೆ

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

Hosur ವಿಮಾನ ನಿಲ್ದಾಣಕ್ಕೆ 2 ಸ್ಥಳ ನಿಗದಿಪಡಿಸಿದ ತಮಿಳುನಾಡು

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

GST: ಖರೀದಿ, ಮಾರಾಟ ದರದ ವ್ಯತ್ಯಾಸಕ್ಕಷ್ಟೇ 18% ಜಿಎಸ್‌ಟಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Basavaraj-horatti

Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್‌ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?

BGV-Gandhi-bharatha

Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ

1-horoscope

Daily Horoscope: ಬೇರೆಯವರ ತಪ್ಪುಗಳನ್ನು ಹುಡುಕಬೇಡಿ, ಜವಾಬ್ದಾರಿ ಕೊಂಚ ಬದಲಾವಣೆ

Munirathna

Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.